PRABHAVAA.COM

ಫ್ರಾನ್ಸ್‌ ಪ್ರವಾಸದ ಎರಡನೇ ದಿನ ಥೇಲ್ಸ್, ಸೋಮ್ಫಿ, ಸೆವೆನ್ಸಿಯಾ ಕಂಪನಿಗಳ ಜತೆ‌ ಮಾತುಕತೆ

Bengaluru Urban:

Font size:

ತಯಾರಿಕೆಗೆ ಒತ್ತು ಕೊಟ್ಟು ಹೂಡಿಕೆ ಮಾತುಕತೆ: ಎಂ ಬಿ ಪಾಟೀಲ

ಫ್ರಾನ್ಸ್‌ ಪ್ರವಾಸದ ಎರಡನೇ ದಿನ ಥೇಲ್ಸ್, ಸೋಮ್ಫಿ, ಸೆವೆನ್ಸಿಯಾ ಕಂಪನಿಗಳ ಜತೆ‌ ಮಾತುಕತೆ

ತಯಾರಿಕೆಗೆ ಒತ್ತು ಕೊಟ್ಟು ಹೂಡಿಕೆ ಮಾತುಕತೆ: ಎಂ ಬಿ ಪಾಟೀಲ

ಬೆಂಗಳೂರು: ಬಂಡವಾಳ ಆಕರ್ಷಣೆಯ ಉದ್ದೇಶದಿಂದ ಉನ್ನತ ಮಟ್ಟದ ನಿಯೋಗದ ಜತೆ ಫ್ರಾನ್ಸ್‌ಗೆ ತೆರಳಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ತಮ್ಮ ಭೇಟಿಯ ಎರಡನೆಯ ದಿನವಾದ ಮಂಗಳವಾರ ಥೇಲ್ಸ್, ಸೋಮ್ಫಿ, ಮೆಕಾಕ್ರೋಮ್, ಸೆವೆನ್ಸಿಯಾ ಮತ್ತು ಡೆನೋನ್ ಕಂಪನಿಗಳ ಜತೆ ತಯಾರಿಕಾ ಚಟುವಟಿಕೆಗೆ ಒತ್ತು ಕೊಟ್ಟು ಮಾತುಕತೆ ನಡೆಸಿದ್ದಾರೆ.

ಈ ಬಗ್ಗೆ ಅಲ್ಲಿಂದ ಮಾಹಿತಿ ನೀಡಿರುವ ಸಚಿವರು, ಈ‌ ಕಂಪನಿಗಳು ವೈಮಾಂತರಿಕ್ಷ, ರಕ್ಷಣೆ, ಬಾಹ್ಯಾಕಾಶ, ಹೈನೋದ್ಯಮ ಮತ್ತು ಆಟೋಮೋಟಿವ್ ಕ್ಷೇತ್ರಗಳಿಗೆ ಸಂಬಂಧಿಸಿವೆ. ಹೀಗಾಗಿ ಈ ಕಂಪನಿಗಳು ದಕ್ಷಿಣ ಭಾರತದ ಮಾರುಕಟ್ಟೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕಲ್ಲಿ ತಮ್ಮ‌ ತಯಾರಿಕಾ ಘಟಕಗಳನ್ನು ಆರಂಭಿಸುವಂತೆ ಕೇಳಿಕೊಳ್ಳಲಾಗಿದೆ. ಇದಕ್ಕೆ ಕಂಪನಿಗಳು ಸಕಾರಾತ್ಮಕವಾಗಿ ಸ್ಪಂದಿಸುವ ಒಲವು ತೋರಿವೆ ಎಂದು ಅವರು ಹೇಳಿದ್ದಾರೆ.

ಆಟೋಮೇಷನ್ ವಲಯದಲ್ಲಿ ಹೆಸರು ಮಾಡಿರುವ ಸೋಮ್ಫಿ ಕಂಪನಿಯು ಈಗಾಗಲೇ ಬೆಂಗಳೂರಿನಲ್ಲಿ ನೆಲೆಯೂರಿದೆ. ಆದ್ದರಿಂದ ರಾಜ್ಯದಲ್ಲಿ ತಯಾರಿಕಾ ಘಟಕ ಮತ್ತು ಬಿಡಿಭಾಗಗಳ ಪೂರೈಕೆ ವಹಿವಾಟು ಆರಂಭಿಸಲು ಮನವಿ ಮಾಡಿದ್ದೇವೆ ಎಂದು ಅವರು ನುಡಿದಿದ್ದಾರೆ.

ವೈಮಾಂತರಿಕ್ಷ ಮತ್ತು ರಕ್ಷಣಾ ಕ್ಷೇತ್ರದಲ್ಲಿ ಮುಂಚೂಣಿಯ ಲ್ಲಿರುವ ಥೇಲ್ಸ್ ಕಂಪನಿಗೆ ತನ್ನ ಭವಿಷ್ಯದ ಹೂಡಿಕೆಗೆ ರಾಜ್ಯವನ್ನೇ ಆಯ್ಕೆ ಮಾಡಿಕೊಳ್ಳುವಂತೆ ಗಮನ ಸೆಳೆಯಲಾಗಿದೆ. ಇದೇ ರೀತಿ ನಮ್ಮಲ್ಲೇ ತನ್ನ‌ ಮೊದಲ ತಯಾರಿಕಾ ಘಟಕವನ್ನು ಆರಂಭಿಸುವಂತೆ ಹೇಳಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಗಿಣ್ಣು ಉತ್ಪಾದನೆ ಮಾಡುವ ಸೆವೆನ್ಸಿಯಾ ಮತ್ತು ಸಸ್ಯಮೂಲದ ಉತ್ಪನ್ನಗಳನ್ನು ತಯಾರಿಸುವ ಡೆನೋನ್ ಕಂಪನಿಗಳಿಗೆ ದಕ್ಷಿಣ ಭಾರತದ ಮಾರುಕಟ್ಟೆಯನ್ನು ಕೇಂದ್ರೀಕರಿಸಿ, ಕರ್ನಾಟಕದಲ್ಲಿ ಉತ್ಪಾದನಾ ಸ್ಥಾವರಗಳನ್ನು ಅಭಿವೃದ್ಧಿ ಪಡಿಸಲು ಆಹ್ವಾನಿಸಲಾಗಿದೆ ಎಂದು ಪಾಟೀಲ ಹೇಳಿದ್ದಾರೆ.

ಮಾತುಕತೆಯಲ್ಲಿ ಸೋಮ್ಫಿ‌ ಕಂಪನಿಯ ಉಪಾಧ್ಯಕ್ಷೆ ಜೀನ್ ಫ್ರಾಂಜಿ, ವಹಿವಾಟು ಮುಖ್ಯಸ್ಥ ಯಾನ್ ಬರೌ, ಥೇಲ್ಸ್ ಕಂಪನಿಯ ಭಾರತೀಯ ವಿಭಾಗದ ಮುಖ್ಯಸ್ಥ ಎಲಾಯ್ ಲಿಯಾನ್ಹಾರ್ಟ್, ಉಪಾಧ್ಯಕ್ಷ ಜೀನ್ ನೋಯಲ್ ಬೋನ್ಯು, ಮೆಕಾಕ್ರೋಮ್ ಸಿಇಒ ಕ್ರಿಶ್ಚಿಯನ್ ಕಾರ್ನಿಲ್, ಸೆವೆನ್ಸಿಯಾ ಪರವಾಗಿ ಜೀನ್ ಬ್ಯಾಪ್ಟಿಸ್ಟ್ ವ್ಯಾನ್ ಎಸ್ಲಾಂಡ್, ಡನೋನ್ ಕಂಪನಿಯ ಉನ್ನತ ಮಟ್ಟದ ಅಧಿಕಾರಿಗಳಾದ ಫ್ಯಾಬ್ರಿಸ್ ಸಲಮಾಂಕ ಮತ್ತು ಏಂಜಲ್ ರಗೆರಿ ಭಾಗವಹಿಸಿದ್ದರು.

ರಾಜ್ಯ ಸರ್ಕಾರದ ನಿಯೋಗದಲ್ಲಿ ಕೈಗಾರಿಕಾ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಖುಷ್ಬೂ ಗೋಯೆಲ್ ಮತ್ತು ಕೆಐಎಡಿಬಿ ಸಿಇಒ ಗೋವಿಂದ ರೆಡ್ಡಿ ಇದ್ದರು.

Comments

Leave a Comment

Prev Post ಶೀಘ್ರದಲ್ಲೇ ಇನ್ನೂ 25 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳೆಂದು ಘೋಷಣೆ
Next Post ಮುಖ್ಯಮಂತ್ರಿಗಳೇ ನ್ಯಾಯಯುತ ಹೋರಾಟ ಹತ್ತಿಕ್ಕಬೇಡಿ: ಬಿ.ವೈ.ವಿಜಯೇಂದ್ರ

ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟಕ್ಕೆ ₹10.61 ಕೋಟಿ ಲಾಭ.

ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟಕ್ಕೆ ₹10.61 ಕೋಟಿ ಲಾಭ.

ಬಾಗ್ಮನೆ ಸಾಧನೆ ದೇಶವೇ ಹೆಮ್ಮೆಪಡುವಂತದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ಬಾಗ್ಮನೆ ಸಾಧನೆ ದೇಶವೇ ಹೆಮ್ಮೆಪಡುವಂತದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

₹6,000 ಕೋಟಿ ಹೂಡಿಕೆಗೆ ಆ್ಯಕ್ಸಿಸ್‌ಕೇಡ್ಸ್‌ ಏರೊಸ್ಪೇಸ್‌ ಒಲವು: ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ

* ಮೂರು ವರ್ಷಗಳಲ್ಲಿ ವೈಮಾಂತರಿಕ್ಷ, ರಕ್ಷಣೆ, ಎಂಆರ್‌ಒ, ತಯಾರಿಕಾ ಕ್ಲಸ್ಟರ್‌ ಅಭಿವೃದ್ಧಿ * 20 ಸಾವಿರ ಪ್ರತ್ಯಕ್ಷ ಹಾಗೂ 54 ಸಾವಿರ ಪರೋಕ್ಷ ಉದ್ಯೋಗ ಅವಕಾಶಗಳು ಸೃಷ್ಟಿ

ಎಂ.ಸಿ.ಸಿ.ಬ್ಯಾಂಕ್ ಕಾರ್ಯವ್ಯಾಪ್ತಿ ರಾಜ್ಯಕ್ಕೆ ವಿಸ್ತರಣೆ: ಅಧ್ಯಕ್ಷ ಅನಿಲ್ ಲೋಬೋ

ಎಂಸಿಸಿ ಬ್ಯಾಂಕ್: ದೇರಳಕಟ್ಟೆ ಮತ್ತು ಕಟಪಾಡಿಯಲ್ಲಿ ಹೊಸ ಶಾಖೆಗಳ ಉದ್ಘಾಟನೆ, 1,535 ಕೋಟಿ ರೂ. ವ್ಯವಹಾರ ಮೈಲಿಗಲ್ಲು

ಬ್ಯಾಂಕ್ ನೀಡುವ ಸಾಲದಿಂದ ಗ್ರಾಹಕರು ಆದಾಯ ಹೆಚ್ಚಿಸಿಕೊಳ್ಳಬೇಕು: ಬಸವರಾಜ ಬೊಮ್ಮಾಯಿ

ಬ್ಯಾಂಕ್ ನೀಡುವ ಸಾಲದಿಂದ ಗ್ರಾಹಕರು ಆದಾಯ ಹೆಚ್ಚಿಸಿಕೊಳ್ಳಬೇಕು: ಬಸವರಾಜ ಬೊಮ್ಮಾಯಿ

ಹೂಡಿಕೆ ಆಕರ್ಷಣೆಗೆ ಕೋಲ್ಕತ್ತಾದಲ್ಲಿ ರೋಡ್ ಶೋ ನಡೆಸಿದ ಸಚಿವ ಎಂ.ಬಿ.ಪಾಟೀಲ

ಹೂಡಿಕೆ ಆಕರ್ಷಣೆಗೆ ಕೋಲ್ಕತ್ತಾದಲ್ಲಿ ರೋಡ್ ಶೋ ನಡೆಸಿದ ಸಚಿವ ಎಂ.ಬಿ.ಪಾಟೀಲ

Read all News