PRABHAVAA.COM

AI ಮೂಲಕ ಪ್ರವಾಸೋದ್ಯಮವನ್ನು ಹೆಚ್ಚು ಸಮಗ್ರ, ಸುಸ್ಥಿರ ಮತ್ತು ಅರ್ಥಪೂರ್ಣವಾಗಿಸಲ ಸಚಿವ ಕೆ.ಜೆ. ಜಾರ್ಜ್ ಕರೆ

Bengaluru Urban:

Font size:

- ಡಿಜಿಟಲ್ ತಂತ್ರಜ್ಞಾನ–AI ಮೂಲಕ ಪ್ರವಾಸಿಗರಿಗೆ ವೈಯಕ್ತಿಕ ಅನುಭವ; ತಾಣಗಳ ನಿರ್ವಹಣೆಗೆ ದತ್ತಾಂಶ ಆಧಾರಿತ ಯೋಜನೆ

- ಇಲಾಖೆ ಇತಿಹಾಸದಲ್ಲಿ ಮೊದಲ ಬಾರಿಗೆ 35 ವಿಭಾಗಗಳಲ್ಲಿ ‘ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ’ ಪ್ರದಾನ

ಬೆಂಗಳೂರು, ಸೆಪ್ಟೆಂಬರ್ 27: ಕೃತಕ ಬುದ್ಧಿಮತ್ತೆ ಮತ್ತು ಡಿಜಿಟಲ್ ತಂತ್ರಜ್ಞಾನವನ್ನು ಕೇವಲ ಪ್ರವಾಸೋದ್ಯಮವನ್ನು 'ಸ್ಮಾರ್ಟ್’ ಮಾಡುವುದಕ್ಕೆ ಸೀಮಿತಗೊಳಿಸದೆ, ಅದನ್ನು ಹೆಚ್ಚು ಸಮಗ್ರ, ಸುಸ್ಥಿರ ಮತ್ತು ಅರ್ಥಪೂರ್ಣ ಕ್ಷೇತ್ರವಾಗಿ ರೂಪಿಸಲು ಬಳಸಬೇಕು ಎಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಕರೆ ನೀಡಿದರು.

ಇಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆ 2026 ರ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ಅವರೊಂದಿಗೆ 'ಕರ್ನಾಟಕ ಟುರಿಸಂ ಅವಾರ್ಡ್' ಪ್ರಧಾನ ಮಾಡಿ ಅವರು ಮಾತನಾಡಿದರು, ಪ್ರವಾಸೋದ್ಯಮ ಕ್ಷೇತ್ರವು ಡಿಜಿಟಲ್ ಮಾರ್ಕೆಟಿಂಗ್‌ನಿಂದ ಮುಂದೆ ಸಾಗಿ, ಪ್ರವಾಸಿಗರ ಅನುಭವವನ್ನು ಒಗ್ಗೂಡಿಸುವ ಡಿಜಿಟಲ್ ಪ್ರವಾಸೋದ್ಯಮ ಪರಿಸರ ವ್ಯವಸ್ಥೆಯಾಗಿ ರೂಪುಗೊಳ್ಳಬೇಕಿದೆ ಎಂದರು.

“ಕೃತಕ ಬುದ್ಧಿಮತ್ತೆಯನ್ನು ಕೇವಲ ಪ್ರವಾಸೋದ್ಯಮವನ್ನು ಸ್ಮಾರ್ಟ್ ಮಾಡಲು ಮಾತ್ರವಲ್ಲದೆ, ಅದನ್ನು ಹೆಚ್ಚು ಸಮಗ್ರ, ಸುಸ್ಥಿರ ಮತ್ತು ಅರ್ಥಪೂರ್ಣವಾಗಿಸಲು ಬಳಸೋಣ. ಈ ಬದಲಾವಣೆಯ ಲಾಭವು ದೊಡ್ಡ ಕಂಪನಿಗಳಿಗೆ ಮಾತ್ರವಲ್ಲದೆ, ಹೋಮ್‌ಸ್ಟೇ ಮಾಲೀಕರು, ಪ್ರವಾಸಿ ಗೈಡ್‌ಗಳು, ಕರಕುಶಲಕರ್ಮಿಗಳು, ಸಣ್ಣ ಉದ್ಯಮಿಗಳು ಹಾಗೂ ಯುವಜನತೆಗೆ ತಲುಪಬೇಕು,” ಎಂದು ಕೆ.ಜೆ. ಜಾರ್ಜ್ ಹೇಳಿದರು.

ಪ್ರವಾಸಿಗರ ಆಸಕ್ತಿ, ಪ್ರಯಾಣದ ಅವಧಿ ಮತ್ತು ಅಗತ್ಯಕ್ಕೆ ಅನುಗುಣವಾಗಿ ವೈಯಕ್ತಿಕ ಪ್ರವಾಸ ಯೋಜನೆ ರೂಪಿಸುವುದು, ಬಹುಭಾಷಾ ಮಾಹಿತಿ ನೀಡುವುದು ಹಾಗೂ ಅಧಿಕೃತ ಪ್ರವಾಸೋದ್ಯಮ ಸೇವಾ ಪೂರೈಕೆದಾರರೊಂದಿಗೆ ಸಂಪರ್ಕ ಕಲ್ಪಿಸುವುದು ಸೇರಿದಂತೆ AI ಆಧಾರಿತ ಸೇವೆಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಅವಕಾಶವಿದೆ. ಈ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ ಯೋಜನೆ ರೂಪಿಸುತ್ತಿದೆ ಎಂದರು.

AI ಮತ್ತು ದತ್ತಾಂಶ ವಿಶ್ಲೇಷಣೆಯ ಮೂಲಕ ಪ್ರವಾಸಿಗರ ಸಂಚಾರ, ತಾಣಗಳ ಜನಪ್ರಿಯತೆ, ಋತುಮಾನ ಬೇಡಿಕೆ, ವಸತಿ ಮಾದರಿ ಮತ್ತು ಮೂಲಸೌಕರ್ಯ ಅಗತ್ಯಗಳನ್ನು ಮುಂಚಿತವಾಗಿ ಗುರುತಿಸಿ ದತ್ತಾಂಶ ಆಧಾರಿತ ತಾಣ ನಿರ್ವಹಣೆಗೆ ಒತ್ತು ನೀಡಬೇಕು ಎಂದು ತಿಳಿಸಿದರು.

ಬೆಂಗಳೂರು ಹೊಂದಿರುವ ತಂತ್ರಜ್ಞಾನ, ಸ್ಟಾರ್ಟ್‌ಅಪ್ ಮತ್ತು ಸಂಶೋಧನಾ ಸಾಮರ್ಥ್ಯವನ್ನು ಪ್ರವಾಸೋದ್ಯಮ ಕ್ಷೇತ್ರದೊಂದಿಗೆ ಜೋಡಿಸಿ ಸ್ಮಾರ್ಟ್ ಪ್ರವಾಸಿ ತಾಣಗಳು, ಬಹುಭಾಷಾ ಸೇವೆಗಳು, ವರ್ಚುವಲ್ ಅನುಭವಗಳು, ಪ್ರವಾಸಿಗರ ದಟ್ಟಣೆ ನಿರ್ವಹಣೆ ಹಾಗೂ ಸುಸ್ಥಿರ ಪ್ರವಾಸೋದ್ಯಮಕ್ಕೆ ಹೊಸ ತಾಂತ್ರಿಕ ಪರಿಹಾರಗಳನ್ನು ರೂಪಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಹೇಳಿದರು.

ಸಣ್ಣ ಹೋಟೆಲ್‌ಗಳು, ಹೋಮ್‌ಸ್ಟೇಗಳು, ಪ್ರವಾಸಿ ಗೈಡ್‌ಗಳು, ಸಾರಿಗೆ ಸೇವಾದಾರರು, ಕರಕುಶಲಕರ್ಮಿಗಳು ಹಾಗೂ ಸ್ಥಳೀಯ ಉದ್ಯಮಿಗಳು ಡಿಜಿಟಲ್ ಆರ್ಥಿಕತೆಯ ಭಾಗವಾಗುವಂತೆ ತರಬೇತಿ ಮತ್ತು ತಾಂತ್ರಿಕ ನೆರವು ಒದಗಿಸುವ ಅಗತ್ಯವನ್ನೂ ಸಚಿವರು ಪ್ರತಿಪಾದಿಸಿದರು.

ಪ್ರಪ್ರಥಮ ಬಾರಿಗೆ ‘ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ’

ಕಾರ್ಯಕ್ರಮದಲ್ಲಿ ಇದೇ ಮೊದಲ ಬಾರಿಗೆ ‘ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ’ಗಳನ್ನು 35 ವಿಭಾಗಗಳಲ್ಲಿ ನೀಡಿ, ಪ್ರವಾಸೋದ್ಯಮ ಕ್ಷೇತ್ರದ ವಿವಿಧ ವಿಭಾಗಗಳಲ್ಲಿ ಸಾಧನೆ ಮಾಡಿದವರನ್ನು ಗೌರವಿಸಲಾಯಿತು.

ಹೋಟೆಲ್ ಮತ್ತು ಆತಿಥ್ಯ, ಪ್ರವಾಸ ಆಯೋಜಕರು, ಪ್ರವಾಸಿ ಮಾರ್ಗದರ್ಶಿಗಳು, ಸ್ಟಾರ್ಟ್‌ಅಪ್‌ಗಳು, ಗ್ರಾಮೀಣ ಪ್ರವಾಸೋದ್ಯಮ, ಪರಿಸರ ಸ್ನೇಹಿ ಯೋಜನೆಗಳು, ಐತಿಹಾಸಿಕ ತಾಣಗಳು ಮತ್ತು ಇತರೆ ವಿಭಾಗಗಳಲ್ಲಿ ಉತ್ತಮ ಸಾಧನೆ ಮಾಡಿದವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಈ ಸಂದರ್ಭದಲ್ಲಿ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದ ಕೆ.ಜೆ. ಜಾರ್ಜ್, ಸರ್ಕಾರ, ಪ್ರವಾಸೋದ್ಯಮ ಉದ್ಯಮ, ತಂತ್ರಜ್ಞಾನ ಕಂಪನಿಗಳು, ಶೈಕ್ಷಣಿಕ ಸಂಸ್ಥೆಗಳು ಮತ್ತು ಸ್ಥಳೀಯ ಸಮುದಾಯಗಳ ಸಹಭಾಗಿತ್ವದ ಮೂಲಕ ಕರ್ನಾಟಕ ಪ್ರವಾಸೋದ್ಯಮವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಬೇಕು ಎಂದು ಕರೆ ನೀಡಿದರು.

Comments

Leave a Comment

Prev Post ಕರ್ನಾಟಕ ಜೈನ ಧರ್ಮದ ಕರ್ಮ ಭೂಮಿ: ಸಿಎಂ ಡಿ ಕೆ ಶಿವಕುಮಾರ್
Next Post ಎಲ್ಲ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಕಾಂಗ್ರೆಸ್‌ ಅನುಮಾನ, ಪ್ರತಿಪಕ್ಷ ನಾಯಕ ಆರ್‌.ಅಶೋಕ ಆರೋಪ:

21.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

21.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

25.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

25.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಪಶ್ಚಿಮಘಟ್ಟಗಳನ್ನು ಭವಿಷ್ಯದ ಪೀಳಿಗೆಯ ಜೀವನಾಡಿಯಾಗಿ ನೋಡಬೇಕು:ಈಶ್ವರ ಖಂಡ್ರೆ

ಎಫ್.ಕೆ.ಸಿಸಿಐ ಸುಸ್ಥಿರ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಶೃಂಗದ ಪೂರ್ವಭಾವಿ ಸಮಾರಂಭದಲ್ಲಿ ಭಾಗಿ ಪರಿಸರ ಸಂರಕ್ಷಣೆಯಲ್ಲಿ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪಾತ್ರ ಹಿರಿದು:ಈಶ್ವರ ಖಂಡ್ರೆ

20.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

20.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

22.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

22.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Read all News