ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ಕೊಡಿಸಲು ದೇವೇಗೌಡರು, ಕುಮಾರಸ್ವಾಮಿ ಬದ್ಧರಾಗಿದ್ದಾರೆ;ನಿಖಿಲ್ ಕುಮಾರಸ್ವಾಮಿ
ರಾಮನಗರ: ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ಕೊಡಿಸಲು ದೇವೇಗೌಡರು, ಕುಮಾರಸ್ವಾಮಿ ಬದ್ಧರಾಗಿದ್ದಾರೆ. ಆದ್ರೆ ತಮಿಳುನಾಡು ಸಿಎಂ ಸ್ಟಾಲಿನ್ ಅವರಿಂದ ಡಿಸಿಎಂ ಡಿಕೆಶಿ ಅವರು NOC ತೆಗೆದುಕೊಂಡು ಬರಲಿ. ಮರುದಿನವೇ ಕೇಂದ್ರದ ಅನುಮತಿಗೆ ಹೆಚ್‌ಡಿಡಿ ಹಾಗೂ ಹೆಚ್‌ಡಿಕೆ ಹೋರಾಟ ಮಾಡುತ್ತಾರೆ ಎಂದು ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಅವರು ಕಿಡಿಕಾರಿದರು.
ರಾಮನಗರದ ಚಿಕ್ಕೇಗೌಡನದೊಡ್ಡಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ನೆನೆಗುದಿಗೆ ಬಿದ್ದ ಎತ್ತಿನ ಹೊಳೆ ಯೋಜನೆಗೆ ಮರುಜೀವ ಪಡೆಯಲು ದೇವೇಗೌಡರು ಸದನದಲ್ಲಿ ಅಂಗಲಾಚಿ ಬೇಡಿದ್ದಾರೆ. ದೇವೇಗೌಡರ ಹಿರಿತನಕ್ಕೆ ಕೇಂದ್ರ ನಾಯಕರು ಕ್ಲಿಯರೆನ್ಸ್ ಕೊಟ್ಟಿದ್ದಾರೆ. ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ಕೊಡಿಸಲು ದೇವೇಗೌಡರು, ಕುಮಾರಸ್ವಾಮಿ ಬದ್ಧರಾಗಿದ್ದಾರೆ ಎಂದು ತಿಳಿಸಿದರು.
ಸಿದ್ರಾಮಣ್ಣ ಕೇರಳದ ಮುಖ್ಯಮಂತ್ರಿನಾ !? ಕರ್ನಾಟಕ ಮುಖ್ಯಮಂತ್ರಿ ನಾ?
ಮಾನ್ಯ ಸಿದ್ದರಾಮಯ್ಯನವರು ಕೇರಳದ ಮುಖ್ಯಮಂತ್ರಿ ನಾ ಅಥವಾ ಕರ್ನಾಟಕ ಮುಖ್ಯಮಂತ್ರಿ ನಾ?. ಉತ್ತರ ಕರ್ನಾಟಕದಲ್ಲಿ ಸಾಕಷ್ಟು ಅತಿವೃಷ್ಟಿಯಾಗಿತ್ತು. ಆಗ ರೈತರು ಪರಿಹಾರ ಕೇಳಿದ್ರು ಅವರ ಕೂಗು ಸಿದ್ದರಾಮಯ್ಯ ಅವರಿಗೆ ಕೇಳಲಿಲ್ಲ ಎಂದು ಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಅವರು ಗುಡುಗಿದರು.
ರಾಜ್ಯ ಸರ್ಕಾರ 10 ಕೋಟಿ ಅನುದಾನ ನೀಡಿದ ವಿಚಾರಕ್ಕೆ ಪ್ರತಿಕ್ರಿಯೆಸಿದರು. ಕೇರಳದಲ್ಲಿ ಭೂಕುಸಿತದಿಂದ ಜನರಿಗೆ ನೋವಾದ್ರೆ, ಅಲ್ಲಿನ ಸಿಎಂ ಪರಿಹಾರ ಘೋಷಣೆ ಮಾಡಬೇಕು. ಆದ್ರೆ ತಮ್ಮ ಕುರ್ಚಿ ಬಿಗಿ ಪಡಿಸಿಕೊಳ್ಳಲು, ಹೈಕಮಾಂಡ್ ವಿಶ್ವಾಸಗಳಿಸಲು ರಾಜ್ಯದ ತೆರಿಗೆ ಹಣ ವ್ಯರ್ಥ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು .
ರಾಜ್ಯದ ಎರಡು ಬೈ ಎಲೆಕ್ಷನ್ ವಿಚಾರಕ್ಕೆ ಮಾತನಾಡಿದ ಅವರು, ಎರಡೂ ಕ್ಷೇತ್ರದ ನಾಮಪತ್ರ ಸಲ್ಲಿಕೆ ವೇಳೆ ಜೆಡಿಎಸ್ ನಾಯಕರು ಭಾಗಿಯಾಗಿದ್ರು. ದೆಹಲಿಯಲ್ಲಿ ಪಾರ್ಲಿಮೆಂಟ್ ನಡೆಯುತ್ತಿದೆ. ಎರಡೂ ಕ್ಷೇತ್ರಗಳಲ್ಲಿ ಕುಮಾರಸ್ವಾಮಿ ಸಹ ಪ್ರಚಾರ ಮಾಡುತ್ತಾರೆ ಜೆಡಿಎಸ್ ನಾಯಕರು ಕೂಡ ಹೋಗಿ ಪ್ರಚಾರ ಮಾಡಲಿದ್ದಾರೆ.
ಹೆಚ್‌ಡಿ ದೇವೇಗೌಡರನ್ನ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಎನ್‌ಡಿಎ ನೇರ ಆಯ್ಕೆ ಮಾಡುಲು ತಿರ್ಮಾನದ ವಿಚಾರ.
ಇದು ಕೇಂದ್ರದ ನಾಯಕರಿಗೆ ಬಿಟ್ಟ ವಿಚಾರ. ನಮ್ಮ ಪಕ್ಷದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ರಾಮನಗರದ ಚಿಕ್ಕೇಗೌಡನದೊಡ್ಡಿ ಗ್ರಾಮದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಜಿಟಿಡಿ ಜೆಡಿಎಸ್‌ನಿಂದ ಮತ್ತೆ ಸ್ಪರ್ಧೆ ಮಾಡುತ್ತೇನೆ ಎಂಬ ವಿಚಾರ. ಕಳೆದ ಭಾರಿ ಜೆಡಿಎಸ್ ಚಿಹ್ನೆಯಲ್ಲಿ ನಿಂತು ಗೆದ್ದಿದ್ದಾರೆ. ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಏನು ಮಾಡಬೇಕು ಎಂಬುದಲ್ಲಿ ವರಿಷ್ಠರು ತಿರ್ಮಾನ ಮಾಡುತ್ತಾರೆ ಎಂದು ಹೇಳಿದರು.
ಹಾಗೆಯೇ ರಾಮನಗರದ ಕಸಬಾ ಹೋಬಳಿಯ ಚಿಕ್ಕೇಗೌಡನದೊಡ್ಡಿ ಗ್ರಾಮದಲ್ಲಿ STRR -(ಸ್ಯಾಟಲೈಟ್ ಟೌನ್ ರಿಂಗ್ ರೋಡ್) ಯೋಜನೆಯ ರಸ್ತೆ ನಿರ್ಮಾಣಕ್ಕಾಗಿ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಭೂಮಿಯನ್ನು ಕಳೆದುಕೊಂಡ ರೈತರನ್ನು ಭೇಟಿ ಮಾಡಿ, ಅವರ ಅಹವಾಲುಗಳನ್ನು ಆಲಿಸಿ, ಅವರ ಎಲ್ಲಾ ಮನವಿಗಳಿಗೆ ಸ್ಪಂದಿಸಿ 40 ಜನ ಸದಸ್ಯರನ್ನ ಒಳಗೊಂಡ ನಿಯೋಗವನ್ನು ರಚನೆ ಮಾಡಿ, ಖುದ್ದಾಗಿ ದೆಹಲಿಯಲ್ಲಿ ಕೇಂದ್ರ ಸಚಿವರಾದ ಶ್ರೀ ಹೆಚ್.ಡಿ ಕುಮಾರಣ್ಣನವರನ್ನ ಭೇಟಿ ಮಾಡಿಸಿ , ಭೂಸ್ವಾಧೀನದ ಪರಿಹಾರದ ಹಣವನ್ನ ಶೀಘ್ರವಾಗಿ ಕೇಂದ್ರ ಸರ್ಕಾರದಿಂದ ರೈತರಿಗೆ ಪರಿಹಾರ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ನಿಖಿಲ್ ಕುಮಾರಸ್ವಾಮಿ ಅವರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷರಾದ ಸಬ್ಬಕೆರೆ ಶಿವಲಿಂಗಪ್ಪ ಅವರು ದೊರೆ ಅವರು, ಕೃಷ್ಣಮೂರ್ತಿ (ಕಿಟ್ಟಿ) ,ಚಂದ್ರಣ್ಣ, ಸಂತೋಷ್, ಶ್ರೀ ಮೂರ್ತಿ, ಮೋಹನ್ ಅವರು ರವಿ ಅವರು ಸೇರಿದಂತೆ ಅನೇಕ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.




Comments
Leave a Comment