PRABHAVAA.COM

ರಾಜ್ಯದಲ್ಲಿ 14.18 ಲಕ್ಷ ಅಂತರ್ಜಲ ಯೋಜನೆ, 38,960 ಜಲಮೂಲಗಳ ಗಣತಿ ಪೂರ್ಣ: ಡಾ. ಅಜಯ್ ಧರ್ಮಸಿಂಗ್

Bengaluru Urban:

Font size:

- 30,671 ಗ್ರಾಮಗಳಲ್ಲಿ ಸಮೀಕ್ಷೆ; 7ನೇ ಸಣ್ಣ ನೀರಾವರಿ ಹಾಗೂ 2ನೇ ಜಲಮೂಲಗಳ ಗಣತಿಯ ಕ್ಷೇತ್ರಕಾರ್ಯ ಪೂರ್ಣ

- ಬರ ನಿರ್ವಹಣೆ, ಅಂತರ್ಜಲ ವೃದ್ಧಿ ಹಾಗೂ ಜಲಮೂಲಗಳ ಸಂರಕ್ಷಣೆಗೆ ಗಣತಿ ದತ್ತಾಂಶ ಬಳಕೆ: ಸಚಿವರು

ಬೆಂಗಳೂರು, ಸೆಪ್ಟೆಂಬರ್ 13: ರಾಜ್ಯದ ಜಲಸಂಪನ್ಮೂಲಗಳ ವಾಸ್ತವ ಸ್ಥಿತಿಗತಿಯನ್ನು ಅರಿತು, ಭವಿಷ್ಯದ ನೀರಾವರಿ ಹಾಗೂ ಜಲಸಂರಕ್ಷಣಾ ಯೋಜನೆಗಳನ್ನು ವೈಜ್ಞಾನಿಕವಾಗಿ ರೂಪಿಸಲು ಮಹತ್ವದ್ದಾಗಿರುವ 7ನೇ ಸಣ್ಣ ನೀರಾವರಿ ಗಣತಿ ಹಾಗೂ 2ನೇ ಜಲಮೂಲಗಳ ಗಣತಿಯ ಕ್ಷೇತ್ರಕಾರ್ಯವನ್ನು ಕರ್ನಾಟಕ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಗಣತಿಯಲ್ಲಿ ರಾಜ್ಯದ 14,18,894 ಅಂತರ್ಜಲ ಯೋಜನೆಗಳು, 77,573 ಮೇಲ್ಮೈ ಜಲ ಯೋಜನೆಗಳು ಹಾಗೂ 38,960 ಜಲಮೂಲಗಳನ್ನು ದಾಖಲಿಸಲಾಗಿದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ್ ಧರ್ಮಸಿಂಗ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಜಲಶಕ್ತಿ ಸಚಿವಾಲಯದ ಸಂಪೂರ್ಣ ಆರ್ಥಿಕ ನೆರವಿನೊಂದಿಗೆ 2023-24ನೇ ಸಾಲನ್ನು ಆಧಾರ ವರ್ಷವನ್ನಾಗಿಟ್ಟುಕೊಂಡು ಕೈಗೊಂಡ ಈ ಬೃಹತ್ ಗಣತಿಯ ಕ್ಷೇತ್ರಕಾರ್ಯವು 2026ರ ಆಗಸ್ಟ್‌ನಲ್ಲಿ ಪೂರ್ಣಗೊಂಡಿದೆ. ರಾಜ್ಯದ 30,671 ಗ್ರಾಮಗಳು, 300 ನಗರ ಸ್ಥಳೀಯ ಸಂಸ್ಥೆಗಳು ಹಾಗೂ 7,128 ನಗರ ವಾರ್ಡ್‌ಗಳನ್ನು ಗಣತಿ ವ್ಯಾಪ್ತಿಗೆ ಒಳಪಡಿಸಲಾಗಿದೆ.

ಗಣತಿ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯವನ್ನು ಶ್ಲಾಘಿಸಿದ ಸಚಿವರು, ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿಗಳಿಗೆ ಪ್ರಶಂಸಾ ಪತ್ರಗಳನ್ನು ನೀಡಿ ಗೌರವಿಸಿದರು.

“ರಾಜ್ಯ ಎದುರಿಸುತ್ತಿರುವ ಬರ, ಅಂತರ್ಜಲ ಕುಸಿತ ಹಾಗೂ ಹವಾಮಾನ ಬದಲಾವಣೆಯ ಸವಾಲುಗಳ ಸಂದರ್ಭದಲ್ಲಿ ನಿಖರವಾದ ಜಲ ದತ್ತಾಂಶ ಅತ್ಯಂತ ಮಹತ್ವದ್ದಾಗಿದೆ. ಯಾವ ಪ್ರದೇಶದಲ್ಲಿ ಎಷ್ಟು ಜಲಮೂಲಗಳಿವೆ, ಅಂತರ್ಜಲ ಹಾಗೂ ಮೇಲ್ಮೈ ಜಲ ಯೋಜನೆಗಳ ಸ್ಥಿತಿಗತಿ ಏನು ಎಂಬ ನಿಖರ ಮಾಹಿತಿ ಲಭ್ಯವಾದರೆ, ಮುಂದಿನ ನೀರಾವರಿ ಮತ್ತು ಜಲಸಂರಕ್ಷಣಾ ಯೋಜನೆಗಳನ್ನು ಹೆಚ್ಚು ವೈಜ್ಞಾನಿಕವಾಗಿ ಹಾಗೂ ಅಗತ್ಯಕ್ಕೆ ಅನುಗುಣವಾಗಿ ರೂಪಿಸಲು ಸಾಧ್ಯವಾಗುತ್ತದೆ” ಎಂದು ಡಾ. ಅಜಯ್ ಧರ್ಮಸಿಂಗ್ ಹೇಳಿದರು.

ಸಣ್ಣ ನೀರಾವರಿ ಗಣತಿಯಲ್ಲಿ 2,000 ಹೆಕ್ಟೇರ್‌ವರೆಗಿನ ನೀರಾವರಿ ಸಾಮರ್ಥ್ಯ ಹೊಂದಿರುವ ಯೋಜನೆಗಳ ಮಾಹಿತಿಯನ್ನು ದಾಖಲಿಸಲಾಗಿದ್ದು, ಜಲಮೂಲಗಳ ಗಣತಿಯಲ್ಲಿ ಕೆರೆ, ಕಟ್ಟೆ ಸೇರಿದಂತೆ ವಿವಿಧ ಜಲಮೂಲಗಳ ಸಮಗ್ರ ಮಾಹಿತಿಯನ್ನು ಸಂಗ್ರಹಿಸಲಾಗಿದೆ.

“ಈ ಅಂಕಿಅಂಶಗಳು ಕೇವಲ ಗಣತಿ ವರದಿಗೆ ಸೀಮಿತವಾಗಬಾರದು. ಬರಪೀಡಿತ ಪ್ರದೇಶಗಳಲ್ಲಿ ಜಲಭದ್ರತೆ ಕಲ್ಪಿಸುವುದು, ಕೆರೆಗಳ ಪುನಶ್ಚೇತನ, ಅಂತರ್ಜಲ ಮರುಪೂರಣ, ಚೆಕ್ ಡ್ಯಾಂಗಳ ನಿರ್ಮಾಣ ಹಾಗೂ ಕೆರೆ ತುಂಬಿಸುವ ಯೋಜನೆಗಳಿಗೆ ಆದ್ಯತೆ ನಿಗದಿಪಡಿಸಲು ಈ ದತ್ತಾಂಶವನ್ನು ಪರಿಣಾಮಕಾರಿಯಾಗಿ ಬಳಸಬೇಕು. ದತ್ತಾಂಶ ಆಧಾರಿತ ಯೋಜನೆ ಹಾಗೂ ತಂತ್ರಜ್ಞಾನದ ಬಳಕೆಯ ಮೂಲಕ ರಾಜ್ಯದ ಜಲಸಂಪನ್ಮೂಲಗಳ ಸಮರ್ಥ ನಿರ್ವಹಣೆಗೆ ಕ್ರಮ ಕೈಗೊಳ್ಳಲಾಗುವುದು” ಎಂದು ಸಚಿವರು ತಿಳಿಸಿದರು.

ರಾಜ್ಯದ ಪ್ರತಿಯೊಂದು ಭಾಗದ ಜಲಸಂಪನ್ಮೂಲಗಳ ಸ್ಥಿತಿಗತಿಯನ್ನು ಅರಿತು, ಎಲ್ಲಿ ಜಲಸಂರಕ್ಷಣಾ ಕ್ರಮಗಳ ಅಗತ್ಯ ಹೆಚ್ಚಿದೆ, ಎಲ್ಲಿ ಅಂತರ್ಜಲ ಮರುಪೂರಣಕ್ಕೆ ಆದ್ಯತೆ ನೀಡಬೇಕು ಹಾಗೂ ಯಾವ ಪ್ರದೇಶಗಳಲ್ಲಿ ಸಣ್ಣ ನೀರಾವರಿ ಮೂಲಸೌಕರ್ಯವನ್ನು ಬಲಪಡಿಸಬೇಕು ಎಂಬುದನ್ನು ನಿರ್ಧರಿಸಲು ಗಣತಿಯ ದತ್ತಾಂಶ ನೆರವಾಗಲಿದೆ ಎಂದು ಅವರು ಹೇಳಿದರು.

ಗಣತಿ ಕಾರ್ಯದಲ್ಲಿ ತೊಡಗಿಸಿಕೊಂಡು ನಿಗದಿತ ಅವಧಿಯಲ್ಲಿ ಕಾರ್ಯವನ್ನು ಪೂರ್ಣಗೊಳಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಅಭಿನಂದಿಸಿದ ಡಾ. ಅಜಯ್ ಧರ್ಮಸಿಂಗ್, “ಉತ್ತಮವಾಗಿ ಕೆಲಸ ಮಾಡುವ ಅಧಿಕಾರಿಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಉತ್ತಮ ಆಡಳಿತದ ಭಾಗ. ರಾಜ್ಯದಾದ್ಯಂತ ನಡೆದ ಈ ಬೃಹತ್ ಗಣತಿ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿಯ ಶ್ರಮ ಅಭಿನಂದನಾರ್ಹ” ಎಂದು ಹೇಳಿದರು.

Comments

Leave a Comment

Prev Post ಸರ್ಕಾರದ ವಿರುದ್ಧ ಪ್ರತಿಭಟನಾ ಮೆರವಣಿಗೆ, ಹಿಂದೂ ವಿರೋಧಿ ಸರ್ಕಾರ: ಪ್ರತಿಪಕ್ಷ ನಾಯಕ ಆರ್‌.ಅಶೋಕ
Next Post ಅಶೋಕ್, ವಿಜಯೇಂದ್ರ ಅವರನ್ನು ಸರಿಸಿ ಅಧಿಕಾರಕ್ಕೆ ಬರೋ ಆಸೆ ಕುಮಾರಸ್ವಾಮಿದು: ಸಿಎಂ‌ ಡಿ ಕೆ ಶಿವಕುಮಾರ್ ವ್ಯಂಗ್ಯ

ಕರ್ನಾಟಕ ಚಲನಚಿತ್ರ ಪೋಷಕರ ಕಲಾವಿದರ ಸಂಘದ ಅಧ್ಯಕ್ಷರಾಗಿ ಮೂರನೇ ಬಾರಿಗೆ ಡಿಂಗ್ರಿ ನಾಗರಾಜ್ ಅವಿರೋಧ ಆಯ್ಕೆ

ಕರ್ನಾಟಕ ಚಲನಚಿತ್ರ ಪೋಷಕರ ಕಲಾವಿದರ ಸಂಘದ ಅಧ್ಯಕ್ಷರಾಗಿ ಮೂರನೇ ಬಾರಿಗೆ ಡಿಂಗ್ರಿ ನಾಗರಾಜ್ ಅವಿರೋಧ ಆಯ್ಕೆ

ಕಂಠೀರವ ಸ್ಟುಡಿಯೋಸ್ ಆವರಣದಲ್ಲಿ ಟಿ.ಎಸ್. ಕರಿಬಸಯ್ಯ ಪುತ್ಥಳಿ ಅನಾವಣಗೊಳಿಸಿ, ವಜ್ರಮಹೋತ್ಸವ ಆಚರಿಸಬೇಕು : ಕಲಾ ಕಂಠೀರವ ದಿ. ಟಿ.ಎಸ್. ಕರಿಬಸಯ್ಯ ಸೇವಾ ಟ್ರಸ್ಟ್ ಆಗ್ರಹ

ಕಂಠೀರವ ಸ್ಟುಡಿಯೋಸ್ ಆವರಣದಲ್ಲಿ ಟಿ.ಎಸ್. ಕರಿಬಸಯ್ಯ ಪುತ್ಥಳಿ ಅನಾವಣಗೊಳಿಸಿ, ವಜ್ರಮಹೋತ್ಸವ ಆಚರಿಸಬೇಕು : ಕಲಾ ಕಂಠೀರವ ದಿ. ಟಿ.ಎಸ್. ಕರಿಬಸಯ್ಯ ಸೇವಾ ಟ್ರಸ್ಟ್ ಆಗ್ರಹ

ಬೆಂಗಳೂರು: ವಿಶ್ವ ಗುಬ್ಬಚ್ಚಿ ದಿನಾಚರಣೆ ವಿಶೇಷವಾಗಿ ಆಚರಣೆ

ಬೆಂಗಳೂರು: ವಿಶ್ವ ಗುಬ್ಬಚ್ಚಿ ದಿನಾಚರಣೆ ವಿಶೇಷವಾಗಿ ಆಚರಣೆ

ಬಿಡದಿ–ಬೈರಮಂಗಲ ಸ್ಮಾರ್ಟ್ ಸಿಟಿ: ಅಭಿವೃದ್ಧಿ ಕನಸುಗಳ ನಡುವೆ ರೈತರ ಬದುಕಿನ ಹೋರಾಟ

ಬಿಡದಿ–ಬೈರಮಂಗಲ ಸ್ಮಾರ್ಟ್ ಸಿಟಿ: ಅಭಿವೃದ್ಧಿ ಕನಸುಗಳ ನಡುವೆ ರೈತರ ಬದುಕಿನ ಹೋರಾಟ

*ಅದ್ದೂರಿಯಾಗಿ ಪ್ರದರ್ಶನಗೊಂಡ “ಸಂಪೂರ್ಣ ರಾಮಾಯಣ

*ಅದ್ದೂರಿಯಾಗಿ ಪ್ರದರ್ಶನಗೊಂಡ “ಸಂಪೂರ್ಣ ರಾಮಾಯಣ

ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ಕಲಾವಿದ ಡಿಂಗ್ರಿ ನಾಗರಾಜ್ ಜನ್ಮದಿನ ಸಂಭ್ರಮ

ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ಕಲಾವಿದ ಡಿಂಗ್ರಿ ನಾಗರಾಜ್ ಜನ್ಮದಿನ ಸಂಭ್ರಮ

Read all News