PRABHAVAA.COM

*ಪೊಲೀಸ್ ರೌಂಡಪ್ 10ನೇ ವಾರ್ಷಿಕೋತ್ಸವ: ಉಚಿತ ಆಂಬ್ಯುಲೆನ್ಸ್ ಸೇವೆಗೆ ಚಾಲನೆ*

Bengaluru Urban:

Font size:

*ಪೊಲೀಸ್ ರೌಂಡಪ್ 10ನೇ ವಾರ್ಷಿಕೋತ್ಸವ: ಉಚಿತ ಆಂಬ್ಯುಲೆನ್ಸ್ ಸೇವೆಗೆ ಚಾಲನೆ*

*ಪೊಲೀಸ್ ರೌಂಡಪ್ 10ನೇ ವಾರ್ಷಿಕೋತ್ಸವ: ಉಚಿತ ಆಂಬ್ಯುಲೆನ್ಸ್ ಸೇವೆಗೆ ಚಾಲನೆ*
ಬೆಂಗಳೂರು: ಪೊಲೀಸ್ ರೌಂಡಪ್‌ನ 10ನೇ ವರ್ಷದ ವಾರ್ಷಿಕೋತ್ಸವ ಹಾಗೂ ನಮ್ಮ ಟುಡೇ ಕನ್ನಡ ಟಿವಿಯ 5ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಉಚಿತ ಆಂಬ್ಯುಲೆನ್ಸ್ ಸೇವೆ ಉದ್ಘಾಟನೆ ಕಾರ್ಯಕ್ರಮದಲ್ಲಿ *ನಟ, ನಿರ್ಮಾಪಕ ಹಾಗೂ ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ಅಧ್ಯಕ್ಷ ಗಂಡಸಿ ಸದಾನಂದ ಸ್ವಾಮಿ, ಡಾಕ್ಟರ್ ಆಂಜನಪ್ಪ,ನಟ ಚೇತನ್ ಅಹಿಂಸಾ ಪೊಲೀಸ್ ರೌಂಡಪ್ ಸಂಪಾದಕ ವಿ.ಎಸ್. ತ್ಯಾಗರಾಜ್, ಶ್ರೀ ಸಿ.ಆರ್. ರವಿಪ್ರಸಾದ್, ಕಾಂಗ್ರೆಸ್ ಮುಖಂಡರು, ಟುಡೇ ಕನ್ನಡ ಟಿವಿ ಸಿಇಒ ಚಂದ್ರು, ಕನ್ನಡಪರ ಹೋರಾಟಗಾರ ಶಿವಕುಮಾರ್ ನಾಯಕ್, ಕನ್ನಡ ಯೋಗಿ* ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆಯಿತು.
ಸಮಾಜ ಸೇವೆ, ಮಾನವೀಯತೆ ಹಾಗೂ ಸಾರ್ವಜನಿಕ ಸೇವೆಯ ಉದ್ದೇಶದಿಂದ ಆರಂಭಿಸಲಾದ ಉಚಿತ ಆಂಬ್ಯುಲೆನ್ಸ್ ಸೇವೆಯನ್ನು 24x7 ತುರ್ತು ವೈದ್ಯಕೀಯ ನೆರವಿಗಾಗಿ ಸಾರ್ವಜನಿಕರಿಗೆ ಸಮರ್ಪಿಸಲಾಯಿತು.
ಕಾರ್ಯಕ್ರಮದಲ್ಲಿ ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಅವರು ಆಂಬ್ಯುಲೆನ್ಸ್ ಸೇವೆಗೆ ಚಾಲನೆ ನೀಡಿ ಮಾತನಾಡಿ, ತುರ್ತು ಸಂದರ್ಭದಲ್ಲಿ ಬಡವರು ಹಾಗೂ ಅಗತ್ಯವಿರುವವರಿಗೆ ಉಚಿತ ಆಂಬ್ಯುಲೆನ್ಸ್ ಸೇವೆ ದೊರೆಯುವುದು ಅತ್ಯಂತ ಮಹತ್ವದ ಮಾನವೀಯ ಕಾರ್ಯವಾಗಿದೆ. ಸಾರ್ವಜನಿಕರ ಆರೋಗ್ಯ ಮತ್ತು ಜೀವ ರಕ್ಷಣೆಗೆ ಇಂತಹ ಸೇವೆಗಳು ಸಹಕಾರಿಯಾಗಲಿವೆ ಎಂದು ಹೇಳಿದರು.
ಪೊಲೀಸ್ ರೌಂಡಪ್‌ನ 10 ವರ್ಷಗಳ ಪಯಣ ಹಾಗೂ ನಮ್ಮ ಟುಡೇ ಕನ್ನಡ ಟಿವಿಯ 5 ವರ್ಷಗಳ ಸೇವೆಯನ್ನು ಸ್ಮರಿಸಲಾಯಿತು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಗಂಡಸಿ ಸದಾನಂದ ಸ್ವಾಮಿ ಮಾತನಾಡಿ
ಸಾರ್ವಜನಿಕರಿಗೆ ತುರ್ತು ಸಂದರ್ಭಗಳಲ್ಲಿ ನೆರವಾಗುವ ಉಚಿತ ಆಂಬ್ಯುಲೆನ್ಸ್ ಸೇವೆಯು ಮುಂದಿನ ದಿನಗಳಲ್ಲಿ ಇನ್ನಷ್ಟು ಜನರಿಗೆ ತಲುಪಲಿ ಎಂಬ ಆಶಯವನ್ನು
ವ್ಯಕ್ತಪಡಿಸಿದರು.

Comments

Leave a Comment

Prev Post ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ: ಸಿಎಂ ಡಿ ಕೆ ಶಿವಕುಮಾರ್
Next Post ವಿಶ್ವ ದರ್ಜೆಯ ಬಹುಪಯೋಗಿ ವಸ್ತು ಪ್ರದರ್ಶನ ಸಭಾಂಗಣ, ಕನ್ವೆನ್ಷನ್ ಸೆಂಟರ್ ಅಭಿವೃದ್ಧಿ: ಎಂ ಬಿ ಪಾಟೀಲ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News