ಬಿಡದಿ ಭೂಸ್ವಾಧೀನ ವಿರೋಧಿಸಿ ರೈತರ ಅಹೋರಾತ್ರಿ ಉಪವಾಸ ಸತ್ಯಾಗ್ರಹಕ್ಕೆ ಮಾಜಿ ಪ್ರಧಾನಿ ದೇವೇಗೌಡರ ದೂರವಾಣಿ ಕರೆ
ಬಿಡದಿ ಭೂಸ್ವಾಧೀನ ವಿರೋಧಿಸಿ ರೈತರ ಅಹೋರಾತ್ರಿ ಉಪವಾಸ ಸತ್ಯಾಗ್ರಹಕ್ಕೆ ಮಾಜಿ ಪ್ರಧಾನಿ ದೇವೇಗೌಡರ ದೂರವಾಣಿ ಕರೆ
ಬೈರಮಂಗಲ, ಬಿಡದಿ, ದಿ. 25-09-2026:
ಬಿಡದಿ ಭೂಸ್ವಾಧೀನವನ್ನು ವಿರೋಧಿಸಿ ಬೈರಮಂಗಲದಲ್ಲಿ ರೈತರು ನಡೆಸುತ್ತಿರುವ ಅಹೋರಾತ್ರಿ ಉಪವಾಸ ಸತ್ಯಾಗ್ರಹ ಇಂದು 2ನೇ ದಿನಕ್ಕೆ ಕಾಲಿಟ್ಟಿದೆ.
ಇಂದು ಬೆಳಿಗ್ಗೆ 11 ಗಂಟೆಗೆ ಪ್ರತಿಭಟನಾ ಸ್ಥಳಕ್ಕೆ ಯುವ ನಾಯಕ ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ಭೇಟಿ ನೀಡಿ, ಉಪವಾಸ ನಿರತ ರೈತರ ಆರೋಗ್ಯ ವಿಚಾರಿಸಿ, ಅವರ ಹೋರಾಟಕ್ಕೆ ಸಂಪೂರ್ಣ ಬೆಂಬಲ ಸೂಚಿಸಿದರು. ರೈತರ ಜೊತೆ ನೆಲದ ಮೇಲೆ ಕುಳಿತು ಅವರ ಸಮಸ್ಯೆಗಳನ್ನು ಆಲಿಸಿದರು.
ಇದೇ ವೇಳೆ, ಮಾಜಿ ಪ್ರಧಾನಿ ಮಾನ್ಯ ಶ್ರೀ ಹೆಚ್.ಡಿ. ದೇವೇಗೌಡರು ದೂರವಾಣಿ ಮೂಲಕ ಪ್ರತಿಭಟನೆ ನಿರತ ರೈತರ ಜೊತೆ ಮಾತನಾಡಿ, ಧೈರ್ಯ ತುಂಬಿದರು. ರೈತರ ನ್ಯಾಯಯುತ ಹೋರಾಟದಲ್ಲಿ ತಾವು ಜೊತೆಗಿರುವುದಾಗಿ ಭರವಸೆ ನೀಡಿದರು.
ಫಲವತ್ತಾದ ಕೃಷಿ ಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುತ್ತಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.









Comments
Leave a Comment