ಒಳಮೀಸಲು ಕುರಿತು ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆ: ಎಂ ಬಿ ಪಾಟೀಲ

Bengaluru Urban:

Font size:

ಒಳಮೀಸಲು ಕುರಿತು ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆ: ಎಂ ಬಿ ಪಾಟೀಲ

ಬೆಂಗಳೂರು: ಒಳಮೀಸಲಾತಿಗೆ ಸಂಬಂಧಿಸಿದಂತೆ ರಾಜ್ಯ ಸರಕಾರವು ಸಂಬಂಧಿಸಿದ ಎಲ್ಲಾ ಒಳಪಂಗಡಗಳ ಹಿತಾಸಕ್ತಿಯನ್ನೂ ಪರಿಗಣನೆಗೆ ತೆಗೆದುಕೊಳ್ಳಲಿದೆ. ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಈ ವಿಚಾರವಾಗಿ ಪ್ರತಿಯೊಂದು ಸಾಧಕಬಾಧಕಗಳನ್ನು ವಿಸ್ತೃತವಾಗಿ ಚರ್ಚಿಸಲಾಗುವುದು. ನಂತರ ಎಲ್ಲರಿಗೂ ನ್ಯಾಯ ಸಿಗುವಂತಹ ಸೂತ್ರವನ್ನು ರೂಪಿಸಲಾಗುವುದು ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಒಳಮೀಸಲಾತಿ ಇಲ್ಲದ ಹಳೆಯ ಮೀಸಲಾತಿ ಪದ್ಧತಿಯನ್ನೇ ಮುಂದುವರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟವು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಹೋರಾಟ ನಡೆಸುತ್ತಿದ್ದು, ಬುಧವಾರ ಅವರು ಅದರ ಮನವಿ ಸ್ವೀಕರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕೂಡ ಇದ್ದರು.

ರಾಜ್ಯದ ಕಾಂಗ್ರೆಸ್ ಸರಕಾರವು ಬುದ್ಧ, ಬಸವ ಮತ್ತು ಅಂಬೇಡ್ಕರ್ ತತ್ತ್ವಗಳಲ್ಲಿ ನಂಬಿಕೆ ಇಟ್ಟುಕೊಂಡಿದೆ. ಹೀಗಾಗಿ ನಾವು ಯಾವುದೇ ಸಮುದಾಯಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ. ಆದರೆ ಯಾವುದೇ ಉಪಕ್ರಮವನ್ನು ಜಾರಿಗೆ ತರುವ ಮೊದಲು ಎಲ್ಲ ಮಗ್ಗುಲುಗಳಿಂದಲೂ ಚರ್ಚಿಸಬೇಕಾಗುತ್ತದೆ ಎಂದು ಅವರು ಪ್ರತಿಭಟನಾನಿರತರಿಗೆ ಆಶ್ವಾಸನೆ ನೀಡಿದ್ದಾರೆ.

ಧರಣಿನಿರತರ ಪರವಾಗಿ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ, ಸಮುದಾಯದ ಹಲವು ಸ್ವಾಮೀಜಿಗಳು ಮತ್ತು ಮುಖಂಡರು ಇದ್ದರು. ಸಚಿವರುಗಳ ಜತೆಯಲ್ಲಿ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಕೂಡ ಇದ್ದರು.

Comments

Leave a Comment

Prev Post ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ಕೊಡಿಸಲು ದೇವೇಗೌಡರು, ಕುಮಾರಸ್ವಾಮಿ ಬದ್ಧರಾಗಿದ್ದಾರೆ;ನಿಖಿಲ್ ಕುಮಾರಸ್ವಾಮಿ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News