PRABHAVAA.COM

ನೈಸ್ ಯೋಜನೆ; ಕಾನೂನಿನ ಚೌಕಟ್ಟಿನಲ್ಲೇ ಕ್ರಮ: ಸಿಎಂ ಡಿ ಕೆ ಶಿವಕುಮಾರ್ ಸ್ಪಷ್ಟನೆ

Bengaluru Rural:

Font size:

ಬರ ಪರಿಸ್ಥಿತಿ: ಇನ್ನೂ ಹಲವು ತಾಲೂಕು ಘೋಷಣೆ

ಬೆಂಗಳೂರು, ಸೆ.07:

"ನೈಸ್ ಯೋಜನೆ ಕುರಿತಂತೆ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡರೂ ಕಾನೂನು ಚೌಕಟ್ಟಿನಲ್ಲೇ ಕೈಗೊಳ್ಳಲಿದೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.

ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

ನೈಸ್ ಯೋಜನೆ ವಿಚಾರವಾಗಿ ರಾಜ್ಯ ಸರ್ಕಾರ ಕಾನೂನು ಉಲ್ಲಂಘಿಸಿ ಸಂಪುಟ ತೀರ್ಮಾನ ಕೈಗೊಂಡಿದೆ ಎಂದು ಬಹಿರಂಗ ಪತ್ರ ಬರೆದಿರುವ ಬಗ್ಗೆ ಗಮನ ಸೆಳೆದಾಗ, "ನಾವು ಏನು ಮಾಡಿದರೂ ಕಾನೂನು ಚೌಕಟ್ಟಿನಲ್ಲೇ ಮಾಡುತ್ತೇವೆ. ಕಾನೂನು ಅಭಿಪ್ರಾಯ ಪಡೆದುಕೊಳ್ಳುತ್ತೇವೆ. ಎಲ್ಲವನ್ನೂ ಮರುಪರಿಶೀಲನೆ ಮಾಡುತ್ತಿದ್ದೇವೆ. ಕಾನೂನು ಬಿಟ್ಟು ಏನನ್ನೂ ಮಾಡುವುದಿಲ್ಲ. ಕಾನೂನು ಉಲ್ಲಂಘನೆಯಾಗಿದ್ದರೆ ಕೋರ್ಟ್ ಇದೆ, ಹೋರಾಟ ಮಾಡಲಿ" ಎಂದು ತೀಕ್ಷ್ಣವಾಗಿ ಹೇಳಿದರು.

ಆಸ್ತಿ ಕಳೆದುಕೊಂಡ ರೈತರ ರಕ್ಷಣೆ ಸರ್ಕಾರದ ಜವಾಬ್ದಾರಿ:

"ರೈತರು ಆಸ್ತಿ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಅವರನ್ನು ರಕ್ಷಿಸುವುದು ಸರ್ಕಾರದ ಜವಾಬ್ದಾರಿ. ಹಿಂದಿನ ಸರ್ಕಾರಗಳು ಒಪ್ಪಂದಗಳಿಗೆ ಸಹಿ ಮಾಡಿ ಕೊಟ್ಟಿವೆ. ರೈತರು ಆಸ್ತಿ ಕಳೆದುಕೊಂಡಿದ್ದಾರೆ, ಅವರನ್ನು ರಕ್ಷಣೆ ಮಾಡಬೇಕು. ನನಗೂ ಪ್ರಜ್ಞೆ ಇದೆ. ಮನುಷ್ಯ ವಿದ್ಯಾವಂತನಾಗಿರದಿದ್ದರೂ ಬುದ್ಧಿವಂತನಾಗಿರಬೇಕು, ಸಾಮಾನ್ಯ ಪ್ರಜ್ಞೆ ಇರಬೇಕು” ಎಂದು ತಿರುಗೇಟು ನೀಡಿದರು.

ಇನ್ನಷ್ಟು ತಾಲ್ಲೂಕುಗಳಲ್ಲಿ ಬರ ಘೋಷಣೆ: ವೈಜ್ಞಾನಿಕ ವರದಿ ಆಧರಿಸಿ ಕ್ರಮ

ಬರ ವೀಕ್ಷಣೆಯ ಬಗ್ಗೆ ಕೇಳಿದಾಗ, "ರಾಜ್ಯದಲ್ಲಿ ಭೀಕರ ಬರದ ಪರಿಸ್ಥಿತಿ ನಿರ್ಮಾಣವಾಗಿದ್ದು, ಬರ ಘೋಷಣೆ ವಿಚಾರದಲ್ಲಿ ವೈಜ್ಞಾನಿಕ ಹಾಗೂ ತಾಂತ್ರಿಕ ವರದಿಗಳನ್ನು ಆಧರಿಸಿ 2–3 ಹಂತಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಹಾಗೂ ಇನ್ನೂ ಹಲವು ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗುವುದು" ಎಂದು ಹೇಳಿದರು.

"ಹಲವು ತಾಲ್ಲೂಕಿನಿಂದ ಬರದ ವರದಿಗಳು ಬರುತ್ತಿವೆ. ಇನ್ನೂ ಬಹಳ ತಾಲೂಕುಗಳು ಘೋಷಣೆಯಾಗುತ್ತವೆ. ಬಹಳ ಕಡೆ ಭೀಕರ ಬರ ಇದೆ. 21 ದಿನ ಮಳೆಯಾಗದ ಸ್ಥಳಗಳನ್ನು ಗುರುತಿಸಿ ತಾಂತ್ರಿಕ ವರದಿ ಆಧರಿಸಿ ತೀರ್ಮಾನ ಮಾಡಲಾಗುವುದು” ಎಂದರು.

ಶಾಸಕರು ಆತಂಕ ಪಡಬೇಡಿ: ಸಿಎಂ ಅಭಯ

“ಶಾಸಕರು ಯಾರೂ ಆತಂಕ ಪಡಬೇಡಿ. ಎಲ್ಲೆಲ್ಲಿ ಬರ ಇದೆ ಎಂಬುದನ್ನು ವೈಜ್ಞಾನಿಕವಾಗಿ ನಿರ್ಧರಿಸಬೇಕು. ಉಪಮುಖ್ಯಮಂತ್ರಿ ವರದಿಗಳನ್ನು ತರಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ್ದೇವೆ. ಒಂದೇ ಸಲ ಎಲ್ಲವನ್ನೂ ಮಾಡಲು ಆಗುವುದಿಲ್ಲ. ಹಂತಗಳಲ್ಲಿ ಪ್ರಕ್ರಿಯೆ ನಡೆಯುತ್ತಿದೆ” ಎಂದು ಹೇಳಿದರು.

ರೈತರ ಸಮಸ್ಯೆಗೆ ವಿಶೇಷ ಅಧಿವೇಶನ

"ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿರುವ ಹಿನ್ನೆಲೆಯಲ್ಲಿ ರೈತರ ಸಮಸ್ಯೆಗಳ ಕುರಿತು ಚರ್ಚಿಸಲು ವಿಶೇಷ ವಿಧಾನಸಭೆ ಅಧಿವೇಶನ ಕರೆದಿರುವುದಾಗಿ. ಬರಪೀಡಿತ ಪ್ರದೇಶಗಳ ವಾಸ್ತವ ಸ್ಥಿತಿಯನ್ನು ವೈಜ್ಞಾನಿಕವಾಗಿ ಪರಿಶೀಲಿಸಿ, ರೈತರಿಗೆ ಅಗತ್ಯ ನೆರವು ಒದಗಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ" ಎಂದರು.

Comments

Leave a Comment

Prev Post ಭೂಮಿಯ ಹಕ್ಕು, ರೈತರ ಬದುಕು, ಮತ್ತು ಕಾನೂನಿನ ಗೌರವವನ್ನು ತಲೆಕೆಳಗಾಗಿಸುವ ಸರ್ಕಾರದ ನಿರ್ಧಾರಗಳ ವಿರುದ್ಧ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ತೀವ್ರ ಆಕ್ರೋಶ
Next Post ಯುವಶಕ್ತಿಯೇ ಭಾರತದ ಭವಿಷ್ಯ; KPSCಗೆ ಕಾಯಕಲ್ಪ, ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಆದ್ಯತೆ: ಬಿ.ವೈ. ವಿಜಯೇಂದ್ರ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News