ಮೈಸೂರು ದಸರಾ – ಸಿಎಂ ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ನಿರ್ಧಾರಗಳು
ಮೈಸೂರು ದಸರಾ ಪ್ರಗತಿ ಪರಿಶೀಲನಾ ಸಭೆ – ಮುಖ್ಯಾಂಶಗಳು
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಮೈಸೂರು ದಸರಾ ಆಚರಣೆ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳು ಕೈಗೊಳ್ಳಲಾಯಿತು.
ಸಭೆಯಲ್ಲಿ ದಕ್ಷಿಣ ಭಾರತದ ಎಲ್ಲಾ ಮುಖ್ಯಮಂತ್ರಿಗಳನ್ನು ಆಹ್ವಾನಿಸಲು ತೀರ್ಮಾನಿಸಲಾಯಿತು. ರಾಜ್ಯಗಳ ಕಲಾತಂಡಗಳಿಗೆ ಪ್ರದರ್ಶನ ನೀಡಲು ಅವಕಾಶ ನೀಡುವ ನಿರ್ಧಾರವೂ ಕೈಗೊಳ್ಳಲಾಯಿತು.
ದಸರಾ ಸಂದರ್ಭದಲ್ಲಿ ಏರ್ ಷೋ ನಡೆಸುವ ಕುರಿತು ಕೇಂದ್ರ ರಕ್ಷಣಾ ಸಚಿವರೊಂದಿಗೆ ಚರ್ಚೆ ನಡೆಸಲು ಸಿಎಂ ಸೂಚಿಸಿದರು. ಏರ್ ಷೋ, ಭೂಸೇನೆ, ವಾಯುಸೇನೆ ಹಾಗೂ ನೌಕಾಪಡೆಯ ತಂಡಗಳನ್ನು ಟ್ಯಾಬ್ಲೋ ಮತ್ತು ಕವಾಯತಿನಲ್ಲಿ ಭಾಗವಹಿಸಲು ಮನವಿ ಮಾಡುವುದಾಗಿ ತಿಳಿಸಿದರು.
ಟಿಕೆಟ್ ಪಡೆದವರಿಗೆ ಸೂಕ್ತ ಆಸನ ವ್ಯವಸ್ಥೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು. ವಿವಿಧ ದೇಶಗಳ ರಾಯಭಾರಿಗಳು ಹಾಗೂ ಅಧಿಕಾರಿಗಳನ್ನು ಆಹ್ವಾನಿಸಲು ಸೂಚಿಸಲಾಯಿತು.
ಚಿತ್ರಸಂತೆ, ಫ್ಲೀ ಮಾರ್ಕೆಟ್, ವಿಂಟೇಜ್ ಕಾರ್ ರ್ಯಾಲಿ, ರಂಗೋಲಿ ಸ್ಪರ್ಧೆ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸಲು ಸೂಚನೆ ನೀಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಪ್ರತಿದಿನ ಒಬ್ಬ ಸಚಿವರನ್ನು ಕಾರ್ಯಕ್ರಮಗಳ ಮೇಲ್ವಿಚಾರಣೆಗೆ ನಿಯೋಜಿಸಲು ನಿರ್ದೇಶಿಸಲಾಯಿತು.
ಡ್ರೋನ್ ಷೋ ಆಯೋಜನೆಗೂ ಉದ್ದೇಶ ವ್ಯಕ್ತವಾಯಿತು. ಭಾರತೀಯ ಸೇನಾಪಡೆಗಳು, ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಚಲನಚಿತ್ರ ವಾಣಿಜ್ಯ ಮಂಡಳಿ, ಇಸ್ರೋ, ಡಿಆರ್ಡಿಓ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಸಂಸ್ಥೆಗಳನ್ನು ಆಹ್ವಾನಿಸಲು ತೀರ್ಮಾನಿಸಲಾಯಿತು.
ರಾಜ್ಯದ ಎಲ್ಲ ಭಾಗಗಳನ್ನು ಪ್ರತಿನಿಧಿಸುವ ಕಲಾತಂಡಗಳಿಗೆ ಅವಕಾಶ ನೀಡುವಂತೆ ಸೂಚಿಸಲಾಯಿತು. ಮೈಸೂರಿನ ಅರಮನೆ ಹಾಗೂ ಪ್ರಮುಖ ತಾಣಗಳ ಕುರಿತು ಕಿರುಚಿತ್ರ ನಿರ್ಮಿಸಿ ವ್ಯಾಪಕ ಪ್ರಚಾರ ನೀಡಲು ಸಿಎಂ ಸೂಚಿಸಿದರು.







Comments
Leave a Comment