PRABHAVAA.COM

ಗ್ರಾ.ಪಂ.ಕೆರೆಗಳ ಹೊಸ ಒತ್ತುವರಿ ಮಾಡಿದರೆ ಕ್ರಿಮಿನಲ್ ಕೇಸ್ ದಾಖಲು: ಈಶ್ವರ ಖಂಡ್ರೆ

Bengaluru Urban:

Font size:

4828ಕೆರೆಯ 11671 ಎಕರೆ ತೆರವಿಗೆ ಶೀಘ್ರ ಕ್ರಮ: ಈಶ್ವರ ಖಂಡ್ರೆ

ಗ್ರಾ.ಪಂ.ಕೆರೆಗಳ ಹೊಸ ಒತ್ತುವರಿ ಮಾಡಿದರೆ ಕ್ರಿಮಿನಲ್ ಕೇಸ್ ದಾಖಲು: ಈಶ್ವರ ಖಂಡ್ರೆ

4828ಕೆರೆಯ 11671 ಎಕರೆ ತೆರವಿಗೆ ಶೀಘ್ರ ಕ್ರಮ: ಈಶ್ವರ ಖಂಡ್ರೆ

ಮೇಲ್ಮೈ ಜಲ ಮೂಲ ರಕ್ಷಿಸದಿದ್ದರೆ ಜಲಕ್ಷಾಮ ಕಾಡಲಿದೆ: ಈಶ್ವರ ಖಂಡ್ರೆ
ಬೆಂಗಳೂರು, ಸೆ.4: ಗ್ರಾಮಪಂಚಾಯತಿಗೆ ಸೇರಿದ ಮತ್ತು ನಿರ್ವಹಿಸುತ್ತಿರುವ ಯಾವುದೇ ಕೆರೆಯನ್ನು ಒತ್ತುವರಿ ಮಾಡಿದ್ದರೆ ನಿರ್ದಾಕ್ಷಿಣ್ಯವಾಗಿ ತೆರವು ಮಾಡಿಸಲಾಗುವುದು ಮತ್ತು ಒತ್ತುವರಿದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ದೇಶದಲ್ಲೇ 2ನೇ ಅತಿ ಹೆಚ್ಚು ಬರಡು ಭೂಮಿ ಇರುವ ರಾಜ್ಯವಾಗಿದ್ದು, ಗ್ರಾಮೀಣ ಕುಡಿಯುವ ನೀರು ಪೂರೈಕೆ ದೊಡ್ಡ ಸವಾಲಾಗಿದೆ. ಅಂತರ್ಜಲ ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ಮೇಲ್ಮೈ ಜಲ ಮೂಲಗಳನ್ನು ರಕ್ಷಿಸದಿದ್ದರೆ ಮುಂದೆ ನೀರಿಗೆ ಹಾಹಾಕಾರ ಎದುರಾಗಲಿದೆ ಎಂದರು.
ಜಲಶಕ್ತಿ ಸಚಿವಾಲಯ ದೆಹಲಿಯಲ್ಲಿ ಆಯೋಜಿಸಿದ್ದ 2 ದಿನಗಳ ಸುಸ್ಥಿರ ಜಲ ಕುರಿತ ಇಲಾಖಾ ಶೃಂಗಸಭೆಯಲ್ಲಿ ನಾನು ಭಾಗಿಯಾಗಿ, ಪ್ರಧಾನಿಯವರ ಸಮ್ಮುಖದಲ್ಲಿ ರಾಜ್ಯ ಸರ್ಕಾರ ಜಲ ಸಂರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಾತ್ಯಕ್ಷಿಕೆ ಪ್ರಸ್ತುತ ಪಡಿಸಿದ್ದಾಗಿ ಹೇಳಿದರು.
ರಾಜ್ಯದ ಬಹುತೇಕ ಕಡೆ ಭೂಮಿಯೊಳಗೆ ಹೆಬ್ಬಂಡೆಗಳು ಮತ್ತು ಲ್ಯಾಟರೈಟ್ ಇರುವ ಕಾರಣ ಮಳೆಯ ನೀರು ಇಂಗದೆ ಅಂತರ್ಜಲ ಕುಸಿಯುತ್ತಿದೆ. ಅತಿಯಾದ ಅಂತರ್ಜಲ ಬಳಕೆಯಿಂದಲೂ ಭೂಮಿಯೊಳಗಿನ ಜಲ ಮಟ್ಟ ಕುಸಿದಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಮೇಲ್ಮೈ ಜಲ ಮೂಲಗಳೇ ಜೀವನಾಧಾರವಾಗಿದ್ದು, ನಾವು ಕೆರೆ, ಕಟ್ಟೆ, ಸರೋವರ, ನದಿಗಳನ್ನು ಸಂರಕ್ಷಿಸದಿದ್ದರೆ ಜಲಕ್ಷಾಮವೇ ಎದುರಾಗುತ್ತದೆ ಎಂದರು.
ಇಡೀ ಭೂಮಿಯ ಸುತ್ತ ನೀರಿದೆ. ಆದರೆ ಕುಡಿಯುವ ನೀರು ಇರುವುದು ಶೇ.3ರಷ್ಟು ಮಾತ್ರ. ಹೀಗಾಗಿ ಜಲಮೂಲಗಳನ್ನು ರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಅದಕ್ಕಾಗಿಯೇ ನಾನು ಶೃಂಗ ಸಭೆಯ ಸಮಾರೋಪ ಸಮಾರಂಭದಲ್ಲಿ ಪ್ರಧಾನಿಯವರ ಸಮ್ಮುಖದಲ್ಲೇ ಕೆರೆ, ಸರೋವರ, ನದಿಗಳ ನೀರು ತ್ಯಾಜ್ಯ ಸೇರ್ಪಡೆಯಿಂದ ಕಲುಷಿತಗೊಳ್ಳದಂತೆ ಹಾಗೂ ಒತ್ತುವರಿಯಾಗದಂತೆ ಸಂರಕ್ಷಿಸಲು ರಾಷ್ಟ್ರೀಯ ಯೋಜನೆ ರೂಪಿಸಲು ಒತ್ತಾಯಿಸಿದ್ದೇನೆ ಎಂದರು.
ರಾಜ್ಯದ 26,589 ಹಳ್ಳಿಗಳಲ್ಲಿ 4 ಕೋಟಿ 45 ಲಕ್ಷ ಜನರು ವಾಸಿಸುತ್ತಿದ್ದಾರೆ. ಅಂದರೆ ರಾಜ್ಯದ ಒಟ್ಟು ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಜನರು ಹಳ್ಳಿಗಳಲ್ಲಿದ್ದಾರೆ. ಇವರೆಲ್ಲರಿಗೂ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವುದು ದೊಡ್ಡ ಸವಾಲಾಗಿದ್ದು, ಸರ್ಕಾರ ಮುಂದಿನ 30 ವರ್ಷಗಳಲ್ಲಿ ಹೆಚ್ಚಳವಾಗುವ ಜನಸಂಖ್ಯೆಯನ್ನೂ ಗಮನದಲ್ಲಿಟ್ಟುಕೊಂಡು ಏಕಗ್ರಾಮ ಮತ್ತು ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳಿಸುತ್ತಿದೆ, ಮೇಲ್ಮೈ ಜಲದ ಗುಣಮಟ್ಟ ಪರೀಕ್ಷೆಗೆ 1.51 ಲಕ್ಷ ಮಹಿಳೆಯರಿಗೆ ತರಬೇತಿ ನೀಡಿದ್ದು ಅವರಿಗೆ ಕ್ಷೇತ್ರೀಯ ಪರೀಕ್ಷಾ ಕಿಟ್ ನೀಡಲಾಗಿದೆ ಎಂದರು.
11,671 ಎಕರೆ ಕೆರೆ ಒತ್ತುವರಿ ತೆರವಿಗೆ ಕ್ರಮ
ರಾಜ್ಯದ ಗ್ರಾ.ಪಂ. ವ್ಯಾಪ್ತಿಯಲ್ಲಿ 32504 ಕೆರೆಗಳಿದ್ದು 11498 ಕೆರೆ ಒತ್ತುವರಿ ಆಗಿತ್ತು. ಈ ಪೈಕಿ 6670 ಕೆರೆ ಒತ್ತುವರಿ ತೆರವು ಮಾಡಲಾಗಿದ್ದು, ಇನ್ನೂ 4828 ಕೆರೆಗಳ 11671 ಎಕರೆ ಒತ್ತುವರಿ ತೆರವು ಮಾಡಬೇಕಿದೆ. ಕೂಡಲೇ ಕೆರೆ ಒತ್ತುವರಿ ತೆರೆವಿಗೆ ಸೂಚನೆ ನೀಡಿದ್ದು, ಇನ್ನು ಮುಂದೆ ಯಾರೇ ಹೊಸದಾಗಿ ಕೆರೆ ಒತ್ತುವರಿ ಮಾಡಿದರೆ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ತಿಳಿಸಿದರು.
*ಜಲ ಬಜೆಂಟಿಂಗ್ ಮಾಡಿದ ಪ್ರಥಮ ರಾಜ್ಯ ಕರ್ನಾಟಕ: *
ಇಡೀ ದೇಶದಲ್ಲಿ ವಾಟರ್ ಬಜೆಟಿಂಗ್ ಮಾಡಿದ ಪ್ರಥಮ ರಾಜ್ಯ ಕರ್ನಾಟಕವಾಗಿದೆ. ಇದರಿಂದ ನಿರ್ದಿಷ್ಟ ಭೌಗೋಳಿಕ ಪ್ರದೇಶದಲ್ಲಿ ಲಭ್ಯವಿರುವ ನೀರಿನ ಪ್ರಮಾಣ ಮತ್ತು ಆ ಪ್ರದೇಶದ ನೀರಿನ ಹಾಲಿ ಬೇಡಿಕೆ, ಭವಿಷ್ಯದ ಬೇಡಿಕೆ ಲೆಕ್ಕಹಾಕಿ ಸಮತೋಲಿತವಾಗಿ ನೀರು ಪೂರೈಕೆಗೆ ವೈಜ್ಞಾನಿಕ ಹಾಗೂ ವ್ಯವಸ್ಥಿತ ಯೋಜನೆ ರೂಪಿಸಲು ಸಹಕಾರಿಯಾಗಿದೆ ಎಂದರು.
ರಾಜ್ಯದ 268 ಹಳ್ಳಿಗಳಲ್ಲಿ ನಿರಂತರ ಕುಡಿಯುವ ನೀರು ಪೂರೈಕೆ ಯೋಜನೆ ಜಾರಿಗೆ ತಂದಿದ್ದು, ಇದರಿಂದಾಗಿ ಶೇ.7ರಷ್ಟು ಕುಡಿಯುವ ನೀರಿನ ಹಾಗೂ ಶೇ.12 ರಷ್ಟು ನೀರು ಪಂಪ್ ಮಾಡುವ ವಿದ್ಯುತ್ ಅವಧಿಯ ಉಳಿತಾಯವಾಗಿದೆ ಎಂದರು.
ಜಿಲ್ಲಾ ನೀರು ಮತ್ತು ನೈರ್ಮಲ್ಯ ಅಭಿಯಾನದಡಿ ಡಿಸ್ಟ್ರಿಕ್ಟ್ ಫೆಡರಲ್ ಕೌಂಟ್ ಮಾಡಿ ಜಿಲ್ಲೆಯಲ್ಲಿ ರಾಜ್ಯಮಟ್ಟದಲ್ಲಿ ಸಮಿತಿ ರಚಿಸಿದ್ದೇವೆ. ಇದು ರಾಜ್ಯದಲ್ಲಿ ಶಾಶ್ವತ ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಂಡಿದ್ದೇವೆ ಎಂಬ ವಿಷಯವನ್ನೂ ನಾನು ಶೃಂಗಸಭೆಯಲ್ಲಿ ತಿಳಿಸಿದ್ದೇನೆ ಎಂದರು.

Comments

Leave a Comment

Prev Post ಪಿಎಂ ಸೇತು ಯೋಜನೆಯಲ್ಲಿ ಉದ್ಯಮಗಳ ಸಹಭಾಗಿತ್ವ ಮುಖ್ಯ: ಎಂ ಬಿ ಪಾಟೀಲ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News