PRABHAVAA.COM

"ದೆಹಲಿಯಲ್ಲಿ ಮೇಕೆದಾಟು ಅಸ್ತ್ರ - ಸುಪ್ರೀಂ ಕೋರ್ಟ್ ಹಿರಿಯ ವಕೀಲ ಶ್ಯಾಮ್ ದಿವಾನ್ ಜೊತೆ ಸಚಿವ ಚಲುವರಾಯಸ್ವಾಮಿ ಮಹತ್ವದ ಸಮಾಲೋಚನೆ"

India:

Font size:

"ಕಾವೇರಿ, ಮೇಕೆದಾಟು, ಕೃಷ್ಣಾ ಮೇಲ್ದಂಡೆ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಬಲ ಹೋರಾಟಕ್ಕೆ ರಣತಂತ್ರ - ದೆಹಲಿಯಲ್ಲಿ ಸಚಿವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ"

ನವದೆಹಲಿ, ರಾಜ್ಯದ ಹಿತಾಸಕ್ತಿಯ ಪ್ರಮುಖ ಅಂತಾರಾಜ್ಯ ನದಿ ನೀರು ಹಂಚಿಕೆ ವ್ಯಾಜ್ಯಗಳು ಮತ್ತು ನೀರಾವರಿ ಯೋಜನೆಗಳ ಕುರಿತು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಸೋಮವಾರ ನವದೆಹಲಿಯಲ್ಲಿ ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯವಾದಿ ಶ್ಯಾಮ್ ದಿವಾನ್ ಅವರ ಕಚೇರಿಯಲ್ಲಿ ಮಹತ್ವದ ಕಾನೂನು ಸಮಾಲೋಚನಾ ಸಭೆ ನಡೆಸಿದರು.

ಸಭೆಯಲ್ಲಿ ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಕೆಬಿಜೆಎನ್‌ಎಲ್ ವ್ಯವಸ್ಥಾಪಕ ನಿರ್ದೇಶಕ ಕೃಷ್ಣಮೂರ್ತಿ ಕುಲಕರ್ಣಿ, ಐಎಸ್‌ಡಬ್ಲ್ಯೂ ಮುಖ್ಯ ಎಂಜಿನಿಯರ್ ನಂದೀಶ್, ಸುಪ್ರೀಂ ಕೋರ್ಟ್‌ನ AOR ನಿಶಾಂತ್ ಪಾಟೀಲ್ ಹಾಗೂ ರಾಜ್ಯದ ಕಾನೂನು ತಂಡದ ಹಿರಿಯ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಸಭೆಯಲ್ಲಿ ಮುಖ್ಯವಾಗಿ ಕಾವೇರಿ ನದಿ ನೀರು ವಿವಾದದ ಐತಿಹಾಸಿಕ ಹಿನ್ನೆಲೆ, ಪ್ರಸ್ತುತ ಜಲಾನಯನ ಪ್ರದೇಶದಲ್ಲಿನ ನೈಜ ನೀರಿನ ಪರಿಸ್ಥಿತಿ ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ ಕೈಗೊಳ್ಳಬೇಕಾದ ಮುಂದಿನ ಕಾನೂನಾತ್ಮಕ ಕ್ರಮಗಳ ಕುರಿತು ವಿಸ್ತೃತ ಸಮಾಲೋಚನೆ ನಡೆಸಲಾಯಿತು.

ಇದೇ ವೇಳೆ ಮೇಕೆದಾಟು ಯೋಜನೆಯ ಮಹತ್ವವನ್ನು ಪ್ರಸ್ತಾಪಿಸಿದ ಸಚಿವರು, ಪ್ರಸ್ತುತ ಹವಾಮಾನ ವೈಪರೀತ್ಯ ಹಾಗೂ ಪರಿಸರದಲ್ಲಿನ ಏರುಪೇರುಗಳಿಂದಾಗಿ ಮಳೆಯ ಪ್ರಮಾಣ ಕ್ಷೀಣಿಸಿರುವ ಇಂತಹ ಸಂಕಷ್ಟದ ಸಂದರ್ಭದಲ್ಲಿ ಮೇಕೆದಾಟು ಅಣೆಕಟ್ಟು ನಿರ್ಮಾಣವು ಎರಡೂ ರಾಜ್ಯಗಳ ರೈತರಿಗೆ ಮತ್ತು ಸಾರ್ವಜನಿಕರಿಗೆ ಎಷ್ಟು ಫಲಪ್ರದ ಮತ್ತು ಉಪಯುಕ್ತ ಎಂಬುದಕ್ಕೆ ಇಂದಿನ ಪರಿಸ್ಥಿತಿಗಿಂತ ದೊಡ್ಡ ನಿದರ್ಶನ ಮತ್ತೊಂದಿಲ್ಲ ಎಂದು ಹಿರಿಯ ವಕೀಲರಿಗೆ ಮನವರಿಕೆ ಮಾಡಿಕೊಟ್ಟರು.

ಜೊತೆಗೆ ಕೃಷ್ಣಾ ಮೇಲ್ದಂಡೆ ಯೋಜನೆ (UKP) ಗೆ ಸಂಬಂಧಿಸಿದಂತೆ ಮುಳುಗಡೆ ಪ್ರದೇಶದ ಸವಾಲುಗಳು, ಭೂಸ್ವಾಧೀನ, ಪರಿಹಾರ ವಿತರಣೆ, ಸಂಧಾನ ಪ್ರಕ್ರಿಯೆ ಹಾಗೂ ನ್ಯಾಯಾಲಯದಲ್ಲಿನ ಕಾನೂನು ವ್ಯಾಜ್ಯಗಳ ತ್ವರಿತ ಇತ್ಯರ್ಥಕ್ಕೆ ರೂಪಿಸಬೇಕಾದ ಕಾರ್ಯತಂತ್ರಗಳ ಕುರಿತು ಗಂಭೀರ ಚರ್ಚೆ ನಡೆಸಲಾಯಿತು. ನೆರೆ ರಾಜ್ಯಗಳೊಂದಿಗಿನ ಜಲವಿವಾದಗಳಲ್ಲಿ ಕರ್ನಾಟಕದ ಹಕ್ಕೊತ್ತಾಯ ಮತ್ತು ರೈತರ ಹಿತರಕ್ಷಣೆ ಖಚಿತಪಡಿಸಿಕೊಳ್ಳಲು ಸುಪ್ರೀಂ ಕೋರ್ಟ್‌ನಲ್ಲಿ ಮಂಡಿಸಬೇಕಾದ ಪ್ರಬಲ ವಾದಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು

Comments

Leave a Comment

Prev Post ಕಾಂಗ್ರೆಸ್ ಸರಕಾರ ಕಿತ್ತೊಗೆಯಲು ಹೋರಾಟ- ಯಡಿಯೂರಪ್ಪ
Next Post ಶೀಘ್ರವೇ ಇತರ ಬರ ಪೀಡಿತ ತಾಲ್ಲೂಕುಗಳ ಘೋಷಣೆ , ಮಾರ್ಗಸೂಚಿ ಅನುಸಾರವೇ ಕ್ರಮ ಸಿಎಂ ಡಿ ಕೆ ಶಿವಕುಮಾರ್

ರೈತರ ಸಬಲೀಕರಣಕ್ಕಾಗಿ "PM ಕುಸುಮ್-2.0'ಗೆ ಕೇಂದ್ರ ಸಿದ್ಧತೆ

ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಮಾಹಿತಿ * 500 GW ಪಳೆಯುಳಿಕೆ ರಹಿತ ಇಂಧನ ಗುರಿ ಸಾಧಿಸಲು ಕೃಷಿ ಭೂಮಿ, ಛಾವಣಿಗಳು ಮತ್ತು ಗ್ರಾಮೀಣ ಉದ್ಯಮಗಳಲ್ಲಿ ವಿಕೇಂದ್ರೀಕೃತ ನವೀಕರಿಸಿದ ಇಂಧನ ಸಂಪನ್ಮೂಲಗಳು ಅಗತ್ಯ. * PM-KUSUM ಅಡಿಯಲ್ಲಿ 10 ಲಕ್ಷಕ್ಕೂ ಹೆಚ್ಚು ಸ್ವತಂತ್ರ ಸೌರ ಪಂಪ್ ಸ್ಥಾಪನೆ * 13 ಲಕ್ಷ ಗ್ರಿಡ್-ಸಂಪರ್ಕಿತ ಪಂಪ್‌ಗಳ ಸೌರೀಕರಣ

ಸೋಮವಾರದಿಂದಲೇ ತಂಬಾಕು ಖರೀದಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಗೆ ಭರವಸೆ ಕೊಟ್ಟ ಕೇಂದ್ರ ಸಚಿವ ಪಿಯೂಷ್ ಗೋಯಲ್

ವಿದೇಶ ಮಾರುಕಟ್ಟೆಗಳಿಗೆ ರಫ್ತು, ಹೊಸ ವಿದೇಶಿ ಮಾರುಕಟ್ಟೆಗಳ ಅನ್ವೇಷಣೆಗೆ ವಾಣಿಜ್ಯ ಸಚಿವರ ಸೂಚನೆ ಸಭೆಯಲ್ಲಿ ಮೈಸೂರು, ಚಾಮರಾಜನಗರ ಹಾಸನ ಜಿಲ್ಲೆಗಳ ಜನಪ್ರತಿನಿಧಿಗಳು, ನಾಯಕರು ಭಾಗಿ ಸಚಿವ ಹೆಚ್ಡಿಕೆ ಅವರ ಪಾರ್ಲಿಮೆಂಟ್ ಭವನದ ಕಚೇರಿಯಲ್ಲಿ ನಡೆದ ಸಭೆ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕಳಕಳಿಗೆ ಕೇಂದ್ರ ಸ್ಪಂದನೆ ಎತ್ತಿನಹೊಳೆ ಯೋಜನೆಗೆ ಅರಣ್ಯ ಪ್ರದೇಶ ಬಳಕೆಗೆ ಷರತ್ತಿನ ಒಪ್ಪಿಗೆ ಕೊಟ್ಟ ಕೇಂದ್ರ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕಳಕಳಿಗೆ ಕೇಂದ್ರ ಸ್ಪಂದನೆ ಎತ್ತಿನಹೊಳೆ ಯೋಜನೆಗೆ ಅರಣ್ಯ ಪ್ರದೇಶ ಬಳಕೆಗೆ ಷರತ್ತಿನ ಒಪ್ಪಿಗೆ ಕೊಟ್ಟ ಕೇಂದ್ರ

ನಾಡು, ನುಡಿ, ಜಲ ವಿಚಾರದಲ್ಲಿ ಪಕ್ಷ ಭೇದ ಮರೆತು ಒಂದಾಗಿರುತ್ತೇವೆ:ಬಸವರಾಜ ಬೊಮ್ಮಾಯಿ

ನಾಡು, ನುಡಿ, ಜಲ ವಿಚಾರದಲ್ಲಿ ಪಕ್ಷ ಭೇದ ಮರೆತು ಒಂದಾಗಿರುತ್ತೇವೆ:ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಪ್ರೀತಿ, ಮೋದಿ ಜತೆ ಮದುವೆ ಎಂದು ಟೀಕಿಸಿದ್ದ ಖರ್ಗೆಗೆ ಹೆಚ್.ಡಿ. ದೇವೇಗೌಡರ ತಿರುಗೇಟು ರಾಜ್ಯಸಭೆಯಲ್ಲಿಯೇ ಖರ್ಗೆಗೆ ಖಡಕ್ ಉತ್ತರ ಕೊಟ್ಟ ಮಾಜಿ ಪ್ರಧಾನಿಗಳು

ಕಾಂಗ್ರೆಸ್ ಎಸಗಿದ ದ್ರೋಹದ ವಿವರ ಕೊಟ್ಟ ಗೌಡರು ನನ್ನ ಮತ್ತು ಮೋದಿ ನಡುವಿನ ಮೈತ್ರಿ 2014ರಲ್ಲಿಯೇ ಆರಂಭವಾಯಿತು

ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಆತ್ಮೀಯ ಬೀಳ್ಕೊಡುಗೆ

ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಆತ್ಮೀಯ ಬೀಳ್ಕೊಡುಗೆ

Read all News