PRABHAVAA.COM

ಸರ್ವರ್ ತಾಂತ್ರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ; ಸಚಿವ -ರಿಜ್ವಾನ್ ಆರ್ಷದ್

Bengaluru Urban:

Font size:

ಇ-ಕೆವೈಸಿ ಸರ್ವರ್ ಸಮಸ್ಯೆಗೆ ತಕ್ಷಣ ಸ್ಪಂದಿಸಿ: ಸರ್ವರ್ ತಾಂತ್ರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ; ಸಚಿವ -ರಿಜ್ವಾನ್ ಆರ್ಷದ್

ಇ-ಕೆವೈಸಿ ಸರ್ವರ್ ಸಮಸ್ಯೆಗೆ ತಕ್ಷಣ ಸ್ಪಂದಿಸಿ: ಸರ್ವರ್ ತಾಂತ್ರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ;
ಸಚಿವ -ರಿಜ್ವಾನ್ ಆರ್ಷದ್

ಕೇಂದ್ರ ಸರ್ಕಾರವು ದಿನಾಂಕ 22.07.2025ರಂದು ಹೊರಡಿಸಿರುವ Targeted Public Distribution System (Control) Amendment Order ಅನ್ವಯ, ಅರ್ಹ ಪಡಿತರ ಚೀಟಿದಾರರ ಪಟ್ಟಿಯನ್ನು ನಿಯಮಿತವಾಗಿ ಪರಿಶೀಲಿಸುವುದು ಹಾಗೂ ಪ್ರತಿ ಐದು ವರ್ಷಕ್ಕೊಮ್ಮೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ಅದರಂತೆ, ಐದು ವರ್ಷ ಪೂರ್ಣಗೊಂಡಿರುವ ರಾಜ್ಯದ ಒಟ್ಟು 2,67,64,276 ಫಲಾನುಭವಿಗಳ ಮಾಹಿತಿಯನ್ನು NICಯಿಂದ ಪಡೆದು, ಮರು ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಲು ಎಲ್ಲಾ ಜಿಲ್ಲೆಗಳ ಜಂಟಿ/ಉಪ ನಿರ್ದೇಶಕರಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಈ ಪ್ರಕ್ರಿಯೆಗೆ 30.09.2026 ಅಂತಿಮ ದಿನಾಂಕ ನಿಗದಿಪಡಿಸಲಾಗಿದೆ.

ಪ್ರಸ್ತುತ ಸೆಪ್ಟೆಂಬರ್ ತಿಂಗಳಾಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ನ್ಯಾಯಬೆಲೆ ಅಂಗಡಿಗಳಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಕೆಲವೆಡೆ ಸರ್ವರ್ ಹಾಗೂ ತಾಂತ್ರಿಕ ಸಮಸ್ಯೆಗಳು ಉಂಟಾಗುತ್ತಿರುವುದು ಗಮನಕ್ಕೆ ಬಂದಿದೆ. ಯಾವುದೇ ಸ್ಥಳದಲ್ಲಿ ಸಮಸ್ಯೆ ಗಮನಕ್ಕೆ ಬಂದ ತಕ್ಷಣವೇ NIC, KSDC ಹಾಗೂ ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ತುರ್ತು ಕ್ರಮ ಕೈಗೊಂಡು ಸಮಸ್ಯೆಗಳನ್ನು ಕೂಡಲೇ ಬಗೆಹರಿಸಲು ಸೂಚಿಸಿದರು. ಅವರು ಇಂದು ವಿಕಾಸಸೌಧದಲ್ಲಿ ಹಿರಿಯ ಅಧಿಕಾರಿಗಳು, ಏನ್ ಐ ಸಿ ಹಾಗೂ ಕೆ ಹೆಚ್ ಡಿ ಸಿ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಆಹಾರ ಇಲಾಖೆಯ ಸರ್ವರ್ ನಲ್ಲಿ ಉಂಟಾಗುತ್ತಿರುವ ತಾಂತ್ರಿಕ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸೂಚಿಸಿದರು.

ಸಾರ್ವಜನಿಕರು ನ್ಯಾಯಬೆಲೆ ಅಂಗಡಿಗಳಿಗೆ ತೆರಳುವ ಅಗತ್ಯ ಕಡಿಮೆ ಮಾಡುವ ಉದ್ದೇಶದಿಂದ, ಮೊಬೈಲ್ ಮೂಲಕವೇ Face Authentication ಬಳಸಿ ಇ-ಕೆವೈಸಿ ಮಾಡಿಕೊಳ್ಳುವ ಸೌಲಭ್ಯವನ್ನು Directorate of Electronic Delivery of Citizen Services ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲಾಗುತ್ತಿದೆ. ಈ ಮೊಬೈಲ್ ಅಪ್ಲಿಕೇಶನ್ ಅನ್ನು ಇನ್ನೊಂದು ವಾರದೊಳಗೆ ಸಾರ್ವಜನಿಕರ ಬಳಕೆಗೆ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಫಲಾನುಭವಿಗಳು ತಮ್ಮ ಮೊಬೈಲ್‌ನಲ್ಲಿಯೇ ಸ್ವತಃ ಇ-ಕೆವೈಸಿ ಪೂರ್ಣಗೊಳಿಸಬಹುದಾಗಿದೆ.

ಇ-ಕೆವೈಸಿ ಪ್ರಕ್ರಿಯೆ ಸುಗಮವಾಗಿ ನಡೆಯಲು ಆಹಾರ ಅಪ್ಲಿಕೇಶನ್‌ನಲ್ಲಿ ಪ್ರತ್ಯೇಕ URLಗಳನ್ನೂ ಒದಗಿಸಲಾಗಿದೆ. ಅಲ್ಲದೆ, ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಆಹಾರ ಇಲಾಖೆಯ ಸರ್ವರ್‌ನ ಸಾಮರ್ಥ್ಯ ಮತ್ತು ಕಾರ್ಯಕ್ಷಮತೆಯನ್ನು ಪರಿಶೀಲಿಸಲು Load Testing ನಡೆಸಲಾಗುತ್ತಿದೆ.

ಇ -ಕೆ ವೈ ಸಿ ಮಾಡಿಸಬೇಕಿರುವ 2,67,64,276 ಪಲಾನುಭವಿಗಳಲ್ಲಿ ಇದುವರೆಗೂ 9754197 ಪಲಾನುಭವಿಗಳು ಇ -ಕೆ ವೈ ಸಿ ಮಾಡಿಸಿದ್ದು ಶೇ 37 ರಷ್ಟು ಪೂರ್ಣಗೊಂಡಿದೆ. ಪ್ರತಿನಿತ್ಯ ಸರಾಸರಿ 5.40 ಲಕ್ಷ ಪಲಾನುಭವಿಗಳು ಇ -ಕೆ ವೈ ಸಿ ಮಾಡುತ್ತಿದ್ದಾರೆ. ಆಹಾರ ಇಲಾಖೆಯ ಸರ್ವರ್‌ಗೆ ಸಂಬಂಧಿಸಿದ ಸಮಸ್ಯೆಗಳು ಹಿಂದಿನಿಂದಲೂ ಇದ್ದು, ನಾನು ಆಹಾರ ಇಲಾಖೆಯ ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ಈ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ 3rd Party Agencyಯನ್ನು ನೇಮಕ ಮಾಡಿದ್ದೇನೆ.

ಮುಂದಿನ ಒಂದು ತಿಂಗಳೊಳಗಾಗಿ ಆಹಾರ ಇಲಾಖೆಯ ಸರ್ವರ್ ಹಾಗೂ ತಾಂತ್ರಿಕ ವ್ಯವಸ್ಥೆಯಲ್ಲಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು.

ಸಾರ್ವಜನಿಕರಿಗೆ ಯಾವುದೇ ಅನಗತ್ಯ ತೊಂದರೆ ಆಗದಂತೆ, ತಂತ್ರಜ್ಞಾನ ಆಧಾರಿತ ಸೇವೆಗಳನ್ನು ಮತ್ತಷ್ಟು ಸರಳ, ವೇಗದ ಮತ್ತು ಪರಿಣಾಮಕಾರಿಯಾಗಿ ಒದಗಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದ್ದು ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.ಸಭೆಯಲ್ಲಿ ಕಾರ್ಯದರ್ಶಿ ಶ್ರೀಮತಿ ಕನಗವಲ್ಲಿ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.

Comments

Leave a Comment

Prev Post ಮೋದಿಯವರ ನೇತೃತ್ವದಲ್ಲಿ ಪ್ರಮುಖ ಆರ್ಥಿಕ ಶಕ್ತಿಯಾದ ಭಾರತ: ಜೆ.ಪಿ. ನಡ್ಡಾ
Next Post ಜೈಲಿನ ವಿಷಯ ಇಟ್ಟುಕೊಂಡು ನನ್ನನ್ನು ಹೆದರಿಸಲು ಸಾಧ್ಯವಿಲ್ಲ; ಹೆಚ್.ಡಿ. ಕುಮಾರಸ್ವಾಮಿ ಗುಡುಗು

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News