PRABHAVAA.COM

ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್ ಚಂದ್ರು ಅಯ್ಯರ್ ಗೆ ಆತ್ಮೀಯ ಬೀಳ್ಕೊಡುಗೆ

Bengaluru Urban:

Font size:

ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್ ಚಂದ್ರು ಅಯ್ಯರ್ ಗೆ ಆತ್ಮೀಯ ಬೀಳ್ಕೊಡುಗೆ

ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್ ಚಂದ್ರು ಅಯ್ಯರ್ ಗೆ ಆತ್ಮೀಯ ಬೀಳ್ಕೊಡುಗೆ

ಬೆಂಗಳೂರು: ರಾಜ್ಯದಲ್ಲಿ ನಾಲ್ಕು ವರ್ಷಗಳ‌ ಕಾಲ ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್ ಮತ್ತು ದಕ್ಷಿಣ ಭಾರತದ ಡೆಪ್ಯಟಿ ವಾಣಿಜ್ಯ ಕಮಿಷನರ್ ಆಗಿದ್ದ ಚಂದ್ರು ಅಯ್ಯರ್ ಅವರ ನಾಲ್ಕು ವರ್ಷಗಳ ಸೇವಾವಧಿಯಲ್ಲಿ ಕರ್ನಾಟಕ ಮತ್ತು ಬ್ರಿಟನ್ ವ್ಯಾಪಾರ ಸಂಬಂಧ ರಚನಾತ್ಮಕ ಬಲವರ್ಧನೆ ಕಂಡಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬಣ್ಣಿಸಿದ್ದಾರೆ.

ಇಲ್ಲಿಂದ ವರ್ಗಾವಣೆಯಾಗಿ ಹೋಗುತ್ತಿರುವ ಅಯ್ಯರ್ ಅವರಿಗೆ ಗುರುವಾರ ರಾತ್ರಿ ಏರ್ಪಡಿಸಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, "ಚಂದ್ರು ಅವರು ನಮ್ಮವರೇ ಆಗಿಬಿಟ್ಟಿದ್ದರು. ಇವರ ಸೇವಾವಧಿಯಲ್ಲಿ ದ್ವಿಪಕ್ಷೀಯ ಸಕ್ರಿಯತೆ ಶಿಷ್ಟಾಚಾರವನ್ನು ಮೀರಿತ್ತು. ಅವರು ನಮ್ಮೊಂದಿಗೆ ಹೂಡಿಕೆಯನ್ನು ಹೆಚ್ಚು ಮಾಡಲು ಪ್ರಾಮಾಣಿಕವಾಗಿ ಶ್ರಮಿಸಿದ ಶ್ರೇಯಸ್ಸನ್ನು ಹೊಂದಿದ್ದಾರೆ," ಎಂದಿದ್ದಾರೆ.

ಚಂದ್ರು ಅವರು ಇಲ್ಲಿಗೆ ಬಂದಾಗ ಬೆಂಗಳೂರಿನಿಂದ ಲಂಡನ್ ನಡುವೆ ವಾರಕ್ಕೆ ಕೇವಲ ಏಳು ನೇರ ವಿಮಾನಗಳಿದ್ದವು. ಈಗ ಇವುಗಳ ಸಂಖ್ಯೆ 34ಕ್ಕೇರಿದೆ. ಈ ಸೌಕರ್ಯದ ಹಿಂದೆ ಚಂದ್ರು ಅವರ ಪರಿಶ್ರಮವಿದೆ" ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇವರ ಕಾರ್ಯಾವಧಿಯಲ್ಲಿ ಕರ್ನಾಟಕ ಮತ್ತು ಬ್ರಿಟನ್ ನಡುವೆ ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್, ಸಂಶೋಧನೆ, ಅಭಿವೃದ್ಧಿ ವಲಯಗಳಲ್ಲಿ ಬಾಂಧವ್ಯವು ವಿಸ್ತರಿಸಿದೆ. ಈಗ ಇವರು ವರ್ಗಾವಣೆಯಾಗಿ ಹೋಗುತ್ತಿರುವುದು ನಮಗೆ ನಷ್ಟದ ಸಂಗತಿಯಾಗಿದೆ ಎಂದು ಪಾಟೀಲ ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಬ್ರಿಟಿಷ್ ಹೈಕಮಿಷನರ್ ಕಚೇರಿಯ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

Comments

Leave a Comment

Prev Post ಗ್ರಾಮೀಣ ಕುಡಿವ ನೀರು ಯೋಜನೆಗೆ ಅರಣ್ಯ ಅನುಮತಿಗೆ ಪ್ರಯತ್ನ: ಈಶ್ವರ ಖಂಡ್ರೆ
Next Post ರೈತರ ಜಮೀನು ವಾಪಸ್ ಕೊಡಿ ಇಲ್ಲ ಬಡ್ಡಿ ಸಮೇತ ಪರಿಹಾರ ಕೊಡಿ - ನಿಖಿಲ್ ಕುಮಾರಸ್ವಾಮಿ ಆಗ್ರಹ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News