25.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Karnataka:

Font size:

25.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಜಿಲ್ಲೆಯಲ್ಲಿ ಬಿಸಿಲು, ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಗಾಳಿಯ ಒತ್ತಡ ಹೆಚ್ಚಿದ್ದರೆ ಸಂಜೆ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಒತ್ತಡ ಹೆಚ್ಚಿದ್ದರೆ ಉಳಿದ ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯ ಸಾಧ್ಯತೆಗಳಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಕೆಲವು ಭಾಗಗಳಲ್ಲಿ ಜೋರು ಇದ್ದರೆ ಉಳಿದ ಹೆಚ್ಚಿನ ಭಾಗಗಳಲ್ಲಿ ಮೋಡಕ್ಕೆ ತಕ್ಕಷ್ಟು ಮಳೆಯ ಇರಲಾರದು. ಮಾರ್ಚ್ 27ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ನಿರೀಕ್ಷೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮಾರ್ಚ್ 27ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ ಮತ್ತು ಎಪ್ರಿಲ್ ಮೊದಲ ವಾರದ ತನಕ ಮುಂದುವರಿಯುವ ಲಕ್ಷಣಗಳಿವೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ದಾವಣಗೆರೆ, ವಿಜಯನಗರ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಗಾಳಿಯ ಒತ್ತಡ ಹೆಚ್ಚಿದ್ದರೆ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ಮಾರ್ಚ್ 27ರಿಂದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾದರೂ, 30ರಿಂದ ಬಹುತೇಕ ಭಾಗಗಳಲ್ಲಿ ಮಳೆಯ ನಿರೀಕ್ಷೆ ಇದೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಿತ್ರದುರ್ಗ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಒತ್ತಡ ಹೆಚ್ಚಿದ್ದರೆ ಉಳಿದ ಜಿಲ್ಲೆಗಳಲ್ಲಿಯೂ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಈ ಮಳೆಯು ಎಪ್ರಿಲ್ ಮೊದಲ ವಾರದ ತನಕ ಮುಂದುವರಿಯುವ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಪ್ರತ್ಯಾವರ್ತ ಮಾರುತಗಳು (Anti-cyclonic circulation) ದುರ್ಬಲಗೊಂಡಿದ್ದರೂ, ಮುಂದುವರಿದಿದೆ. ಸಮುದ್ರದ ಕಡೆಯಿಂದ ಬೀಸುತ್ತಿರುವ ತೇವಾಂಶ ಭರಿತ ಗಾಳಿಯ ಜೊತೆಗೆ ಅಧಿಕ ತಾಪಮಾನದ ಕಾರಣದಿಂದ ಸ್ಥಳೀಯ ತೇವಾಂಶದ ಮೋಡಗಳೂ ಸೇರುವುದರಿಂದ ಇಂತಹ ಪ್ರದೇಶಗಳಲ್ಲೆ ಮಳೆಯಾಗಬಹುದೆಂದು ಹೇಳಲು ಸಾಧ್ಯವಿಲ್ಲ.

Comments

Leave a Comment

Prev Post ಕಾಂಗ್ರೆಸ್ ಪ್ರೀತಿ, ಮೋದಿ ಜತೆ ಮದುವೆ ಎಂದು ಟೀಕಿಸಿದ್ದ ಖರ್ಗೆಗೆ ಹೆಚ್.ಡಿ. ದೇವೇಗೌಡರ ತಿರುಗೇಟು ರಾಜ್ಯಸಭೆಯಲ್ಲಿಯೇ ಖರ್ಗೆಗೆ ಖಡಕ್ ಉತ್ತರ ಕೊಟ್ಟ ಮಾಜಿ ಪ್ರಧಾನಿಗಳು
Next Post ಹೆಣ್ಣು ಧೈರ್ಯದಿಂದ ಇದ್ದರೆ ಮನೆಗೆ ಬೆಳಕಿದ್ದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

21.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

21.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

world forest day

Read all News