ಗೌರಿ ಗಣೇಶ ಹಬ್ಬದ ಪ್ರಯುಕ್ತ ಸಾರಿಗೆ ಇಲಾಖೆಯ ವಿಶೇಷ ತಪಾಸಣೆ ಮತ್ತು ಹೆಚ್ಚುವರಿ ಬಸ್ ವ್ಯವಸ್ಥೆ – ಪ್ರಯಾಣಿಕರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮಗಳು
ಗೌರಿ ಗಣೇಶ ಹಬ್ಬದ ಪ್ರಯುಕ್ತ ಸಾರಿಗೆ ಇಲಾಖೆಯ ವಿಶೇಷ ತಪಾಸಣೆ ಮತ್ತು ಹೆಚ್ಚುವರಿ ಬಸ್ ವ್ಯವಸ್ಥೆ – ಪ್ರಯಾಣಿಕರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮಗಳು
#GauriGanesha2026 #TransportDepartment #SpecialInspection #PassengerSafety #BusServices #KSRTC #NWKRTC #TrafficControl #FestivalTravel #PublicSafety
ಬೆಂಗಳೂರು, ಸೆ.೧೦- ಗೌರಿ ಗಣೇಶ ಹಬ್ಬದ ಪ್ರಯುಕ್ತ ಪ್ರಯಾಣಿಕರ ಸುರಕ್ಷತೆ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರ ಸಾರಿಗೆ ಇಲಾಖೆ ರಾಜ್ಯದಾದ್ಯಂತ ವಿಶೇಷ ಪ್ರವರ್ತನ ಕಾರ್ಯಾಚರಣೆ ಕೈಗೊಳ್ಳಲು ಮುಂದಾಗಿದೆ.
ಸೆಪ್ಟೆಂಬರ್ 11ರಿಂದ 15ರವರೆಗೆ ಖಾಸಗಿ ಪ್ರಯಾಣಿಕರ ವಾಹನಗಳಲ್ಲಿ ಅತಿಯಾದ ದರ ವಸೂಲಿ, ನಿಗದಿಗಿಂತ ಹೆಚ್ಚು ಪ್ರಯಾಣಿಕರನ್ನು ತುಂಬಿಕೊಂಡು ಸಂಚರಿಸುವುದು, ಹಾಗೂ ಸರಕು ಅಥವಾ ಸ್ಫೋಟಕ ಸಾಮಗ್ರಿಗಳನ್ನು ಅಕ್ರಮವಾಗಿ ಸಾಗಿಸುವಂತಹ ಉಲ್ಲಂಘನೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು.
ರಾಜ್ಯದ ಎಲ್ಲಾ ಜಂಟಿ ಸಾರಿಗೆ ಆಯುಕ್ತರಿಗೆ ನೀಡಿರುವ ನಿರ್ದೇಶನದಂತೆ ತಮ್ಮ ನೇತೃತ್ವದಲ್ಲಿ ವಿಶೇಷ ತಪಾಸಣೆ ನಡೆಸಿ ಪ್ರತಿದಿನ ಬೆಳಗ್ಗೆ 10 ಗಂಟೆಗೆ ವರದಿ ಕಳುಹಿಸುವಂತೆ ಸೂಚಿಸಲಾಗಿದೆ. ಸೆಪ್ಟೆಂಬರ್ 16ರಂದು ಕ್ರೋಡೀಕೃತ ವರದಿ ಸಲ್ಲಿಸುವುದು ಕಡ್ಡಾಯವಾಗಿದೆ.
ಸಾರಿಗೆ ಇಲಾಖೆ ಸಾರ್ವಜನಿಕರಿಗೆ ಮನವಿ ಮಾಡಿದ್ದು, ಹಬ್ಬದ ಸಮಯದಲ್ಲಿ ಪ್ರಯಾಣಿಕರ ಸುರಕ್ಷತೆ ಕಾಪಾಡಲು ನಿಯಮ ಪಾಲನೆ ಮಾಡಬೇಕೆಂದು. ಅತಿದರ ವಸೂಲಿ ಅಥವಾ ಅಕ್ರಮ ಸಂಚಾರ ಕಂಡುಬಂದರೆ ತಕ್ಷಣವೇ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.
ಗೌರಿ ಗಣೇಶ ಹಬ್ಬದ ಪ್ರಯುಕ್ತ ರಾಜ್ಯದಾದ್ಯಂತ ಸಂಚಾರ ನಿಯಂತ್ರಣಕ್ಕಾಗಿ ಸಾರಿಗೆ ಸಂಸ್ಥೆಗಳು ವಿಶೇಷ ವ್ಯವಸ್ಥೆಗಳನ್ನು ಕೈಗೊಂಡಿವೆ. KSRTC ಮತ್ತು NWKRTC ಹೆಚ್ಚುವರಿ ಬಸ್‌ಗಳನ್ನು ವ್ಯವಸ್ಥೆ ಮಾಡಿದ್ದು ಸೆಪ್ಟೆಂಬರ್ 11ರಿಂದ 14ರವರೆಗೆ 2,400ಕ್ಕೂ ಹೆಚ್ಚು ವಿಶೇಷ ಬಸ್‌ಗಳು ಸಂಚರಿಸಲಿವೆ. ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಮುಂಗಡ ಟಿಕೆಟ್‌ಗಳಿಗೆ ಶೇ.5 ರಿಂದ ಶೇ.10ರಷ್ಟು ರಿಯಾಯಿತಿ ಸೌಲಭ್ಯ ಘೋಷಿಸಲಾಗಿದೆ. ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಮಂಗಳೂರು, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ಕಲಬುರಗಿ, ಬಳ್ಳಾರಿ, ಯಾದಗಿರಿ, ಬೀದರ್ ಹಾಗೂ ತಿರುಪತಿ, ವಿಜಯವಾಡ, ಹೈದರಾಬಾದ್ ಕಡೆಗೆ ವಿಶೇಷ ಬಸ್‌ಗಳು ಸಂಚರಿಸಲಿವೆ. ಮೈಸೂರು ರಸ್ತೆ ಸ್ಯಾಟಲೈಟ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಕಡೆಗೆ ಹೆಚ್ಚುವರಿ ಬಸ್‌ಗಳು ವ್ಯವಸ್ಥೆ ಮಾಡಲಾಗಿದೆ. ಶಾಂತಿನಗರ BMTC ನಿಲ್ದಾಣದಿಂದ ತಮಿಳುನಾಡು ಮತ್ತು ಕೇರಳದ ಕಡೆಗೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರು, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ಕೋಝಿಕ್ಕೋಡ್ ಕಡೆಗೆ ವಿಶೇಷ ಸೇವೆಗಳನ್ನು ಒದಗಿಸಲಾಗಿದೆ. ಪ್ರಯಾಣಿಕರು ಮುಂಗಡ ಟಿಕೆಟ್ ಕಾಯ್ದಿರಿಸಿಕೊಳ್ಳುವುದು ಅತ್ಯಗತ್ಯವಾಗಿದ್ದು ಗುಂಪು ಪ್ರಯಾಣಿಕರು ಒಟ್ಟಿಗೆ ಬುಕ್ ಮಾಡಿದರೆ ಹೆಚ್ಚುವರಿ ರಿಯಾಯಿತಿ ಪಡೆಯಬಹುದು. ಸಾರಿಗೆ ಇಲಾಖೆ ಸುರಕ್ಷಿತ ಪ್ರಯಾಣಕ್ಕಾಗಿ KSRTC ಮತ್ತು NWKRTC ಬಸ್‌ಗಳನ್ನು ಬಳಸುವಂತೆ ಮನವಿ ಮಾಡಿದೆ.






Comments
Leave a Comment