PRABHAVAA.COM

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಯೋಜನೆಗಳಿಗೆ ಅರ್ಜಿ ಆಹ್ವಾನಿಸುವ ಕರಪತ್ರ ಬಿಡುಗಡೆ

Bengaluru Urban:

Font size:

ಅಕ್ಟೋಬರ್‌ 15ರ ಒಳಗಾಗಿ ಅರ್ಜಿ ಸಲ್ಲಿಸಿ, ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ : ಎಂ ಡಾ.ಜಿ.ಪರಮೇಶ್ವರ

ಬೆಂಗಳೂರು, ಆಗಸ್ಟ್‌ 27 : ಇಂದು ವಿಕಾಸಸೌಧದಲ್ಲಿ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ 4 ಯೋಜನೆಗಳಿಗೆ 2026-27ನೇ ಸಾಲಿಗೆ ಅರ್ಜಿ ಆಹ್ವಾನಿಸುವ ಕರಪತ್ರಗಳನ್ನು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಬಿಡುಗಡೆಗೊಳಿಸಿದರು.

ಆ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ಆರ್ಯ ವೈಶ್ಯ ಸಮುದಾಯದವರಿಗೆ ಶಿಕ್ಷಣ, ಸ್ವಯಂ ಉದ್ಯೋಗ, ಕೃಷಿಗೆ ಮತ್ತು ಆಹಾರ ತಯಾರಿಕೆಗೆ ಸಂಬಂಧಪಟ್ಟ ಯೋಜನೆಗಳನ್ನು ರೂಪಿಸಿ, ಆರ್ಯ ವೈಶ್ಯ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ʼಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮʼವನ್ನು ಸ್ಥಾಪಿಸಿರುವುದಾಗಿ ತಿಳಿಸಿದರು.

ಕಳೆದ 7 ವರ್ಷಗಳಿಂದ ನಿಗಮಕ್ಕೆ ಬಿಡುಗಡೆಯಾದ ಅನುದಾನ ಹಾಗೂ ಮರುಪಾವತಿ ಮೊತ್ತ ಸೇರಿಸಿ ಒಟ್ಟು ₹85 ಕೋಟಿಗಳಲ್ಲಿ 16,785 ಫಲಾನುಭವಿಗಳಿಗೆ ಸಾಲ - ಸಬ್ಸಿಡಿ ಮತ್ತು ಶುಲ್ಕ ಮರುಪಾವತಿ ನೀಡಿ ಶೇ.96ರಷ್ಟು ಪ್ರಗತಿ ಸಾಧಿಸಲಾಗಿರುತ್ತದೆ ಎಂದು ಮಾಹಿತಿ ನೀಡಿದರು.

ಮುಂದುವರೆದು, ₹11 ಕೋಟಿ ಸಾಲ ಮರುಪಾವತಿಯನ್ನು ಪಡೆಯುವಲ್ಲಿ ನಿಗಮವು ಯಶಸ್ವಿಯಾಗಿರುತ್ತದೆ ಹಾಗೂ 740 ಫಲಾನುಭವಿಗಳು ಪೂರ್ಣಪ್ರಮಾಣದಲ್ಲಿ ಸಾಲ ಮರುಪಾವತಿ ಮಾಡಿರುವುದು ಈ ನಿಗಮದ ವಿಶಿಷ್ಟ ಸಾಧನೆಯಾಗಿದೆ ಎಂದರು.

2026-27ನೇ ಸಾಲಿಗೆ ಎಲ್ಲಾ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಕ್ಟೋಬರ್‌ 15ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಆರ್ಯ ವೈಶ್ಯ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತೆ ಡಿಸಿಎಂ ಮನವಿ ಮಾಡಿದರು.

ಈ ಸಂದರ್ಭದಲ್ಲಿ ನಿಗಮದ ಅಧ್ಯಕ್ಷರಾದ ಕೆ.ವಿ.ರಾಮ್‌ ಪ್ರಸಾದ್‌, ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್‌ ಕಟಾರಿಯಾ, ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾದ ದೀಪಶ್ರೀ ಕೆ. ಉಪಸ್ಥಿತರಿದ್ದರು.

Comments

Leave a Comment

Prev Post ಕರ್ನಾಟಕ ಸರ್ಕಾರದ ತುರ್ತು ಆದೇಶ – 2026ರ ಖರೀಫ್ ಹಂಗಾಮಿಗೆ ಬರಗಾಲ ಪೀಡಿತ ತಾಲ್ಲೂಕುಗಳ ಘೋಷಣೆ
Next Post *ಶಾಲಾ ಮಕ್ಕಳಿಗೆ ಉಚಿತ ಪುಸ್ತಕ, ಬ್ಯಾಗ್ ವಿತರಣೆ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News