PRABHAVAA.COM

108 ಶಿಕ್ಷಕರು ಹಾಗೂ ಅಭಿಯಂತರರಿಗೆಶಾಸಕ ಕೃಷ್ಣಪ್ಪರವರಿಂದ ಗೌರವ

Bengaluru Urban:

Font size:

108 ಶಿಕ್ಷಕರು ಹಾಗೂ ಅಭಿಯಂತರರಿಗೆಶಾಸಕ ಕೃಷ್ಣಪ್ಪರವರಿಂದ ಗೌರವ

108 ಶಿಕ್ಷಕರು ಹಾಗೂ ಅಭಿಯಂತರರಿಗೆಶಾಸಕ ಕೃಷ್ಣಪ್ಪರವರಿಂದ ಗೌರವ
ಬೆಂಗಳೂರು, ಸೆ.26: ವಿಜಯನಗರದ ಹಂಪಿ ನಗರ ಗ್ರಂಥಾಲಯದ ಸಭಾಂಗಣದಲ್ಲಿ ನಡೆದ ಹೃದಯಸ್ಪರ್ಶ ಟ್ರಸ್ಟ್ (ರಿ.) ವತಿಯಿಂದ ಶಿಕ್ಷಕರ ದಿನಾಚರಣೆ ಹಾಗೂ ಅಭಿಯಂತರರ ದಿನಾಚರಣೆ ಅಂಗವಾಗಿ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಕೃಷ್ಣಪ್ಪ ಅವರು 108 ಶಿಕ್ಷಕರು ಹಾಗೂ ಅಭಿಯಂತರರನ್ನು ಗೌರವಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕೃಷ್ಣಪ್ಪ ಅವರು, ಶಿಕ್ಷಕರು ಸಮಾಜದ ಭವಿಷ್ಯವನ್ನು ರೂಪಿಸುವ ಪ್ರಮುಖ ಶಕ್ತಿಯಾಗಿದ್ದು, ವಿದ್ಯಾರ್ಥಿಗಳಲ್ಲಿ ಜ್ಞಾನ, ಶಿಸ್ತು ಹಾಗೂ ಉತ್ತಮ ಮೌಲ್ಯಗಳನ್ನು ಬೆಳೆಸುವಲ್ಲಿ ಅವರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಅದೇ ರೀತಿ ಅಭಿಯಂತರರು ತಮ್ಮ ತಾಂತ್ರಿಕ ಜ್ಞಾನ ಮತ್ತು ಕೌಶಲ್ಯದ ಮೂಲಕ ದೇಶದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತಿದ್ದಾರೆ. ಇಂತಹ ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮಗಳು ಮತ್ತಷ್ಟು ಜನರಿಗೆ ಪ್ರೇರಣೆಯಾಗಲಿವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ನಂಜುಂಡಸ್ವಾಮಿ, ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ಅಧ್ಯಕ್ಷ ಗಂಡಸಿ ಸದಾನಂದ ಸ್ವಾಮಿ, ಹೃದಯಸ್ಪರ್ಶ ಟ್ರಸ್ಟ್ ಅಧ್ಯಕ್ಷ ಸುರೇಶ್, ಶ್ರೀಮತಿ ಅಕ್ಷತಾ, ಬಸವರಾಜು, ಕಿರಣ್, ಮತ್ತು ಸಂತೋಷ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಶಿಕ್ಷಕರು ಹಾಗೂ ಅಭಿಯಂತರರ ಸೇವೆಯನ್ನು ಗುರುತಿಸಿ ಗೌರವಿಸಿದ ಕಾರ್ಯಕ್ರಮಕ್ಕೆ ಗಣ್ಯರು ಹಾಗೂ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.

Comments

Leave a Comment

Prev Post ಮಂಗಳೂರು ಸಭಾಭವನದಲ್ಲಿ ಗೋಡೆ ಕುಸಿತ – ಐವರು ವಿದ್ಯಾರ್ಥಿಗಳು ಗಾಯಗೊಂಡರು, ಒಬ್ಬರ ಸ್ಥಿತಿ ಗಂಭೀರ
Next Post ಕರ್ನಾಟಕ ಜೈನ ಧರ್ಮದ ಕರ್ಮ ಭೂಮಿ: ಸಿಎಂ ಡಿ ಕೆ ಶಿವಕುಮಾರ್

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News