PRABHAVAA.COM

ರೈತರ ಜಮೀನು ವಾಪಸ್ ಕೊಡಿ ಇಲ್ಲ ಬಡ್ಡಿ ಸಮೇತ ಪರಿಹಾರ ಕೊಡಿ - ನಿಖಿಲ್ ಕುಮಾರಸ್ವಾಮಿ ಆಗ್ರಹ

Bengaluru Urban:

Font size:

ನೈಸ್ ಟೋಲ್ ದಂಧೆ ವಿರುದ್ಧ ನಿಖಿಲ್ ಕುಮಾರಸ್ವಾಮಿ ಸಮರ

ಬೆಂಗಳೂರು, ಆ.28-ನೈಸ್ ಯೋಜನೆ ಹೆಸರಲ್ಲಿ 26 ವರ್ಷಗಳಿಂದ ನಡೆಯುತ್ತಿರುವ ಅವ್ಯವಹಾರದ ವಿರುದ್ಧ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ಇಂದು ಜೆ.ಪಿ ಭವನದಲ್ಲಿ 'ನಥಿಂಗ್ ನೈಸ್' ಎಂಬ ಜನಪರ ಅಭಿಯಾನಕ್ಕೆ ಚಾಲನೆ ನೀಡಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ನೈಸ್ ಸಂಸ್ಥೆಯಿಂದ ಕಳೆದ 26 ವರ್ಷಗಳಿಂದ ಹಗರಣ ನಡೆಯುತ್ತಿದೆ. ಸಾರ್ವಜನಿಕರ ಹೆಸರಿನಲ್ಲಿ ನೈಸ್ ಅಭಿವೃದ್ಧಿಯಾಗಿಲ್ಲ. ರೈತರಿಗೆ ಪರಿಹಾರ ಸಿಕ್ಕಿಲ್ಲ, ಜನರ ಭೂಮಿ ಪಡೆದು ಅಭಿವೃದ್ಧಿ ಮಾಡಿಲ್ಲ. ನೈಸ್ ರಸ್ತೆಯಲ್ಲಿ ಓಡಾಡುವವರಿಗೆ ಸಮಸ್ಯೆ ಆಗುತ್ತಿದೆ.

1997 ರಲ್ಲಿ ಫ್ರೇಮ್ ವರ್ಕ್ ಅಗ್ರಿಮೆಂಟ್ ಆಗಿದೆ. ಆದರೆ ಫ್ರೇಮ್ ವರ್ಕ್ ಅಗ್ರಿಮೆಂಟ್ ಉಲ್ಲಂಘನೆಯಾಗಿದೆ. ಯೋಜನೆಯಂತೆ 5 ಟೌನ್ ಶಿಪ್ ಆಗಬೇಕಿತ್ತು, ಆದರೆ ಈ ಯೋಜನೆ ಇನ್ನೂ ಸಂಪೂರ್ಣವಾಗಿಲ್ಲ. 111 ಕಿ.ಮೀ ರಸ್ತೆ ಯೋಜನೆ ಪೂರ್ಣವಾಗಿಲ್ಲ. ಫೆರಿಫೆರಲ್ ರಸ್ತೆಯಲ್ಲಿ 2193 ಎಕರೆ ಭೂಸ್ವಾಧೀನ ಆಗಬೇಕಿತ್ತು, ಆದರೆ 554 ಎಕರೆ ಹೆಚ್ಚುವರಿಯಾಗಿ ಜಮೀನು ವಶಪಡಿಸಿಕೊಂಡಿದ್ದಾರೆ ಎಂದು ಅವರು ಆರೋಪಿಸಿದರು .

ಸಾರ್ವಜನಿಕ ಮೂಲಭೂತ ಸೌಕರ್ಯಗಳಿಗೆ ಇದನ್ನು ಬಳಸಬೇಕಿತ್ತು. ಆದರೆ ರಿಯಲ್ ಎಸ್ಟೇಟ್ ಮಾಡುತ್ತಿದ್ದಾರೆ, ಖಾಸಗಿಯಾಗಿ ಬಳಕೆ ಆಗುತ್ತಿದೆ. ಯೋಜನೆಯಂತೆ ಕಾಂಕ್ರೀಟ್ ರಸ್ತೆ ಆಗಬೇಕಿತ್ತು ಆದರೆ ಡಾಂಬರು ರಸ್ತೆ ಮಾತ್ರ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

PWD, KIADB ಭೂಸ್ವಾಧೀನಕ್ಕೆ ನೋಡಲ್ ಇಲಾಖೆಯಾಗಿರುತ್ತದೆ. 23 ವರ್ಷ ಆದರೂ ರೈತರಿಗೆ ಪರಿಹಾರ ಸಿಕ್ಕಿಲ್ಲ. ಶೇ.65-70 ರಷ್ಟು ರೈತರು ಬೀದಿಯಲ್ಲಿದ್ದಾರೆ. ಜಯಚಂದ್ರ ಜಂಟಿ ಸದನ ಸಮಿತಿ ವರದಿಯಲ್ಲಿ 22 ಷರತ್ತುಗಳಲ್ಲಿ 16 ಷರತ್ತು ಉಲ್ಲಂಘನೆಯಾಗಿದೆ ಎಂದು ವರದಿ ಇದೆ. ಹೈಕೋರ್ಟ್ ಜುಲೈನಲ್ಲಿ ಸ್ಪಷ್ಟ ಆದೇಶ ಮಾಡಿದೆ. ಭೂಮಿ ಕಳೆದುಕೊಂಡ ರೈತರಿಗೆ ಜಮೀನು ವಾಪಸ್ ಕೊಡಲು ಆದೇಶ ಮಾಡಿದೆ. ಸರ್ಕಾರ ಮೌನವಾಗಿ ಇರಬಾರದು, ಮಧ್ಯಪ್ರವೇಶ ಮಾಡಬೇಕು.

* ನೈಸ್ ರಸ್ತೆ ಟೋಲ್ ಸಂಗ್ರಹ ನಿಲ್ಲಬೇಕು*

ಕೂಡಲೇ ನೈಸ್ ರಸ್ತೆ ಟೋಲ್ ಸಂಗ್ರಹ ನಿಲ್ಲಬೇಕು. ರಸ್ತೆ ಪೂರ್ಣ ಆಗದೇ ಯಾಕೆ ಟೋಲ್ ಸಂಗ್ರಹ ಮಾಡುತ್ತೀರಾ? ರಸ್ತೆ ಪೂರ್ಣ ಆಗದೇ ಜನ ಯಾಕೆ ಟೋಲ್ ಕಟ್ಟಬೇಕು? ಎಂದು ನಿಖಿಲ್ ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ನಥಿಂಗ್ ನೈಸ್ ಅಭಿಯಾನ:l

ನೈಸ್ ವಿರುದ್ಧ ನಥಿಂಗ್ ನೈಸ್ ಅಭಿಯಾನ ಶುರು ಮಾಡಿದ್ದೇವೆ. ಹೈಕೋರ್ಟ್ ಆದೇಶ ಪ್ರತಿ ಸೇರಿದಂತೆ ನೈಸ್ ನ ಸಂಪೂರ್ಣ ದಾಖಲಾತಿ ಇರುವ nothingnice.net ವೆಬ್‌ಸೈಟ್ ಬಿಡುಗಡೆ ಮಾಡಿದ್ದೇವೆ. ಇದೊಂದು ಜನರ ಪರವಾದ ಅಭಿಯಾನ, ಇದು ಜನರ ಆಂದೋಲನವಾಗಬೇಕು.

ಈ ಸರ್ಕಾರ ರಿಯಲ್ ಎಸ್ಟೇಟ್ ಪರ ಇದೆ. ನೂತನ ಸಿಎಂ ಅವರು ರಿಯಲ್ ಎಸ್ಟೇಟ್ ಫೋರಂನ CEO ಆಗಿದ್ದಾರೆ ಎಂದು ವ್ಯಂಗ್ಯವಾಡಿದರು.

ಸರ್ಕಾರ ನೈಸ್ ಯೋಜನೆ ಟೇಕ್ ಓವರ್ ಮಾಡಬೇಕು. ರೈತರ ಜಮೀನು ವಾಪಸ್ ಕೊಡಬೇಕು, ಇಲ್ಲದಿದ್ದರೆ ಪರಿಹಾರ ಹಣವನ್ನು ಬಡ್ಡಿ ಸಮೇತ ಸರ್ಕಾರ ಕೊಡಬೇಕು. ನೈಸ್ ವಿರುದ್ಧ ಶೀಘ್ರವೇ ಬೀದಿಗಿಳಿದು ಹೋರಾಟ ಮಾಡುತ್ತೇವೆ.

ನೈಸ್ ಯೋಜನೆಯನ್ನು ತಂದವರು ದೇವೇಗೌಡರು, ಆದರೆ ಫ್ರೇಮ್ ವರ್ಕ್ ಅಗ್ರಿಮೆಂಟ್ ಆಗಿದ್ದು ಜೆ.ಎಚ್. ಪಟೇಲ್ ಕಾಲದಲ್ಲಿ. ಬಿಡದಿ ಟೌನ್ ಶಿಪ್ ಯೋಜನೆಗೂ ಕುಮಾರಸ್ವಾಮಿ ಅವರಿಗೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.

ಮೋದಿ ಭೇಟಿ ವಿಚಾರ: ಇದು ಸೌಹಾರ್ದಯುತ ಭೇಟಿ. NDA ಹೇಗೆ ಒಗ್ಗಟ್ಟಾಗಿ ಹೋಗಬೇಕು, 2028 ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ಬಗ್ಗೆ ಕೆಲಸ ಮಾಡಲು ಕೆಲವು ಸಲಹೆಗಳನ್ನು ನೀಡಿದ್ದಾರೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಾಜಿ ಶಾಸಕರಾದ ದೊಡ್ಡಪ್ಪಗೌಡ ಪಾಟೀಲ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಕೆ.ಎ ತಿಪ್ಪೇಸ್ವಾಮಿ, ಹೆಚ್.ಎಂ ರಮೇಶ್ ಗೌಡ, ತೂಪಲ್ಲಿ ಚೌಡರೆಡ್ಡಿ, ವಕ್ತಾರರಾದ ಗಂಗಾಧರ್ ಮೂರ್ತಿ, ದೇವರಾಜು ಅವರು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Comments

Leave a Comment

Prev Post ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್ ಚಂದ್ರು ಅಯ್ಯರ್ ಗೆ ಆತ್ಮೀಯ ಬೀಳ್ಕೊಡುಗೆ
Next Post ಪೊಲೀಸರ ಸಂಕಷ್ಟ ಭತ್ಯೆ ಶೇ.50 ರಷ್ಟು ಹೆಚ್ಚಳ: ಸಿಎಂ ಡಿ ಕೆ ಶಿವಕುಮಾರ್

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News