PRABHAVAA.COM

ಪಿಲಿಕುಳಕ್ಕೆ ಹೊಸ ರೂಪ: 339.90 ಏಕರೆ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್; ಶೀಘ್ರ ಟೆಂಡರ್ — ಸಚಿವ ಡಾ. ಅಜಯ್ ಧರ್ಮಸಿಂಗ್

Bengaluru Urban:

Font size:

- ಪಿಪಿಪಿ ಮಾದರಿ, ಆರ್ಥಿಕ ಸ್ವಾವಲಂಬನೆ ಮತ್ತು ವಿಜ್ಞಾನ ಪ್ರವಾಸೋದ್ಯಮದ ಸಾಧ್ಯತೆಗಳಿಗೂ ಒತ್ತು

- ಕಲ್ಯಾಣ ಕರ್ನಾಟಕದಲ್ಲೂ ಸೈನ್ಸ್ ಗ್ಯಾಲರಿ ಸ್ಥಾಪಿಸುವ ಕುರಿತ ಸಾಧ್ಯತೆಗಳ ಬಗ್ಗೆ ಪರಿಶೀಲಿಸಲು ಸೂಚನೆ

ಬೆಂಗಳೂರು, ಸೆ.21 : ಮಂಗಳೂರಿನ ಪಿಲಿಕುಳ ನಿಸರ್ಗಧಾಮವನ್ನು ವಿಜ್ಞಾನ, ಪರಿಸರ, ಶಿಕ್ಷಣ ಮತ್ತು ಪ್ರವಾಸೋದ್ಯಮವನ್ನು ಒಳಗೊಂಡ ಸಮಗ್ರ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಮಾಸ್ಟರ್ ಪ್ಲಾನ್ ರೂಪಿಸಲಾಗುತ್ತಿದ್ದು, ಇದಕ್ಕಾಗಿ ಶೀಘ್ರದಲ್ಲೇ ಟೆಂಡರ್ ಕರೆಯುವಂತೆ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ್ ಧರ್ಮಸಿಂಗ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರಿನಲ್ಲಿ ಸೋಮವಾರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಹಿರಿಯ ಅಧಿಕಾರಿಗಳು, ವಿಜ್ಞಾನಿಗಳು ಹಾಗೂ ವಿವಿಧ ಅಧೀನ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಇಲಾಖೆಯ ಪ್ರಮುಖ ಯೋಜನೆಗಳು ಹಾಗೂ ಮುಂದಿನ ಕಾರ್ಯಕ್ರಮಗಳ ಕುರಿತು ಸಮಗ್ರ ಮಾಹಿತಿ ಪಡೆದರು.

ಪಿಲಿಕುಳದ ಅಭಿವೃದ್ಧಿ ಕುರಿತು ವಿಶೇಷವಾಗಿ ಚರ್ಚಿಸಿದ ಅವರು, ಲಭ್ಯವಿರುವ ಜಮೀನಿನ ಸಮರ್ಪಕ ಬಳಕೆ, ಈಗಿರುವ ಸೌಲಭ್ಯಗಳ ಉನ್ನತೀಕರಣ, ಹೊಸ ಆಕರ್ಷಣೆಗಳ ಅಭಿವೃದ್ಧಿ, ವಿಜ್ಞಾನ ಶಿಕ್ಷಣ, ಪರಿಸರ ಮತ್ತು ಜೈವವೈವಿಧ್ಯ ಸಂರಕ್ಷಣೆ ಹಾಗೂ ಪ್ರವಾಸಿಗರಿಗೆ ಉತ್ತಮ ಅನುಭವ ನೀಡುವ ಅಂಶಗಳು ಮಾಸ್ಟರ್ ಪ್ಲಾನ್‌ನಲ್ಲಿ ಒಳಗೊಳ್ಳಬೇಕು ಎಂದು ಸೂಚಿಸಿದರು.

“ಪಿಲಿಕುಳದಲ್ಲಿ ಉತ್ತಮ ಭೂಮಿ, ಪ್ರಕೃತಿ ಸಂಪತ್ತು ಹಾಗೂ ಈಗಾಗಲೇ ವಿಜ್ಞಾನ ಮತ್ತು ಪ್ರವಾಸೋದ್ಯಮಕ್ಕೆ ಪೂರಕವಾದ ಮೂಲಸೌಕರ್ಯ ಇದೆ. ಇದನ್ನು ತುಂಡು-ತುಂಡಾಗಿ ಅಭಿವೃದ್ಧಿಪಡಿಸುವ ಬದಲು ಮುಂದಿನ 10–15 ವರ್ಷಗಳ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಸಮಗ್ರ ಮಾಸ್ಟರ್ ಪ್ಲಾನ್ ರೂಪಿಸಬೇಕು. ಪಿಲಿಕುಳವನ್ನು ದೇಶದ ಪ್ರಮುಖ ವಿಜ್ಞಾನ ಮತ್ತು ಪರಿಸರ ಪ್ರವಾಸೋದ್ಯಮ ತಾಣಗಳಲ್ಲಿ ಒಂದಾಗಿ ಬೆಳೆಸುವ ಸಾಧ್ಯತೆಗಳನ್ನು ಪರಿಶೀಲಿಸಬೇಕು,” ಎಂದು ಡಾ. ಅಜಯ್ ಧರ್ಮಸಿಂಗ್ ಹೇಳಿದರು .

ಪಿಲಿಕುಳದ ಅಭಿವೃದ್ಧಿಯಲ್ಲಿ ಸಾರ್ವಜನಿಕ–ಖಾಸಗಿ ಸಹಭಾಗಿತ್ವ (PPP) ಮಾದರಿಯಲ್ಲಿ ಯಾವ ಯೋಜನೆಗಳನ್ನು ಕೈಗೆತ್ತಿಕೊಳ್ಳಬಹುದು, ಯಾವ ಸೌಲಭ್ಯಗಳನ್ನು ವಾಣಿಜ್ಯವಾಗಿ ಮತ್ತು ಸುಸ್ಥಿರವಾಗಿ ನಿರ್ವಹಿಸಬಹುದು ಹಾಗೂ ನಿಸರ್ಗಧಾಮವನ್ನು ಆರ್ಥಿಕವಾಗಿ ಸದೃಢಗೊಳಿಸಲು ಯಾವ ರೀತಿಯ ಆದಾಯ ಮಾದರಿಗಳನ್ನು ರೂಪಿಸಬಹುದು ಎಂಬುದನ್ನು ಮಾಸ್ಟರ್ ಪ್ಲಾನ್‌ನಲ್ಲಿ ಸಮಗ್ರವಾಗಿ ಅಧ್ಯಯನ ಮಾಡಬೇಕು ಎಂದು ಸಚಿವರು ಸೂಚಿಸಿದರು.

“ಸರ್ಕಾರದ ಅನುದಾನವನ್ನೇ ಅವಲಂಬಿಸುವ ವ್ಯವಸ್ಥೆಯ ಬದಲು, ಪಿಲಿಕುಳ ತನ್ನ ವೈಶಿಷ್ಟ್ಯವನ್ನು ಉಳಿಸಿಕೊಂಡೇ ಆರ್ಥಿಕವಾಗಿ ಸದೃಢವಾಗುವ ಮಾದರಿ ರೂಪಿಸಬೇಕು. ದೇಶ-ವಿದೇಶದ ಪ್ರವಾಸಿಗರನ್ನು ಆಕರ್ಷಿಸುವಂತಹ ಸೌಲಭ್ಯಗಳು, ವಿಜ್ಞಾನ ಚಟುವಟಿಕೆಗಳು ಹಾಗೂ ವಿಶಿಷ್ಟ ಅನುಭವಗಳನ್ನು ಅಭಿವೃದ್ಧಿಪಡಿಸುವ ಸಾಧ್ಯತೆಗಳನ್ನು ಮಾಸ್ಟರ್ ಪ್ಲಾನ್ ಪರಿಶೀಲಿಸಬೇಕು,” ಎಂದರು.

ವಿಜ್ಞಾನವನ್ನು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಹೆಚ್ಚು ಆಕರ್ಷಕ ಹಾಗೂ ಅನುಭವಾಧಾರಿತವಾಗಿ ತಲುಪಿಸುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲೂ ಸೈನ್ಸ್ ಗ್ಯಾಲರಿ ಸ್ಥಾಪಿಸುವ ಕುರಿತ ಸಾಧ್ಯತೆಗಳ ಬಗ್ಗೆ ಪರಿಶೀಲಿಸಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರಿನ ಸೈನ್ಸ್ ಗ್ಯಾಲರಿ ಜಾಗತಿಕ Science Gallery Network‌ನ ಏಷ್ಯಾದ ಮೊದಲ ಗ್ಯಾಲರಿ ಆಗಿದ್ದು, ವಿಜ್ಞಾನ, ಕಲೆ ಮತ್ತು ಸಾರ್ವಜನಿಕ ಸಂವಾದವನ್ನು ಒಂದೇ ವೇದಿಕೆಯಲ್ಲಿ ತರುವ ವಿಶಿಷ್ಟ ಮಾದರಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದೇ ಮಾದರಿಯ ಅನುಭವವನ್ನು ಕಲ್ಯಾಣ ಕರ್ನಾಟಕದ ವಿದ್ಯಾರ್ಥಿಗಳು ಮತ್ತು ಯುವಜನರಿಗೂ ತಲುಪಿಸುವ ಸಾಧ್ಯತೆಗಳನ್ನು ಪರಿಶೀಲಿಸುವಂತೆ ಸಚಿವರು ಸೂಚಿಸಿದರು.

ಅಲ್ಲದೆ, Science Gallery Bengaluru, ಇಲಾಖೆಯ ಅಧೀನದಲ್ಲಿರುವ ಪ್ರಾದೇಶಿಕ ವಿಜ್ಞಾನ ಕೇಂದ್ರಗಳು ಹಾಗೂ ತಾರಾಲಯಗಳ ನಡುವೆ ಪ್ರದರ್ಶನ ಮತ್ತು ವಿಜ್ಞಾನ ವಿಷಯಗಳನ್ನು ಮೇಳೈಸುವ ವ್ಯವಸ್ಥೆ ರೂಪಿಸುವ ಸಾಧ್ಯತೆಯನ್ನೂ ಪರಿಶೀಲಿಸಬೇಕು ಎಂದು ಹೇಳಿದರು.

ರಾಜ್ಯದ ವಿವಿಧ ಭಾಗಗಳಲ್ಲಿ ಇರುವ ವಿಜ್ಞಾನ ಕೇಂದ್ರಗಳು ಪ್ರತ್ಯೇಕ ಘಟಕಗಳಾಗಿ ಕಾರ್ಯನಿರ್ವಹಿಸುವುದಕ್ಕಿಂತ, ಪರಸ್ಪರ ಜ್ಞಾನ ಮತ್ತು ಪ್ರದರ್ಶನ ಸಂಪನ್ಮೂಲಗಳನ್ನು ಹಂಚಿಕೊಳ್ಳುವ ಜಾಲವಾಗಿ ಬೆಳೆಯುವುದರಿಂದ ವಿದ್ಯಾರ್ಥಿಗಳಿಗೆ ಹೊಸ ವಿಜ್ಞಾನ ಅನುಭವಗಳನ್ನು ನಿರಂತರವಾಗಿ ಒದಗಿಸಲು ಸಾಧ್ಯವಾಗಲಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.

ಸಭೆಯಲ್ಲಿ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಡಾ. ಎನ್. ಮಂಜುಳ, ಐಎಎಸ್, ಮಾಜಿ ಇಸ್ರೋ ಅಧ್ಯಕ್ಷ ಎ.ಎಸ್. ಕಿರಣ್ ಕುಮಾರ್, ಕರ್ನಾಟಕ ಕ್ವಾಂಟಮ್ ಟಾಸ್ಕ್ ಫೋರ್ಸ್ ಅಧ್ಯಕ್ಷ ಹಾಗೂ ಐಐಎಸ್‌ಸಿ ಪ್ರಾಧ್ಯಾಪಕ ಪ್ರೊ. ಅರಿಂದಮ್ ಘೋಷ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ವಿವಿಧ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

Comments

Leave a Comment

Prev Post ರಾಜ್ಯದ ರೈತರು, ಜನರ ರಕ್ಷಣೆಗೆ ಬದ್ಧ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್
Next Post ಕರ್ನಾಟಕ ಸರ್ಕಾರಿ PU ಕಾಲೇಜುಗಳಲ್ಲಿ 814 ಉಪನ್ಯಾಸಕರ ನೇಮಕಾತಿ – KEA ಮೂಲಕ ನೇರ ಸ್ಪರ್ಧಾತ್ಮಕ ಪರೀಕ್ಷೆ

21.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

21.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

25.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

25.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಪಶ್ಚಿಮಘಟ್ಟಗಳನ್ನು ಭವಿಷ್ಯದ ಪೀಳಿಗೆಯ ಜೀವನಾಡಿಯಾಗಿ ನೋಡಬೇಕು:ಈಶ್ವರ ಖಂಡ್ರೆ

ಎಫ್.ಕೆ.ಸಿಸಿಐ ಸುಸ್ಥಿರ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಶೃಂಗದ ಪೂರ್ವಭಾವಿ ಸಮಾರಂಭದಲ್ಲಿ ಭಾಗಿ ಪರಿಸರ ಸಂರಕ್ಷಣೆಯಲ್ಲಿ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪಾತ್ರ ಹಿರಿದು:ಈಶ್ವರ ಖಂಡ್ರೆ

20.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

20.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

22.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

22.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Read all News