PRABHAVAA.COM

ನ್ಯಾಯಬೆಲೆ ಅಂಗಡಿಗಳಲ್ಲಿನ ಸರ್ವರ್ ಸಮಸ್ಯೆ ಪರಿಹಾರಕ್ಕೆ ತಕ್ಷಣದ ಕ್ರಮ: ಸಚಿವ ರಿಜ್ವಾನ್ ಅರ್ಷದ್

Bengaluru Urban:

Font size:

ನ್ಯಾಯಬೆಲೆ ಅಂಗಡಿಗಳಲ್ಲಿನ ಸರ್ವರ್ ಸಮಸ್ಯೆ ಪರಿಹಾರಕ್ಕೆ ತಕ್ಷಣದ ಕ್ರಮ: ಸಚಿವ ರಿಜ್ವಾನ್ ಅರ್ಷದ್

ನ್ಯಾಯಬೆಲೆ ಅಂಗಡಿಗಳಲ್ಲಿನ ಸರ್ವರ್ ಸಮಸ್ಯೆ ಪರಿಹಾರಕ್ಕೆ ತಕ್ಷಣದ ಕ್ರಮ: ಸಚಿವ ರಿಜ್ವಾನ್ ಅರ್ಷದ್

ನ್ಯಾಯಬೆಲೆ ಅಂಗಡಿಗಳಲ್ಲಿನ ಸರ್ವರ್ ಸಮಸ್ಯೆಯಿಂದ ಸಾರ್ವಜನಿಕರಿಗೆ ಪಡಿತರ ಪಡೆಯಲು ತೊಂದರೆಯಾಗುತ್ತಿರುವ ಕುರಿತು ಸಾರ್ವಜನಿಕರಿಂದ ಹಲವು ದೂರುಗಳು ಬಂದಿರುವ ಹಿನ್ನೆಲೆಯಲ್ಲಿ, ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ತಾಂತ್ರಿಕ ತಂಡದೊಂದಿಗೆ ಆದ್ಯತೆ ಮೇರೆಗೆ ಸಭೆ ನಡೆಸಿ ಚರ್ಚಿಸಲಾಗಿದೆ ಎಂದು ಸಚಿವ ರಿಜ್ವಾನ್ ಅರ್ಷದ್ ತಿಳಿಸಿದ್ದಾರೆ.

ಅಸ್ತಿತ್ವದಲ್ಲಿರುವ ಸಾಫ್ಟ್‌ವೇರ್‌ನ ಸಾಮರ್ಥ್ಯವನ್ನು ಪರಿಶೀಲಿಸಲು ಲೋಡ್ ಟೆಸ್ಟಿಂಗ್ ನಡೆಸಿ, ಅಗತ್ಯಕ್ಕೆ ಅನುಗುಣವಾಗಿ ಸಾಫ್ಟ್‌ವೇರ್‌ ಅನ್ನು ಉನ್ನತೀಕರಿಸುವಂತೆ ತಾಂತ್ರಿಕ ತಂಡ ಸಲಹೆ ನೀಡಿದೆ. ಸರ್ವರ್ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಲ್ಪಿಸಿ, ಅರ್ಹ ಫಲಾನುಭವಿಗಳಿಗೆ ಯಾವುದೇ ಅನಗತ್ಯ ತೊಂದರೆಯಾಗದಂತೆ ಸಕಾಲದಲ್ಲಿ ಪಡಿತರ ದೊರೆಯುವಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಕರ್ನಾಟಕದಾದ್ಯಂತ ಪಡಿತರ ವಿತರಣಾ ವ್ಯವಸ್ಥೆಯನ್ನು ಮತ್ತಷ್ಟು ಸುಗಮ, ಪರಿಣಾಮಕಾರಿ ಹಾಗೂ ವಿಶ್ವಾಸಾರ್ಹಗೊಳಿಸಲು ಸಾಫ್ಟ್‌ವೇರ್‌ ಉನ್ನತೀಕರಣ ಸೇರಿದಂತೆ ಅಗತ್ಯ ತಾಂತ್ರಿಕ ಕ್ರಮಗಳನ್ನು ಕೈಗೊಳ್ಳಲಾಗುವುದು. ಸಾರ್ವಜನಿಕರಿಗೆ ಉತ್ತಮ ಹಾಗೂ ತಡೆರಹಿತ ಸೇವೆ ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಸಚಿವ ರಿಜ್ವಾನ್ ಅರ್ಷದ್ ತಿಳಿಸಿದ್ದಾರೆ.

ಭದ್ರತಾ ಆಹಾರ ಕಾಯ್ದೆಯಡಿ ಜಿಲ್ಲಾವಾರು ನಿಗದಿಪಡಿಸಿರುವ ಆಹಾರ ಧಾನ್ಯಗಳ ಕೋಟಾದ ಎತ್ತುವಳಿಯನ್ನು ಚುರುಕುಗೊಳಿಸಲಾಗುತ್ತಿದೆ. ಧಾರವಾಡ, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ಗದಗ, ಹಾಸನ, ಉಡುಪಿ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳು ಈಗಾಗಲೇ ಶೇ.100ರಷ್ಟು ಆಹಾರ ಧಾನ್ಯಗಳನ್ನು ಎತ್ತುವಳಿ ಮಾಡಿಕೊಂಡು ಮುಂಚೂಣಿಯಲ್ಲಿವೆ.

ಕಡಿಮೆ ಪ್ರಮಾಣದ ಎತ್ತುವಳಿ ಇರುವ ಜಿಲ್ಲೆಗಳಲ್ಲಿ ಪ್ರಕ್ರಿಯೆಯನ್ನು ಮತ್ತಷ್ಟು ವೇಗಗೊಳಿಸಿ, ಈ ತಿಂಗಳ ಅಂತ್ಯದೊಳಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಶೇ.100ರಷ್ಟು ಆಹಾರ ಧಾನ್ಯಗಳ ಎತ್ತುವಳಿ ಪೂರ್ಣಗೊಳ್ಳುವಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು.

ನ್ಯಾಯಬೆಲೆ ಅಂಗಡಿಗಳಲ್ಲಿನ ಸರ್ವರ್ ಸಮಸ್ಯೆಯಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಕೇಂದ್ರ ಸರ್ಕಾರದ ಸೂಚನೆಯಂತೆ ಎರಡು ತಿಂಗಳ ಪಡಿತರವನ್ನು ಒಟ್ಟಿಗೆ ವಿತರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಸರ್ವರ್ ಮೇಲೆ ಹೆಚ್ಚಿದ ಒತ್ತಡ ಉಂಟಾಗಿದೆ.

ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಪಾಲುದಾರರೊಂದಿಗೆ ಸಭೆ ನಡೆಸಿ, ಸಾಫ್ಟ್‌ವೇರ್‌ನ ಸಾಮರ್ಥ್ಯವನ್ನು ಪರಿಶೀಲಿಸಲು ಲೋಡ್ ಟೆಸ್ಟಿಂಗ್ ನಡೆಸಲಾಗಿದೆ. ಅಗತ್ಯವಿರುವಂತೆ ಸಾಫ್ಟ್‌ವೇರ್ ಉನ್ನತೀಕರಣಕ್ಕೆ ತಾಂತ್ರಿಕ ತಂಡಕ್ಕೆ ಸೂಚಿಸಲಾಗಿದೆ.

ಕರ್ನಾಟಕದಾದ್ಯಂತ ಪಡಿತರ ವಿತರಣಾ ವ್ಯವಸ್ಥೆಯನ್ನು ಹೆಚ್ಚು ಸುಗಮ, ವೇಗ, ಪರಿಣಾಮಕಾರಿ ಹಾಗೂ ವಿಶ್ವಾಸಾರ್ಹಗೊಳಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು.

ಜನರ ಹಕ್ಕಿನ ಪಡಿತರವನ್ನು ತಲುಪಿಸುವಲ್ಲಿ ಯಾವುದೇ ರಾಜಿ ಇಲ್ಲ. ಅರ್ಹ ಪ್ರತಿಯೊಬ್ಬ ಫಲಾನುಭವಿಗೂ ಸಕಾಲದಲ್ಲಿ ಪಡಿತರ ತಲುಪಿಸುವುದು ನಮ್ಮ ಬದ್ಧತೆ.

Comments

Leave a Comment

Prev Post *ಶಾಲಾ ಮಕ್ಕಳಿಗೆ ಉಚಿತ ಪುಸ್ತಕ, ಬ್ಯಾಗ್ ವಿತರಣೆ
Next Post ಭಾರತ ಹಸಿರು ಇಂಧನ ಹೂಡಿಕೆ ಕೇಂದ್ರವಾಗಿ ಹೊರಹೊಮ್ಮುತ್ತಿದೆ ;ಪ್ರಲ್ಹಾದ ಜೋಶಿ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News