ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ
ನರೇಂದ್ರ ಮೋದಿ ಜೀ: ವಿಜಯೇಂದ್ರ
ಶಿಕಾರಿಪುರ: ಪ್ರಧಾನಿ ನರೇಂದ್ರ ಮೋದಿ ಜೀ ಅವರು ಕಳೆದ 25 ವರ್ಷಗಳಿಂದ ಸಮರ್ಪಣೆಯ ಮನೋಭಾವದಿಂದ ದೇಶಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. 2047 ರ ಹೊತ್ತಿಗೆ ವಿಕಸಿತ ಭಾರತದ ಈಡೇರಿಕೆಗಾಗಿ ದೇಶದ ಪ್ರಧಾನ ಸೇವಕನಾಗಿ ವಿಶ್ರಾಂತಿ ಪಡೆಯದೇ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೇಳಿದ್ದಾರೆ.
ಇಲ್ಲಿನ ಆರಾಧ್ಯ ದೈವ ಶ್ರೀ ಹುಚ್ಚುರಾಯಸ್ವಾಮಿ ದೇವಸ್ಥಾನದಲ್ಲಿ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಅಂಗವಾಗಿ ಇಂದು ವಿಶೇಷ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಮೋದಿ ಜೀ ಅವರು ಸಾರ್ವಜನಿಕ ಸೇವೆಯಲ್ಲಿ 25 ವರ್ಷಗಳನ್ನು ಪೂರೈಸಿದ್ದಾರೆ. 2001ರಲ್ಲಿ ಗುಜರಾತ್ ಸಿಎಂ ಆಗಿ ಆರಂಭವಾದ ಅವರ ಸಾರ್ವಜನಿಕ ಸೇವೆಯ ಪಯಣ 2014 ಲ್ಲಿ ಪ್ರಧಾನಿ ಆಗಿ ಮುಂದುವರಿಯಿತು. ಇಂದಿಗೂ ಅವರು ದೇಶದ ಜನತೆಯ ಕಲ್ಯಾಣಕ್ಕಾಗಿ ನಿರಂತರವಾಗಿ ದುಡಿಯುತ್ತಿದ್ದಾರೆ. ಅವರಿಗೆ ದೇವರು ಆಯುಷ್ಯ, ಆರೋಗ್ಯ ನೀಡಿ ಕಾಪಾಡಲಿ ಎಂದು ಪ್ರಾರ್ಥಿಸಿದರು.
ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ನ್ಯಾಯ ಸಿಗಬೇಕು, ಸರ್ಕಾರದ ಸೌಲಭ್ಯಗಳು ಲಭ್ಯವಾಗಬೇಕು ಎಂಬುದು ಮೋದಿ ಜೀ ಅವರು ಧ್ಯೇಯವಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಜೀ ಅವರ ಅಪೇಕ್ಷೆಯಂತೆ ಇಂದಿನಿಂದ ಒಂದು ತಿಂಗಳ ಕಾಲ ಸೇವಾ ಸಂಕಲ್ಪ ಕಾರ್ಯಕ್ರಮ ನಡೆಯುತ್ತಿದೆ ಎಂದು ವಿವರಿಸಿದರು.
ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿನ ಬೂತ್‍ಗಳಲ್ಲಿ ಕಾರ್ಯಕರ್ತರು ಸಾರ್ವಜನಿಕರೊಂದಿಗೆ ಇಂದು 7 ಗಂಟೆಗೆ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಮೋದಿ ಅವರಿಗೆ ಇನ್ನೂ ಹೆಚ್ಚಿನ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಲಿದ್ದಾರೆ ಎಂದು ತಿಳಿಸಿದರು. ಸಮಾಜದ ಎಲ್ಲಾ ವರ್ಗದ ಜನರಿಗೆ ಮೋದಿ ಅವರು ನ್ಯಾಯ ನೀಡಿದ್ದಾರೆ. ವಿವಿಧ ಯೋಜನೆ ಜಾರಿ ಮಾಡಿದ್ದಾರೆ. ಮೋದಿ ಅವರ ಸಂಕಲ್ಪವನ್ನು ಮನೆಮನೆಗೆ ತಲುಪಿಸುವ ಕೆಲಸವನ್ನು ಯಶಸ್ವಿಯಾಗಿ ಮಾಡೋಣ ಎಂದು ಮನವಿ ಮಾಡಿದರು.
ಮಂಡಲ ಅಧ್ಯಕ್ಷ ಹನುಮಂತಪ್ಪ, ನಗರ ಅಧ್ಯಕ್ಷ ರಾಘವೇಂದ್ರ ಎಸ್.ಎಸ್., ಮಂಡಲ ಯುವ ಮೋರ್ಚಾ ಅಧ್ಯಕ್ಷ ವೀರನಗೌಡ, ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಖಾ ರಾಜಶೇಖರ್, ಮುಖಂಡರಾದ ಕೆ.ಎಸ್.ಗುರುಮೂರ್ತಿ, ವಸಂತಗೌಡ, ಚನ್ನವೀರಪ್ಪ, ರಾಮಾನಾಯ್ಕ, ಡಿ.ಎಲ್. ಬಸವರಾಜ್, ಪಾಲಾಕ್ಷಪ್ಪ, ಸಚಿನ್, ಗಿರೀಶ್ ಧಾರವಾಡ, ಪ್ರಮುಖರು, ಕಾರ್ಯಕರ್ತರು ಹಾಜರಿದ್ದರು.






Comments
Leave a Comment