PRABHAVAA.COM

ಕೆ.ಎಸ್.ಟಿ.ಡಿ.ಸಿ ವಿರುದ್ಧದ ಭ್ರಷ್ಟಾಚಾರ ಆರೋಪಗಳನ್ನು ತಿರಸ್ಕರಿಸಿದ ಎಂಪ್ಲಾಯೀಸ್ ಯೂನಿಯನ್ ಅಧ್ಯಕ್ಷ ಡಿ. ಲಕ್ಷ್ಮಿ ವೆಂಕಟೇಶ್

Bengaluru Urban:

Font size:

ಕೆ.ಎಸ್.ಟಿ.ಡಿ.ಸಿ ವಿರುದ್ಧದ ಭ್ರಷ್ಟಾಚಾರ ಆರೋಪಗಳನ್ನು ತಿರಸ್ಕರಿಸಿದ ಎಂಪ್ಲಾಯೀಸ್ ಯೂನಿಯನ್ ಅಧ್ಯಕ್ಷ ಡಿ. ಲಕ್ಷ್ಮಿ ವೆಂಕಟೇಶ್

ಕೆ.ಎಸ್.ಟಿ.ಡಿ.ಸಿ ವಿರುದ್ಧದ ಭ್ರಷ್ಟಾಚಾರ ಆರೋಪಗಳನ್ನು ತಿರಸ್ಕರಿಸಿದ ಎಂಪ್ಲಾಯೀಸ್ ಯೂನಿಯನ್ ಅಧ್ಯಕ್ಷ ಡಿ. ಲಕ್ಷ್ಮಿ ವೆಂಕಟೇಶ್

ಬೆಂಗಳೂರು, ಸೆಪ್ಟೆಂಬರ್ 8 – ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದಿ ನಿಗಮ ನಿಯಮಿತ (ಕೆ.ಎಸ್.ಟಿ.ಡಿ.ಸಿ) ವಿರುದ್ಧ ಇತ್ತಿಚೆಗೆ ಕೆಲವು ದೃಶ್ಯ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ಭ್ರಷ್ಟಾಚಾರ ಆರೋಪಗಳನ್ನು ತೀವ್ರವಾಗಿ ತಿರಸ್ಕರಿಸಿರುವುದು ಕೆ.ಎಸ್.ಟಿ.ಡಿ.ಸಿ ಎಂಪ್ಲಾಯೀಸ್ ಯೂನಿಯನ್ (ನೋಂದಣಿ) ಸಂಘದ ಅಧ್ಯಕ್ಷರು ಡಿ. ಲಕ್ಷ್ಮಿ ವೆಂಕಟೇಶ್. ಐ.ಎನ್.ಟಿ.ಯು.ಸಿ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಸಂಘಟನೆಯು ಪತ್ರಿಕಾಗೋಷ್ಠಿಯಲ್ಲಿ ಸಾರ್ವಜನಿಕರಿಗೆ ಸ್ಪಷ್ಟನೆ ನೀಡಿದೆ.

ಸಂಘಟನೆಯ ಅಧ್ಯಕ್ಷರಾದ ಡಿ. ಲಕ್ಷ್ಮಿ ವೆಂಕಟೇಶ್ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಪ್ರಧಾನ ಕಾರ್ಯದರ್ಶಿ ಎ. ಬಾಬು ಪೂಜಾರಿರವರುಗಳು ಮಾತನಾಡಿ
ನಿಗಮದ ವಿರುದ್ಧ ಹೊರಬಂದಿರುವ ವರದಿಗಳು ಸಂಪೂರ್ಣ ಸುಳ್ಳು ಹಾಗೂ ನಿರಾಧಾರವಾಗಿದ್ದು, ಸಂಸ್ಥೆಯ ಹೆಸರಿಗೆ ಕಳಂಕ ತರುವ ಪಿತೂರಿ ಎಂದು ಆರೋಪಿಸಲಾಗಿದೆ. ನಿಗಮವು ಸಹಸ್ರಾರು ಸಂಖ್ಯೆಯ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸಿ ಜೀವನಾಧಾರವಾಗಿರುವುದನ್ನು ಅವರು ಸ್ಮರಿಸಿದ್ದಾರೆ.

ಸುಮಾರು 25 ವರ್ಷಗಳಿಂದ ಅಸ್ತಿತ್ವದಲ್ಲಿರುವ ಈ ಸಂಘಟನೆಯು ನೌಕರರ ಕ್ಷೇಮಾಭಿವೃದ್ಧಿ ಹಾಗೂ ಸಂಸ್ಥೆಯ ಏಳಿಗೆಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದು, ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಇಂಬು ನೀಡಿಲ್ಲವೆಂದು ಸ್ಪಷ್ಟಪಡಿಸಲಾಗಿದೆ. ಸಂಘಟನೆಯ ವಿರುದ್ಧ ಸ್ಪರ್ಧಿಸಿ ಸೋಲನುಂಡ ವರ್ಕಸ್ ಯೂನಿಯನ್ ಅಧ್ಯಕ್ಷರೆನಿಸಿಕೊಂಡ ವ್ಯಕ್ತಿಯೇ ಈ ಸುಳ್ಳು ಪ್ರಚಾರಗಳ ಹಿಂದಿರುವುದಾಗಿ ಆರೋಪಿಸಲಾಗಿದೆ.

ಪರಾಜಿತ ವ್ಯಕ್ತಿಯು ಅಧಿಕಾರಿಗಳು, ಕಾರ್ಮಿಕರು ಹಾಗೂ ಗುತ್ತಿಗೆದಾರರಿಗೆ ಬೆದರಿಕೆ ಹಾಕಿ ಹಣ ವಸೂಲಿ ದಂಧೆಗಳಲ್ಲಿ ತೊಡಗಿರುವುದನ್ನು ಸಂಘಟನೆಯು ಬಹಿರಂಗಪಡಿಸಿದೆ. ಇಂತಹ ಬ್ಲಾಕ್ ಮೇಲ್ ತಂತ್ರಗಳನ್ನು ಪತ್ತೆಹಚ್ಚಿದ ಕಾರ್ಮಿಕ ವರ್ಗವು ವ್ಯಥೆಗೊಂಡಿದ್ದು, ಸಂಸ್ಥೆಯ ಹೆಸರಿಗೆ ದಕ್ಕೆ ತರುತ್ತಿರುವ ಆತನ ವಿರುದ್ಧ ನಿಗಮವು ಲಿಖಿತ ನೋಟಿಸ್ ನೀಡಿರುವುದಾಗಿ ತಿಳಿಸಲಾಗಿದೆ.

ನಿಗಮದಲ್ಲಿ ಸುಮಾರು 1000 ಕ್ಕೂ ಹೆಚ್ಚು ಕಾರ್ಮಿಕರು ಸೇವೆ ಸಲ್ಲಿಸುತ್ತಿದ್ದು, ಅವರ ಪರಿಶ್ರಮದಿಂದ ಸಂಸ್ಥೆ ಸರಾಗವಾಗಿ ಕಾರ್ಯನಿರ್ವಹಿಸುತ್ತಿದೆ. ಆದರೆ ಸ್ವಾರ್ಥಪರ ವ್ಯಕ್ತಿಯ ಕುತಂತ್ರಗಳಿಂದ ಅಪಪ್ರಚಾರ ನಡೆಯುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳಿವೆ ಎಂದು ಎಚ್ಚರಿಸಲಾಗಿದೆ.

ಪ್ರಸ್ತುತ ನಿಗಮವು ಮಾನ್ಯ ಸಚಿವರು, ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರ ಸಾರಥ್ಯದಲ್ಲಿ ಸರ್ವತೋಮುಖ ಅಭಿವೃದ್ಧಿ ಹೊಂದುತ್ತಿದ್ದು, ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುತ್ತಿದೆ. ನೌಕರ ವರ್ಗವು ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದು, ನಿಗಮದ ಏಳಿಗೆಯಲ್ಲಿ ಪಾಲುದಾರರಾಗಿದ್ದಾರೆ.

ಅಂತಿಮವಾಗಿ, ಪರಾಜಿತ ವರ್ಕಸ್ ಯೂನಿಯನ್ ಅಧ್ಯಕ್ಷನ ಪ್ರಕಟಣೆಗಳನ್ನು ಯಾವುದೇ ಮಾಧ್ಯಮಗಳು ಪರಿಗಣಿಸದೆ ಇದ್ದಲ್ಲಿ ನಿಗಮವು ಅಭಿವೃದ್ಧಿ ಪಥದಲ್ಲಿ ಮುಂದುವರಿಯಲು ಸಹಕಾರಿಯಾಗುತ್ತದೆ ಎಂದು ಸಂಘಟನೆಯು ಮನವಿ ಮಾಡಿಕೊಂಡಿದೆ.

Comments

Leave a Comment

Prev Post ನಗರ ಪ್ರದೇಶದ ಶಾಲಾ ವಿದ್ಯಾರ್ಥಿಗಳಿಗೆ ಗ್ರಾಮಾನುಭವ ಕಾರ್ಯಕ್ರಮಕ್ಕೆ ಸರ್ಕಾರದ ಅನುಮೋದನೆ
Next Post ನೂರು ದಿನಗಳ ಆಡಳಿತ: ಘೋಷಣೆಗಳಿಂದ ಅನುಷ್ಠಾನದತ್ತ — ಡಿ.ಕೆ. ಶಿವಕುಮಾರ್ ಸರ್ಕಾರದ ಮೊದಲ ಮೈಲಿಗಲ್ಲು"

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News