PRABHAVAA.COM

ಅಕ್ಕ ಬಿಸಿನೆಸ್ ಫೋರಮ್ ವೇದಿಕೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಭಾರತದಲ್ಲಿ ಹೂಡಿಕೆ ಮಾಡಿ; ಕನ್ನಡ ಉದ್ದಿಮೆದಾರರಿಗೆ ಕೇಂದ್ರ ಸಚಿವರ ಕರೆ

:

Font size:

ಸರಕಾರದ ಸವಲತ್ತು ಬಳಸಿಕೊಂಡು ಉದ್ಯಮಿಗಳಾಗಿ, ಉದ್ಯೋಗ ಸೃಷ್ಟಿಸಿ

ಫಿಲಡೆಲ್ಫಿಯಾ 6 ಸೆಪ್ಟೆಂಬರ್ 2026

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತದ ಆರ್ಥಿಕತೆ ಸದೃಢವಾಗಿ ಏರುಗತಿಯಲ್ಲಿ ಮುಂದುವರೆದಿದ್ದು, ಬಂಡವಾಳ ಹೂಡಿಕೆಗೆ ಅತ್ಯುತ್ತಮ ವಾತಾವರಣವಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.

ಅಮೆರಿಕದ ಫಿಲಡೆಲ್ಫಿಯಾದಲ್ಲಿ ನಡೆಯುತ್ತಿರುವ ಅಕ್ಕ ರಜತ ಸಮ್ಮೇಳನದ ಅಂಗವಾಗಿ ಆಯೋಜಿಸಲಾಗಿದ್ದ ‘ಬಿಸಿನೆಸ್ ಫೋರಮ್–2026’ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರು ಮಾತನಾಡಿದರು.

ಭಾರತವು ಉದ್ಯಮಶೀಲತೆ, ತಂತ್ರಜ್ಞಾನ ಮತ್ತು ನವೋದ್ಯಮ ಕ್ಷೇತ್ರಗಳಲ್ಲಿ ನಾಗಾಲೋಟದಲ್ಲಿ ಮುಂದುವರೆದಿದ್ದು, ಭಾರತ ಸರಕಾರವು ಉದ್ಯಮಿಗಳು ಹಾಗೂ ಯುವಜನರಿಗೆ ಹಲವು ರೀತಿಯ ಸವಲತ್ತುಗಳು ಮತ್ತು ಅವಕಾಶಗಳನ್ನು ಒದಗಿಸುತ್ತಿದೆ. ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರು ಸೇರಿದಂತೆ ಭಾರತೀಯರು ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಭಾರತದಲ್ಲಿ ಉದ್ಯಮಗಳನ್ನು ಸ್ಥಾಪಿಸುವ ಮೂಲಕ ಉದ್ಯೋಗ ಸೃಷ್ಟಿಗೆ ಮುಂದಾಗಬೇಕು ಎಂದು ಕರೆ ನೀಡಿದರು.

"ನಿಮ್ಮ ತಾಂತ್ರಿಕ ಜ್ಞಾನ ಮತ್ತು ಅನುಭವವನ್ನು ಭಾರತದಲ್ಲಿ ಉದ್ಯಮ ಕಟ್ಟಲು ಬಳಸಿಕೊಳ್ಳಿ. ಕೇವಲ ಉದ್ಯೋಗ ಹುಡುಕುವವರಾಗದೆ, ಉದ್ಯೋಗ ನೀಡುವ ಉದ್ಯಮಿಗಳಾಗಿ. ನಿಮ್ಮ ಅನುಭವ ಮತ್ತು ಪರಿಣತಿಯನ್ನು ದೇಶದ ಅಭಿವೃದ್ಧಿಗೆ ಬಳಸಿಕೊಳ್ಳುವ ಮೂಲಕ ಹೊಸ ಅವಕಾಶಗಳನ್ನು ಸೃಷ್ಟಿಸಬೇಕು" ಎಂದು ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.

ವಿಶೇಷವಾಗಿ ಅಮೆರಿಕ ಸೇರಿದಂತೆ ವಿದೇಶಗಳಲ್ಲಿ ತಂತ್ರಜ್ಞಾನ, ಕೈಗಾರಿಕೆ, ಉದ್ಯಮ ಹಾಗೂ ವೃತ್ತಿಪರ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವ ಭಾರತೀಯರು ತಮ್ಮ ಜ್ಞಾನ ಮತ್ತು ಅನುಭವವನ್ನು ಭಾರತದೊಂದಿಗೆ ಹಂಚಿಕೊಳ್ಳುವ ಮೂಲಕ ದೇಶದ ಆರ್ಥಿಕ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಬಹುದು ಎಂದು ಸಚಿವರು ಒತ್ತಿ ಹೇಳಿದರು.

ಬದಲಾಗುತ್ತಿರುವ ಜಾಗತಿಕ ಆರ್ಥಿಕ ಪರಿಸ್ಥಿತಿಯಲ್ಲಿ ಹೊಸ ಉದ್ಯಮಗಳು, ನವೀನ ಆಲೋಚನೆಗಳು ಹಾಗೂ ತಂತ್ರಜ್ಞಾನ ಆಧಾರಿತ ವ್ಯವಹಾರಗಳಿಗೆ ಹೆಚ್ಚಿನ ಅವಕಾಶಗಳಿವೆ. ಇಂತಹ ಅವಕಾಶಗಳನ್ನು ಗುರುತಿಸಿ ಯುವ ಉದ್ಯಮಿಗಳು ಮುನ್ನಡೆಯಬೇಕು ಎಂದು ಸಚಿವರು ಸಲಹೆ ನೀಡಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ವಿಕಸಿತ ಭಾರತ ಕನಸನ್ನು 2047ರ ಸಾಧಿಸಲು ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ ಕಾರ್ಯಕ್ರಮಗಳ ಮೂಲಕ ಮುನ್ನುಗ್ಗುತ್ತಿದೆ. ಅದಕ್ಕಾಗಿ ಭಾರತವು ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಜಾಗತಿಕವಾಗಿ ಮುನ್ನುಗುತ್ತಿದೆ ಎಂದು ಸಚಿವರು ಹೇಳಿದರು.

ನರೇಂದ್ರ ಮೋದಿ ಅವರ ಸಂಪುಟದಲ್ಲಿ ನಾನು ಎರಡು ಪ್ರಮುಖ ಇಲಾಖೆಗಳನ್ನು ನಿರ್ವಹಣೆ ಮಾಡುತ್ತಿದ್ದೇನೆ. ಕೈಗಾರಿಕೆ ಮತ್ತು ಉಕ್ಕು ಇಲಾಖೆಗಳು ರಾಷ್ಟ್ರದ ಅಭಿವೃದ್ಧಿಗೆ ಬೆನ್ನೆಲುಬಾಗಿವೆ. ತಂತ್ರಜ್ಞಾನ, ಉತ್ಪಾದನೆ ಮತ್ತು ನಾವಿನ್ಯತೆಗೆ ಎರಡು ಕ್ಷೇತ್ರಗಳು ಹೆಚ್ಚು ಒತ್ತು ನೀಡುತ್ತಿವೆ. ರಾಷ್ಟ್ರದಲ್ಲಿ ಮಾಲಿನ್ಯಮುಕ್ತ ಸಾರಿಗೆಗೆ ಒತ್ತು ನೀಡುವ ಉದ್ದೇಶದಿಂದ ₹10,900 ಕೋಟಿ ಬೃಹತ್ ಮತದ ಪಿಎಂಇ ಡ್ರೈವ್ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗಿದೆ. ಇವತ್ತು ನಮ್ಮ ರಸ್ತೆಗಳ ಮೇಲೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು, ಟ್ರಕ್ ಗಳು ಬಸ್ಸುಗಳು ಯಥೇಚ್ಛವಾಗಿ ಸಂಚರಿಸುತ್ತಿವೆ ಎಂದು ಸಚಿವ ಕುಮಾರಸ್ವಾಮಿ ಅವರು ಹೇಳಿದರು.

ಕ್ಷೇತ್ರವನ್ನು ಸದೃಢಗೊಳಿಸಲು ಆಟೋ ಬಿಡಬಾರದು ಸ್ವಾವಲಂಬನೆಗಾಗಿ ₹25,938 ಕೋಟಿ ಮತದ ಉತ್ಪಾದನಾ ಉತ್ತೇಜನ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗಿದೆ. 50 ಗಿಗಾವ್ಯಾಟ್ ಸಾಮರ್ಥ್ಯದ ಎಸಿಸಿ ಬ್ಯಾಟರಿ ಕಾರ್ಯಕ್ರಮದ ಅಡಿಯಲ್ಲಿ ₹18,100 ಕೋಟಿ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಅತಿ ಮುಖ್ಯವಾಗಿ ಭೂಮಿಯಲ್ಲಿನ ವಿರಳ ಖನಿಜ ಸಂಪನ್ಮೂಲಗಳನ್ನು ಉತ್ಪಾದಿಸಿ ಅಭಿವೃದ್ಧಿಪಡಿಸುವ ಮಹತ್ವಾಕಾಂಕ್ಷೆಯ ಯೋಜನೆಗಾಗಿ ₹7,280 ಕೋಟಿ ಮೊತ್ತದ ಯೋಜನೆ ರೂಪಿಸಲಾಗಿದೆ ಎಂದು ಕೇಂದ್ರ ಸಚಿವರು ವಿವರಿಸಿದರು.

ಉಕ್ಕು ಕ್ಷೇತ್ರದಲ್ಲಿ ಭಾರತವು ಹಿಂದೆಂದೂ ಕಂಡಿರದಷ್ಟು ದೃಢವಾದ ಅಭಿವೃದ್ಧಿಯನ್ನು ಸಾಧಿಸುತ್ತಿದೆ. 2030ರ ವೇಳೆಗೆ ಭಾರತವು ದೇಶಿಯವಾಗಿ 300 ದಶಲಕ್ಷ ಟನ್ ಉಕ್ಕನ್ನು ಉತ್ಪಾದಿಸುವ ಗುರಿಯನ್ನು ಹೊಂದಿದೆ. 2070ರ ಹೊತ್ತಿಗೆ ಉಕ್ಕು ಉತ್ಪಾದನೆಯಲ್ಲಿ ಇಂಗಾಲ ಹೊರಸುವಿಕೆಯನ್ನು ಶೂನ್ಯಮಟ್ಟಕ್ಕೆ ತರುವ ಗುರಿ ಹೊಂದಲಾಗಿದೆ. ಹಾಗೆಯೇ ದೇಶಿಯವಾಗಿ ಉಕ್ಕು ಉತ್ಪಾದನೆಗೆ ಶಕ್ತಿ ತುಂಬ ಉದ್ದೇಶದಿಂದ ₹6,322 ಮೊತ್ತದ ಉತ್ಪಾದನಾ ಉತ್ತೇಜನ ಯೋಜನೆ ಅನುಷ್ಠಾನಕ್ಕೆ ತರಲಾಗಿದೆ ಎಂದರು ಸಚಿವರು.

ಭಾರತವು ಜಗತ್ತಿನಲ್ಲಿಯೇ ಅತಿದೊಡ್ಡ ಉಕ್ಕು ಉತ್ಪಾದಕ ಮತ್ತು ಉಕ್ಕು ಗ್ರಾಹಕ ದೇಶವಾಗಿರುವುದು ಗಮನಾರ್ಹ. ಹೀಗಾಗಿ ಭಾರತವು ವಿವಿಧ ಆಯಾಮಗಳಲ್ಲಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತವು ಹೂಡಿಕೆಗೆ ಅತ್ಯುತ್ತಮವಾದ ರಾಷ್ಟ್ರವಾಗಿದೆ ಎಂದು ಕುಮಾರಸ್ವಾಮಿ ಅವರು ಪ್ರತಿಪಾದಿಸಿದರು.

ಅತ್ಯಂತ ಮಹತ್ವಪೂರ್ಣ ಚರ್ಚೆಗೆ ಕಾರಣವಾದ ಈ ವೇದಿಕೆಯಲ್ಲಿ ಶ್ರೀ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀಶ್ರೀಶ್ರೀ ಡಾ.ನಿರ್ಮಲಾನಂದ ಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಿದ್ದರು ,ಅಕ್ಕ ಕೂಟದ ಪ್ರಮುಖರಾದ ಅಮರನಾಥ ಗೌಡ, ಮಾಜಿ ಸಂಸದ ಕುಪೇಂದ್ರ ರೆಡ್ಡಿ, ಅಕ್ಕ ಅಧ್ಯಕ್ಷ ಮಧು ರಂಗಯ್ಯ ಹಾಗೂ ಅಮೆರಿಕದಲ್ಲಿರುವ ಭಾರತದ ಡೆಪ್ಯುಟಿ ಕಾನ್ಸುಲೇಟ್ ಜನರಲ್ ವಿಶಾಲ್ ಹರ್ಷ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಅಲ್ಲದೆ, ಈ ವೇದಿಕೆಯಲ್ಲಿ ಉದ್ಯಮಿಗಳು, ವೃತ್ತಿಪರರು, ತಂತ್ರಜ್ಞಾನ ಕ್ಷೇತ್ರದ ಪರಿಣತರು ಹಾಗೂ ವಿವಿಧ ಕ್ಷೇತ್ರಗಳ ಪ್ರತಿನಿಧಿಗಳು ಭಾಗವಹಿಸಿ ಭಾರತ–ಅಮೆರಿಕ ನಡುವಿನ ಉದ್ಯಮ, ಹೂಡಿಕೆ, ತಂತ್ರಜ್ಞಾನ ಮತ್ತು ವೃತ್ತಿಪರ ಸಹಕಾರದ ಕುರಿತು ಚರ್ಚಿಸಿದರು.

Comments

Leave a Comment

Prev Post ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ರಜತ ಮಹೋತ್ಸವದಲ್ಲಿ ಸಿದ್ದರಾಮಯ್ಯ ಭಾವನಾತ್ಮಕ ಭಾಷಣ
Next Post ಕರ್ನಾಟಕ ಸರ್ಕಾರದಿಂದ ವೃತ್ತಿಪರ ಶಿಕ್ಷಣ ಪ್ರವೇಶ ನಿಯಮಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ವಿಶೇಷ ಮೀಸಲಾತಿ ಘೋಷಣೆ.

ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟಕ್ಕೆ ₹10.61 ಕೋಟಿ ಲಾಭ.

ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟಕ್ಕೆ ₹10.61 ಕೋಟಿ ಲಾಭ.

ಬಾಗ್ಮನೆ ಸಾಧನೆ ದೇಶವೇ ಹೆಮ್ಮೆಪಡುವಂತದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ಬಾಗ್ಮನೆ ಸಾಧನೆ ದೇಶವೇ ಹೆಮ್ಮೆಪಡುವಂತದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

₹6,000 ಕೋಟಿ ಹೂಡಿಕೆಗೆ ಆ್ಯಕ್ಸಿಸ್‌ಕೇಡ್ಸ್‌ ಏರೊಸ್ಪೇಸ್‌ ಒಲವು: ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ

* ಮೂರು ವರ್ಷಗಳಲ್ಲಿ ವೈಮಾಂತರಿಕ್ಷ, ರಕ್ಷಣೆ, ಎಂಆರ್‌ಒ, ತಯಾರಿಕಾ ಕ್ಲಸ್ಟರ್‌ ಅಭಿವೃದ್ಧಿ * 20 ಸಾವಿರ ಪ್ರತ್ಯಕ್ಷ ಹಾಗೂ 54 ಸಾವಿರ ಪರೋಕ್ಷ ಉದ್ಯೋಗ ಅವಕಾಶಗಳು ಸೃಷ್ಟಿ

ಎಂ.ಸಿ.ಸಿ.ಬ್ಯಾಂಕ್ ಕಾರ್ಯವ್ಯಾಪ್ತಿ ರಾಜ್ಯಕ್ಕೆ ವಿಸ್ತರಣೆ: ಅಧ್ಯಕ್ಷ ಅನಿಲ್ ಲೋಬೋ

ಎಂಸಿಸಿ ಬ್ಯಾಂಕ್: ದೇರಳಕಟ್ಟೆ ಮತ್ತು ಕಟಪಾಡಿಯಲ್ಲಿ ಹೊಸ ಶಾಖೆಗಳ ಉದ್ಘಾಟನೆ, 1,535 ಕೋಟಿ ರೂ. ವ್ಯವಹಾರ ಮೈಲಿಗಲ್ಲು

ಬ್ಯಾಂಕ್ ನೀಡುವ ಸಾಲದಿಂದ ಗ್ರಾಹಕರು ಆದಾಯ ಹೆಚ್ಚಿಸಿಕೊಳ್ಳಬೇಕು: ಬಸವರಾಜ ಬೊಮ್ಮಾಯಿ

ಬ್ಯಾಂಕ್ ನೀಡುವ ಸಾಲದಿಂದ ಗ್ರಾಹಕರು ಆದಾಯ ಹೆಚ್ಚಿಸಿಕೊಳ್ಳಬೇಕು: ಬಸವರಾಜ ಬೊಮ್ಮಾಯಿ

ಹೂಡಿಕೆ ಆಕರ್ಷಣೆಗೆ ಕೋಲ್ಕತ್ತಾದಲ್ಲಿ ರೋಡ್ ಶೋ ನಡೆಸಿದ ಸಚಿವ ಎಂ.ಬಿ.ಪಾಟೀಲ

ಹೂಡಿಕೆ ಆಕರ್ಷಣೆಗೆ ಕೋಲ್ಕತ್ತಾದಲ್ಲಿ ರೋಡ್ ಶೋ ನಡೆಸಿದ ಸಚಿವ ಎಂ.ಬಿ.ಪಾಟೀಲ

Read all News