PRABHAVAA.COM

ಬಹು ದಿನಗಳ ಬೇಡಿಕೆಯಂತೆ ಮಂಗಳೂರಿನಲ್ಲಿ ಸಂಪುಟ ಸಭೆ: ಸಚಿವ ಖಾದರ್

Dakshina Kannada:

Font size:

ಬಹು ದಿನಗಳ ಬೇಡಿಕೆಯಂತೆ ಮಂಗಳೂರಿನಲ್ಲಿ ಸಂಪುಟ ಸಭೆ: ಸಚಿವ ಖಾದರ್

From Jayram Udupi:

ಬಹು ದಿನಗಳ ಬೇಡಿಕೆಯಂತೆ ಮಂಗಳೂರಿನಲ್ಲಿ ಸಂಪುಟ ಸಭೆ: ಸಚಿವ ಖಾದರ್

ಮಂಗಳೂರು:
ತುಳುನಾಡಿನ ಬಹುದಿನಗಳ ಬೇಡಿಕೆಯಂತೆ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದೆ. ಕರಾವಳಿ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಿದೆ ಎಂದು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಖಾತೆ ಸಚಿವ ಯು.ಟಿ. ಖಾದರ್ ಹೇಳಿದರು.

ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ವಿವಿಧ ಸಮಸ್ಯೆಗಳಿಗೆ ಬೆಂಗಳೂರಿನಿಂದಲೇ ಪರಿಹಾರ ಕಂಡುಕೊಳ್ಳುವ ಬದಲು ಸಚಿವ ಸಂಪುಟವೇ ಮಂಗಳೂರಿನಲ್ಲಿ ಸಭೆ ನಡೆಸುವುದರಿಂದ ಸ್ಥಳೀಯ ಸಮಸ್ಯೆಗಳನ್ನು ಅಧಿಕಾರಿಗಳು ನೇರವಾಗಿ ಸರ್ಕಾರದ ಗಮನಕ್ಕೆ ತರಲು ಸಾಧ್ಯವಾಗಲಿದೆ. ಕಾನೂನಿನ ವ್ಯಾಪ್ತಿಯಲ್ಲಿ ಜಿಲ್ಲೆಗೆ ಅಗತ್ಯವಿರುವ ವಿವಿಧ ಅಭಿವೃದ್ಧಿ ಯೋಜನೆಗಳು ಹಾಗೂ ಜನರ ಬೇಡಿಕೆಗಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಬೆಂಗಳೂರು ಹೊರತುಪಡಿಸಿ ಬೇರೆ ಜಿಲ್ಲೆಯಲ್ಲಿ ಸಚಿವ ಸಂಪುಟ ಸಭೆ ನಡೆಸುವುದಾದರೆ ಮಂಗಳೂರಿನಲ್ಲೇ ನಡೆಸಬೇಕು ಎಂದು ತಾನು ಮುಖ್ಯಮಂತ್ರಿಯವರಲ್ಲಿ ಈ ಹಿಂದೆ ಮನವಿ ಮಾಡಿದ್ದೆ. ಅದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಕಾರಾತ್ಮಕವಾಗಿ ಸ್ಪಂದಿಸಿ, ಮಂಗಳೂರಿನ ಮಾನವ ಸಂಪನ್ಮೂಲ, ಪ್ರವಾಸೋದ್ಯಮ, ಆರೋಗ್ಯ, ಶಿಕ್ಷಣ, ಸಾರಿಗೆ, ಸಂಪರ್ಕ ವ್ಯವಸ್ಥೆ ಹಾಗೂ ಧಾರ್ಮಿಕ ಕ್ಷೇತ್ರಗಳ ಸಾಮರ್ಥ್ಯವನ್ನು ಪರಿಗಣಿಸಿ ಕರಾವಳಿಗೆ ಹೆಚ್ಚಿನ ಮಹತ್ವ ನೀಡುವ ಭರವಸೆ ನೀಡಿದ್ದರು. ಅದರಂತೆ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿರುವುದು ಸಂತಸದ ವಿಚಾರವಾಗಿದೆ ಎಂದು ಖಾದರ್ ಹೇಳಿದರು.

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಸಚಿವ ಸಂಪುಟದ ಸದಸ್ಯರು ಮಂಗಳೂರಿಗೆ ಆಗಮಿಸುವ ಸಂದರ್ಭದಲ್ಲಿ ಪಂಪ್‌ವೆಲ್‌ನಿಂದ ಭವ್ಯ ಸ್ವಾಗತ ನೀಡಲು ತುಳುನಾಡಿನ ಜನತೆ ಮುಂದಾಗಬೇಕು. ಕರಾವಳಿಯ ಆತಿಥ್ಯ, ಪ್ರೀತಿ ಮತ್ತು ವಿಶ್ವಾಸವನ್ನು ಇಡೀ ರಾಜ್ಯಕ್ಕೆ ಪರಿಚಯಿಸುವ ಅವಕಾಶ ಇದಾಗಿದೆ. ಎಲ್ಲ ಸಂಘ-ಸಂಸ್ಥೆಗಳು, ಜಾತಿ, ವರ್ಗ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಪಕ್ಷಭೇದ ಮರೆತು ಸ್ವಾಗತ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಹಾಗೂ ಕಾಂಗ್ರೆಸ್ ಮುಖಂಡ ಮಿಥುನ್ ರೈ ಉಪಸ್ಥಿತರಿದ್ದರು.
[17/09, 4:11 pm] Jayram Udupi: ಸಿ.ಎಂ. ಮಂಗಳೂರು ಸಂಚಾರಕ್ಕೆ ಬಂದಿದೆ ಹೊಸ ಅಂಬಾರಿ

ಮಂಗಳೂರು:
ನಾಳೆ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ
ಡಿ.ಕೆ. ಶಿವಕುಮಾರ್‌ ಸಂಚಾರಕ್ಕೆ ‘ಅಂಬಾರಿ’ ಬಸ್ ಬಂದಿದೆ.

ಕದ್ರಿ ದೇವಸ್ಥಾನದಿಂದ ಪಡೀಲ್ ಪ್ರಜಾಸೌಧಕ್ಕೆ ಸಿಎಂ ಈ ಬಸ್ ಮೂಲಕ ಸಂಚರಿಸಲಿದ್ದಾರೆ.

ಬಸ್ಸನ್ನು ಉಸ್ತುವಾರಿ ಸಚಿವ ಯು.ಟಿ. ಖಾದರ್,
ಜಿಲ್ಲಾಧಿಕಾರಿ ದರ್ಶನ್, ಡಿಸಿಪಿ ಶಾಮ್ ವರ್ಗಿಸ್ ಮತ್ತಿತರ ಭದ್ರತಾ ಅಧಿಕಾರಿಗಳು ಪರಿಶೀಲನೆ ನಡೆಸಿದರು.

Comments

Leave a Comment

Prev Post ಮಂಗಳೂರು ನಗರಾಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ
Next Post ಯುಪಿಐ ಪಾವತಿಗೆ ಶುಲ್ಕ; ಕೇಂದ್ರದ ಸಚಿವರಿಗೆ ಪಿಕ್ ಪಾಕೆಟ್ ನಲ್ಲಿ ಪಿಎಚ್ ಡಿ: ಸಿಎಂ ಡಿ ಕೆ ಶಿವಕುಮಾರ್ ವ್ಯಂಗ್ಯ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News