PRABHAVAA.COM

ಮಂಗಳೂರು ಸಭಾಭವನದಲ್ಲಿ ಗೋಡೆ ಕುಸಿತ – ಐವರು ವಿದ್ಯಾರ್ಥಿಗಳು ಗಾಯಗೊಂಡರು, ಒಬ್ಬರ ಸ್ಥಿತಿ ಗಂಭೀರ

Dakshina Kannada:

Font size:

ಮಂಗಳೂರು ಸಭಾಭವನದಲ್ಲಿ ಗೋಡೆ ಕುಸಿತ – ಐವರು ವಿದ್ಯಾರ್ಥಿಗಳು ಗಾಯಗೊಂಡರು, ಒಬ್ಬರ ಸ್ಥಿತಿ ಗಂಭೀರ

From Jayram Udupi

ಮಂಗಳೂರು:
ಯೆಮ್ಮೇಕೆರೆ ಕ್ರಾಸ್‌ನ ರಾಮ ಲಕ್ಷ್ಮೀ ಹಾಲ್‌ನಲ್ಲಿ ನಡೆದ ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅವಘಡ ಸಂಭವಿಸಿ ಐವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅವರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಹಾಲ್‌ನ ಹೊರಗಿನ ಕಾರಿಡಾರ್‌ನಲ್ಲಿ ಕೆಲವರು ದುರ್ಬಲವಾಗಿದ್ದ ಗೋಡೆಯನ್ನು ಆಧರಿಸಿ ನಿಂತಿದ್ದರು. ಈ ವೇಳೆ ಸಪೋರ್ಟಿಂಗ್ ವಾಲ್ ಏಕಾಏಕಿ ಕುಸಿದು ಬಿದ್ದು ವಿದ್ಯಾರ್ಥಿಗಳು ಕೆಳಗೆ ಬಿದ್ದರು. ಗೋಡೆ ಕುಸಿತದಿಂದ ಹಲವರು ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಗಾಯಗೊಂಡವರಲ್ಲಿ ಒಬ್ಬ ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದ್ದು, ಉಳಿದ ನಾಲ್ವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಘಟನೆಯ ನಂತರ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಮತ್ತು ಸ್ಥಳೀಯ ಆಡಳಿತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಈ ದುರ್ಘಟನೆ ವಿದ್ಯಾರ್ಥಿ ಸಮಾರಂಭದ ಮಧ್ಯೆ ಸಂಭವಿಸಿರುವುದರಿಂದ, ಸುರಕ್ಷತಾ ಕ್ರಮಗಳ ಕೊರತೆ ಕುರಿತು ಪ್ರಶ್ನೆಗಳು ಎದ್ದಿವೆ. ಹಾಲ್‌ನ ಮೂಲಸೌಕರ್ಯ ಪರಿಶೀಲನೆಗೆ ಸಂಬಂಧಿಸಿದಂತೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

Comments

Leave a Comment

Prev Post ಚುನಾವಣಾ ಆಯೋಗದ ಸ್ವಾಯತ್ತತೆ ರಕ್ಷಿಸಲು ಸಿಇಸಿಯನ್ನು ವಜಾಗೊಳಿಸಿ, ಕ್ರಿಮಿನಲ್‌ ಪ್ರಕರಣ ದಾಖಲಿಸಿ: ಸಿದ್ದರಾಮಯ್ಯ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News