ಮಂಗಳೂರಿನಲ್ಲಿ ರೌಡಿ ಶೀಟರ್ ಹತ್ಯೆ; ದುಷ್ಕರ್ಮಿಗಳು ಪರಾರಿ.

Dakshina Kannada:

Font size:

ಮಂಗಳೂರಿನಲ್ಲಿ ರೌಡಿ ಶೀಟರ್ ಹತ್ಯೆ; ದುಷ್ಕರ್ಮಿಗಳು ಪರಾರಿ.

From Jayaram Udupi

ಮಂಗಳೂರು:
ರೌಡಿಶೀಟ‌ರ್ ಒಬ್ಬಾತನನ್ನು ತಂಡವೊಂದು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿರುವ ಘಟನೆ ಇಂದು ನಸುಕಿನ ಜಾವ ಮಂಗಳೂರಿನ ಹೊರವಲಯದಲ್ಲಿ ನಡೆದಿದೆ.

ತೊಕ್ಕೊಟ್ಟು ಫೈ ಓವರ್ ಮೇಲೆ ಉಚ್ಚಿಲ ಮುಳ್ಳುಗುಡ್ಡ ನಿವಾಸಿ ಆರೀಫ್ ಹುಸೇನ್(46) ಯಾನೆ ಟ್ಯಾಬ್ಲೆಟ್ ಆರೀಫ್ ನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.

ನಸುಕಿನ ಗಂಟೆ 3.30ರ ಸುಮಾರಿಗೆ ಘಟನೆ ನಡೆದಿದ್ದು ಆರೀಫ್ ಮಂಗಳೂರಿನ ಬಂದರು ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದಾನೆ. ಧಕ್ಕೆಯಲ್ಲಿ ಮೀನಿನ ವ್ಯಾಪಾರ ನಡೆಸುತ್ತಿದ್ದ ಈತ ತನ್ನ ಬೈಕ್ ನಲ್ಲಿ ಧಕ್ಕೆಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಹೊಂಚು ಹಾಕಿ ಕುಳಿತಿದ್ದ ತಂಡವು ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ.

ಕಳೆದ 2022ರ ಮೇ ತಿಂಗಳಲ್ಲಿ ಆರೀಫ್ ಇದೇ ರೀತಿ ಮುಂಜಾನೆ ಬೈಕಲ್ಲಿ ಧಕ್ಕೆಗೆ ತೆರಳುತ್ತಿದ್ದ ವೇಳೆ ಟೊಪ್ಪಿ ನೌಫಾಲ್ ತಂಡವು ದಾಳಿ ನಡೆಸಿ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿತ್ತು.

ವಿವಾಹಿತನಾಗಿರುವ ಆರೀಫ್ ಮೂಲತ: ಕುದ್ರೋಳಿ ನಿವಾಸಿಯಾಗಿದ್ದು ಕಳೆದ ಆರೇಳು ವರುಷದಿಂದ ಕುಟುಂಬ ಸಮೇತ ಅಜ್ಜಿನಡ್ಕ ಮುಳ್ಳುಗುಡ್ಡ ಎಂಬಲ್ಲಿ ಮನೆ ಮಾಡಿ ವಾಸವಿದ್ದ. ಮೃತ ಆರೀಫ್ , ಪತ್ನಿ ಮೂರು ಗಂಡು, ಒಂದು ಹೆಣ್ಣು ಮಕ್ಕಳನ್ನ ಅಗಲಿದ್ದಾನೆ. ಮೃತದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಘಟನಾ ಸ್ಥಳಕ್ಕೆ ಡಿಸಿಪಿ ಮಿಥುನ್ ಹೆಚ್.ಎನ್. ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

Comments

Leave a Comment

Prev Post ಬೆಂಗಳೂರು ಹಿತಕ್ಕೆ ನಮ್ಮ ತೀರ್ಮಾನ ಟೀಕಿಸುತ್ತಿರುವವರು, ಮುಂದೆ ಸ್ಮರಿಸುತ್ತಾರೆ: ಡಿಸಿಎಂ ಡಿ.ಕೆ. ಶಿವಕುಮಾರ್
Next Post ದೇಶ ಹಾಗೂ ರಾಜ್ಯದ ಬೆಳವಣಿಗೆಗೆ ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳ ಕೊಡುಗೆ ಅಪಾರ: ಡಿಸಿಎಂ ಡಿ.ಕೆ. ಶಿವಕುಮಾರ್