PRABHAVAA.COM

ಯುವಶಕ್ತಿಯೇ ಭಾರತದ ಭವಿಷ್ಯ; KPSCಗೆ ಕಾಯಕಲ್ಪ, ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಆದ್ಯತೆ: ಬಿ.ವೈ. ವಿಜಯೇಂದ್ರ

Ballari:

Font size:

ಯುವಕರೊಂದಿಗೆ ಮುಕ್ತ ಸಂವಾದದಲ್ಲಿ ಉದ್ಯೋಗ, ಶಿಕ್ಷಣ, AI, ಗ್ರಾಮೀಣ ಅಭಿವೃದ್ಧಿ ಕುರಿತು ಚರ್ಚೆ

ಬಳ್ಳಾರಿ/ ಕಂಪ್ಲಿ, ಸೆ. 7: ಭಾರತದ ಯುವಜನತೆಯನ್ನು ಸರಿಯಾದ ಶಿಕ್ಷಣ, ಕೌಶಲ್ಯ ಮತ್ತು ಉದ್ಯೋಗದೊಂದಿಗೆ ಸಜ್ಜುಗೊಳಿಸಿದರೆ ಯುವಶಕ್ತಿಯೇ ದೇಶದ ಅತಿದೊಡ್ಡ ಆಸ್ತಿಯಾಗಲಿದೆ. ಆದರೆ ಈ ಶಕ್ತಿಯನ್ನು ಸರಿಯಾದ ದಿಕ್ಕಿನಲ್ಲಿ ಬಳಸಲು ವಿಫಲವಾದರೆ ಅದೇ ಜನಸಂಖ್ಯಾ ಲಾಭಾಂಶ ಸಾಮಾಜಿಕ ಸಮಸ್ಯೆಯಾಗಿ ಪರಿಣಮಿಸಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಯುವಜನತೆ, ಉದ್ಯೋಗ, ಶಿಕ್ಷಣ, KPSC ಸುಧಾರಣೆ, ಕೃತಕ ಬುದ್ಧಿಮತ್ತೆ (AI) ಹಾಗೂ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ ಕುರಿತು ಯುವಕರೊಂದಿಗೆ ನಡೆದ ಮುಕ್ತ ಸಂವಾದದಲ್ಲಿ ಅವರು ಮಾತನಾಡಿದರು.

ಭಾರತದಲ್ಲಿ 35 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸುಮಾರು ಶೇ.65ರಷ್ಟಿದ್ದು, 2047ರೊಳಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ಗುರಿಯಲ್ಲಿ ಯುವಶಕ್ತಿಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಯುವಕರನ್ನು ಕೇವಲ ಉದ್ಯೋಗ ಹುಡುಕುವವರನ್ನಾಗಿ ಮಾಡುವ ಬದಲು ಉದ್ಯೋಗ ಸೃಷ್ಟಿಸುವ ಉದ್ಯಮಿಗಳು ಮತ್ತು ಉದ್ಯೋಗದಾತರನ್ನಾಗಿ ರೂಪಿಸುವ ಅಗತ್ಯವಿದೆ ಎಂದರು.

KPSCಗೆ ಹೊಸ ಕಾಯಕಲ್ಪ ಅಗತ್ಯ

KPSC ನೇಮಕಾತಿ ಪ್ರಕ್ರಿಯೆಯಲ್ಲಿ ಅಧಿಸೂಚನೆ, ಪರೀಕ್ಷೆ, ಫಲಿತಾಂಶ ಮತ್ತು ಸಂದರ್ಶನ ಸೇರಿದಂತೆ ಪ್ರತಿಯೊಂದು ಹಂತದಲ್ಲೂ ವರ್ಷಗಳ ವಿಳಂಬವಾಗುತ್ತಿರುವುದು ಯುವಕರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ನಾಲ್ಕೈದು ವರ್ಷಗಳ ಕಾಲ ತರಬೇತಿ ಪಡೆದು ನೇಮಕಾತಿಗಾಗಿ ಕಾಯುತ್ತಿರುವ ಲಕ್ಷಾಂತರ ಅಭ್ಯರ್ಥಿಗಳ ಭವಿಷ್ಯದ ಬಗ್ಗೆ ಸರ್ಕಾರ ಗಂಭೀರವಾಗಿ ಯೋಚಿಸಬೇಕು ಎಂದು ವಿಜಯೇಂದ್ರ ಹೇಳಿದರು.

KPSC ಸ್ವಾಯತ್ತ ಸಂಸ್ಥೆ ಎಂಬ ಕಾರಣಕ್ಕೆ ರಾಜ್ಯ ಸರ್ಕಾರ ತನ್ನ ಹೊಣೆಗಾರಿಕೆಯಿಂದ ಹಿಂದೆ ಸರಿಯಬಾರದು. ನೇಮಕಾತಿ ಪ್ರಕ್ರಿಯೆಯಲ್ಲಿ ಆಗುತ್ತಿರುವ ವಿಳಂಬದಿಂದ ಸಂಸ್ಥೆಯ ಮೇಲಿನ ವಿಶ್ವಾಸಾರ್ಹತೆ ಕುಗ್ಗಿದ್ದು, KPSCಗೆ ಹೊಸ ಕಾಯಕಲ್ಪ ನೀಡುವ ಅಗತ್ಯವಿದೆ ಎಂದರು.

ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ KPSC ಸುಧಾರಣೆ ಹಾಗೂ ಸರ್ಕಾರಿ ನೇಮಕಾತಿ ಪ್ರಕ್ರಿಯೆಗೆ ತ್ವರಿತ ಚಾಲನೆ ನೀಡುವುದು ಪ್ರಮುಖ ಆದ್ಯತೆಗಳಲ್ಲಿ ಒಂದಾಗಲಿದೆ ಎಂದು ಭರವಸೆ ನೀಡಿದರು.

ಸರ್ಕಾರಿ ಶಾಲೆಗಳಿಗೆ ಪುನಶ್ಚೇತನ

ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಿಗೆ ಉತ್ತಮ ಮೂಲಸೌಕರ್ಯ, ಗುಣಮಟ್ಟದ ಶಿಕ್ಷಕರು ಮತ್ತು ಪರಿಣಾಮಕಾರಿ ಶಾಲಾ ನಾಯಕತ್ವ ಒದಗಿಸುವುದು ಅತ್ಯಗತ್ಯ. ಶಿಕ್ಷಕರ ಬದ್ಧತೆ ಮತ್ತು ಉತ್ತಮ ನಾಯಕತ್ವವಿದ್ದರೆ ಸರ್ಕಾರಿ ಶಾಲೆಗಳಲ್ಲಿಯೂ ವಿದ್ಯಾರ್ಥಿಗಳ ಸಂಖ್ಯೆ ಮತ್ತು ಫಲಿತಾಂಶವನ್ನು ಗಣನೀಯವಾಗಿ ಹೆಚ್ಚಿಸಬಹುದು ಎಂದರು.

ಶಿಕಾರಿಪುರದ ಸರ್ಕಾರಿ ಶಾಲೆಯೊಂದರಲ್ಲಿ ಎರಡು ವರ್ಷಗಳ ಹಿಂದೆ ಕೇವಲ 25 ವಿದ್ಯಾರ್ಥಿಗಳಿದ್ದ ಸಂದರ್ಭದಲ್ಲಿ ಉತ್ತಮ ಪ್ರಾಂಶುಪಾಲರು ಮತ್ತು ಶಿಕ್ಷಕರ ನೇಮಕದ ಬಳಿಕ ವಿದ್ಯಾರ್ಥಿಗಳ ಸಂಖ್ಯೆ 250ಕ್ಕೂ ಅಧಿಕವಾಗಿರುವ ಉದಾಹರಣೆಯನ್ನು ನೀಡಿದ ವಿಜಯೇಂದ್ರ, ಸರ್ಕಾರಿ ಶಾಲೆಗಳ ಬಗ್ಗೆ ಪೋಷಕರ ವಿಶ್ವಾಸವನ್ನು ಮರುಸ್ಥಾಪಿಸುವುದು ಸಾಧ್ಯ ಎಂದು ಹೇಳಿದರು.

ಗ್ರಾಮೀಣ ಮಕ್ಕಳಿಗೆ ನಗರಗಳಿಗೆ ವಲಸೆ ಹೋಗುವ ಅನಿವಾರ್ಯತೆ ಇಲ್ಲದಂತೆ ಶಿಕ್ಷಣ, ಆರೋಗ್ಯ ಮತ್ತು ಮೂಲಸೌಕರ್ಯವನ್ನು ಅವರ ಮನೆಬಾಗಿಲಲ್ಲೇ ಒದಗಿಸುವುದು ಸರ್ಕಾರದ ಜವಾಬ್ದಾರಿ ಎಂದರು.

ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಆದ್ಯತೆ

ಬೆಂಗಳೂರು ಅಭಿವೃದ್ಧಿಯನ್ನೇ ಕರ್ನಾಟಕದ ಅಭಿವೃದ್ಧಿ ಎಂದು ಪರಿಗಣಿಸುವ ಮನೋಭಾವ ಬದಲಾಗಬೇಕು. ಕರ್ನಾಟಕದ ಪ್ರತಿಯೊಂದು ಭಾಗವೂ ಸಮಾನವಾಗಿ ಅಭಿವೃದ್ಧಿಯಾದಾಗ ಮಾತ್ರ ಸಮಗ್ರ ಕರ್ನಾಟಕ ನಿರ್ಮಾಣ ಸಾಧ್ಯ ಎಂದು ವಿಜಯೇಂದ್ರ ಹೇಳಿದರು.

ಕಲ್ಯಾಣ ಕರ್ನಾಟಕದ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿಗಾಗಿ ಜನರು 3–4 ಕಿಲೋಮೀಟರ್ ನಡೆದು ಹೋಗುವ ಪರಿಸ್ಥಿತಿ, ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಹಾಗೂ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇನ್ನೂ ಇದೆ. ರಾಯಚೂರು, ಯಾದಗಿರಿ, ಕೊಪ್ಪಳ ಮತ್ತು ಕಲಬುರಗಿ ಭಾಗಗಳಿಂದ ಯುವಕರ ವಲಸೆ ಹೆಚ್ಚುತ್ತಿರುವುದಕ್ಕೆ ಶಿಕ್ಷಣ, ಕೈಗಾರಿಕೆ ಮತ್ತು ಉದ್ಯೋಗದ ಕೊರತೆಯೂ ಪ್ರಮುಖ ಕಾರಣವಾಗಿದೆ ಎಂದರು.

ಕಲ್ಯಾಣ ಕರ್ನಾಟಕಕ್ಕೆ ಸಮರ್ಪಕ ಬಜೆಟ್, ನೀರಾವರಿ ಯೋಜನೆಗಳು, ಉತ್ತಮ ಶಿಕ್ಷಣ ಸಂಸ್ಥೆಗಳು, ಆರೋಗ್ಯ ಸೇವೆಗಳು ಹಾಗೂ ಕೈಗಾರಿಕೆಗಳನ್ನು ಒದಗಿಸಬೇಕು. ಅನುದಾನ ನೀಡುವುದಷ್ಟೇ ಸಾಲದು; ಅದರ ಬಳಕೆಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯೂ ಇರಬೇಕು ಎಂದು ಹೇಳಿದರು.

AI ಉದ್ಯೋಗ ಕಸಿಯುವುದಕ್ಕಿಂತ ಹೊಸ ಅವಕಾಶಗಳನ್ನು ಸೃಷ್ಟಿಸಲಿದೆ

ಕೃತಕ ಬುದ್ಧಿಮತ್ತೆ ಹಾಗೂ Automationನಿಂದ ಉದ್ಯೋಗಗಳು ಕಡಿಮೆಯಾಗುವ ಆತಂಕದ ಕುರಿತು ಯುವಕರು ಕೇಳಿದ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, ತಂತ್ರಜ್ಞಾನ ಬದಲಾವಣೆ ಹೊಸ ಸವಾಲುಗಳ ಜೊತೆಗೆ ಹೊಸ ಅವಕಾಶಗಳನ್ನೂ ಸೃಷ್ಟಿಸುತ್ತದೆ ಎಂದರು.

1990ರ ದಶಕದಲ್ಲಿ ಕಂಪ್ಯೂಟರ್ ಬಂದಾಗಲೂ ಉದ್ಯೋಗ ನಷ್ಟದ ಭೀತಿ ಇತ್ತು. ಆದರೆ ನಂತರ ಹೊಸ ಉದ್ಯೋಗ ಕ್ಷೇತ್ರಗಳು ಸೃಷ್ಟಿಯಾದವು. AI ಕೆಲವು ಸಾಂಪ್ರದಾಯಿಕ ಉದ್ಯೋಗಗಳನ್ನು ಬದಲಾಯಿಸಬಹುದು; ಅದೇ ಸಂದರ್ಭದಲ್ಲಿ ಹೊಸ ಉದ್ಯೋಗಗಳಿಗೂ ದಾರಿ ಮಾಡಿಕೊಡಲಿದೆ. ಆದ್ದರಿಂದ ಯುವಕರು ಭಯಪಡುವ ಬದಲು upskilling ಮತ್ತು ಹೊಸ ತಾಂತ್ರಿಕ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದರು.

Comments

Leave a Comment

Prev Post ನೈಸ್ ಯೋಜನೆ; ಕಾನೂನಿನ ಚೌಕಟ್ಟಿನಲ್ಲೇ ಕ್ರಮ: ಸಿಎಂ ಡಿ ಕೆ ಶಿವಕುಮಾರ್ ಸ್ಪಷ್ಟನೆ
Next Post ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿದ ಶಿವಕುಮಾರ್

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News