PRABHAVAA.COM

ನಾಲ್ಕು ಸಾರಿಗೆ ನಿಗಮಗಳ ನೌಕರರ ಬೇಡಿಕೆ ಈಡೇರಿಕೆಗೆ ಸರ್ಕಾರಕ್ಕೆ ಒತ್ತಾಯ

Bengaluru Urban:

Font size:

ನಾಲ್ಕು ಸಾರಿಗೆ ನಿಗಮಗಳ ನೌಕರರ ಬೇಡಿಕೆ ಈಡೇರಿಕೆಗೆ ಸರ್ಕಾರಕ್ಕೆ ಒತ್ತಾಯ

ನಾಲ್ಕು ಸಾರಿಗೆ ನಿಗಮಗಳ ನೌಕರರ ಬೇಡಿಕೆ ಈಡೇರಿಕೆಗೆ ಸರ್ಕಾರಕ್ಕೆ ಒತ್ತಾಯ
ಬೆಂಗಳೂರು, ಸೆ.22: ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಕ್ಟೋಬರ್ 7ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹಕ್ಕೆ ಸಂಬಂಧಿಸಿದಂತೆ ಸಾರಿಗೆ ನೌಕರರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮಹತ್ವದ ನಿರ್ಧಾರ ಕೈಗೊಂಡಿದೆ.
ಸಾರಿಗೆ ನೌಕರರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಕ್ಟೋಬರ್ 7ರಂದು ನಡೆಯಬೇಕಿದ್ದ ಧರಣಿ ಸತ್ಯಾಗ್ರಹವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಜಂಟಿ ಕ್ರಿಯಾ ಸಮಿತಿ ತಿಳಿಸಿದೆ.
ಸಾರಿಗೆ ನೌಕರರ ವೇತನ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಸರ್ಕಾರದೊಂದಿಗೆ ಹಲವು ಹಂತಗಳಲ್ಲಿ ಚರ್ಚೆ ನಡೆದಿದ್ದು, ಕೆಲವು ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಸ್ಪಂದಿಸಿದೆ ಎಂದು ಸಮಿತಿ ತಿಳಿಸಿದೆ. 2026ರ ಫೆಬ್ರವರಿ 18 ಮತ್ತು ಮೇ 12ರಂದು ನಡೆದ ಸಭೆಗಳಲ್ಲಿ ನೀಡಿದ ಭರವಸೆಗಳ ಅನುಷ್ಠಾನಕ್ಕೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಲಾಗಿದೆ.
ಪ್ರಮುಖ ಬೇಡಿಕೆಗಳು
ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರಿಗೆ 01.01.2024ರಿಂದ ಅನ್ವಯವಾಗುವಂತೆ ರಾಜ್ಯ ಸರ್ಕಾರಿ ನೌಕರರಿಗೆ ನೀಡಿರುವ ವೇತನ ಪರಿಷ್ಕರಣೆಯ ಸೌಲಭ್ಯಗಳನ್ನು ಒದಗಿಸುವುದು.
ನೌಕರರಿಗೆ 2020ರ ಸಾಲಿನ 12 ತಿಂಗಳ ವೇತನ ಹಿಂಬಾಕಿಯನ್ನು ಪಾವತಿಸುವುದು.
2026ರ ಫೆಬ್ರವರಿ 18 ಮತ್ತು ಮೇ 12ರಂದು ನಡೆದ ಸಭೆಗಳಲ್ಲಿ ಚರ್ಚೆಯಾದ ವೇತನ ಪರಿಷ್ಕರಣೆ ಸೇರಿದಂತೆ ಇತರ ಬೇಡಿಕೆಗಳನ್ನು ಜಾರಿಗೊಳಿಸುವುದು.
ನೌಕರರಿಗೆ ಬಾಕಿ ಇರುವ ರೂ.1,792 ಕೋಟಿ ಮೊತ್ತವನ್ನು ಪಾವತಿಸುವುದು ಹಾಗೂ ಈಗಾಗಲೇ ಮಂಜೂರಾಗಿರುವ ರೂ.620 ಕೋಟಿ ಮತ್ತು ಇನ್ನಿತರ ಬಾಕಿ ಮೊತ್ತಗಳನ್ನು ಬಿಡುಗಡೆ ಮಾಡುವುದು.
ಚಾಲಕರು, ನಿರ್ವಾಹಕರು ಹಾಗೂ ತಾಂತ್ರಿಕ ಸಿಬ್ಬಂದಿಗೆ ವಾರದ ರಜೆ ಸೇರಿದಂತೆ ರಜಾ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವುದು.
ನೌಕರರಿಗೆ ನಿಗದಿತ ಸಮಯಕ್ಕೆ ಕರ್ತವ್ಯ ನಿರ್ವಹಿಸಲು ಹಾಗೂ ವಿಶ್ರಾಂತಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವುದು.
ನೌಕರರಿಗೆ ಬಾಕಿ ಉಳಿದಿರುವ ಪಿಎಫ್, ಗ್ರಾಚ್ಯುಟಿ, ತುಟ್ಟಿ ಭತ್ಯೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ನೀಡುವುದು.
ಸರ್ಕಾರಿ ಸಾರಿಗೆ ನಿಗಮಗಳಿಗೆ ಪಾವತಿಸಬೇಕಾದ ಶಕ್ತಿ ಯೋಜನೆಯ ಬಾಕಿ ಮೊತ್ತವನ್ನು ತಕ್ಷಣ ಬಿಡುಗಡೆ ಮಾಡಿ, ನಿಗಮಗಳಿಗೆ ಆರ್ಥಿಕ ನೆರವು ನೀಡುವುದು.
ಸರ್ಕಾರವು ನೀಡಿರುವ ಭರವಸೆಗಳ ಅನುಷ್ಠಾನವನ್ನು ಜಂಟಿ ಕ್ರಿಯಾ ಸಮಿತಿ ಗಮನಿಸುತ್ತಿದ್ದು, ಬೇಡಿಕೆಗಳ ಈಡೇರಿಕೆಯಲ್ಲಿ ವಿಳಂಬವಾದಲ್ಲಿ ಮುಂದಿನ ಹೋರಾಟದ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಮಿತಿ ತಿಳಿಸಿದೆ.
ಸಾರಿಗೆ ನೌಕರರ ಹಿತಾಸಕ್ತಿಗಾಗಿ ಸರ್ಕಾರದೊಂದಿಗೆ ನಿರಂತರವಾಗಿ ಚರ್ಚೆ ನಡೆಸಿ, ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಂಟಿ ಕ್ರಿಯಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಜ್ಯೋತಿ ಅನಂತಸುಬ್ಬರಾವ್ — ಕೆಎಸ್‌ಆರ್‌ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಷನ್ (ಎಐಟಿಯುಸಿ)
ಬಿ. ಜಯದೇವರಾಜೇ ಅರಸು — ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾ ಮಂಡಳಿ
ಎಚ್.ಡಿ. ರೇವಪ್ಪ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಫೆಡರೇಷನ್ (ಸಿಐಟಿಯು)
ಗಂಡಸಿ ಸದಾನಂದ ಸ್ವಾಮಿ ವಿಶ್ವ ಕಾರ್ಮಿಕರ ಕೂಟ ಸಾರಿಗೆ ನಿಗಮ
ಚಂದ್ರೇಗೌಡ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Comments

Leave a Comment

Prev Post ಬೆಂಗಳೂರು ನಗರ, ಗ್ರಾಮಾಂತರದ 135 ಕೆರೆಗಳಿಗೂ ಬರಲಿದೆ ಜೀವಕಳೆ
Next Post ಹಳ್ಳಿ ಮಕ್ಕಳಿಗೆ ತಂತ್ರಜ್ಞಾನ ತಲುಪಿಸಿ, ಭವಿಷ್ಯದ ಪೀಳಿಗೆಯನ್ನು ತಯಾರು ಮಾಡುವ ಕಿಯೋನಿಕ್ಸ್ ಪ್ರಯತ್ನ ಸ್ವಾಗತಾರ್ಹ: ಸಿಎಂ ಡಿ ಕೆ ಶಿವಕುಮಾರ್

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News