ದಾವಣಗೆರೆ ದಕ್ಷಿಣ ಕ್ಷೇತ್ರದ ಜನ ಬದಲಾವಣೆ ಬಯಸಿದ್ದಾರೆ, ಬೇಸತ್ತ ಮತದಾರ ಬಿಜೆಪಿ ಗೆಲ್ಲಿಸಲಿದ್ದಾರೆ: ಬಿ.ವೈ. ವಿಜಯೇಂದ್ರ

Davanagere:

Font size:

ದಾವಣಗೆರೆ ದಕ್ಷಿಣ ಕ್ಷೇತ್ರದ ಜನ ಬದಲಾವಣೆ ಬಯಸಿದ್ದಾರೆ, ಬೇಸತ್ತ ಮತದಾರ ಬಿಜೆಪಿ ಗೆಲ್ಲಿಸಲಿದ್ದಾರೆ: ಬಿ.ವೈ. ವಿಜಯೇಂದ್ರ

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಮತದಾರರು ಈ ಬಾರಿ ಬದಲಾವಣೆ ಬಯಸಿದ್ದು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರನ್ನು ಗೆಲ್ಲಿಸಲಿದ್ದಾರೆ. ಇಷ್ಟು ವರ್ಷಗಳ ಕಾಲ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದರೂ ಯಾವುದೇ ಅಭಿವೃದ್ಧಿಯಾಗಿಲ್ಲ. ಇದರಿಂದ ಮತದಾರರು ಬೇಸತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದರು.
ಉಪಚುನಾವಣೆ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆ ರಾಜ್ಯದ ರಾಜಕಾರಣದ ದಿಕ್ಕನ್ನು ಬದಲಿಸುವ ಒಂದು ಪ್ರಮುಖ ಶಕ್ತಿಯಾಗಲಿವೆ ಎಂಬುದನ್ನು ಸಾರ್ವಜನಿಕರೇ ಮಾತನಾಡುತ್ತಿದ್ದಾರೆ ಎಂದರು.
ಇಷ್ಟು ವರ್ಷಗಳ ಕಾಲ ಸುದೀರ್ಘವಾಗಿ ಕ್ಷೇತ್ರ ಕಾಂಗ್ರೆಸ್‍ನ ಹಿಡಿತದಲ್ಲಿ ಇದ್ದರೂ ಇಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಆಗಿಲ್ಲ. ಈ ಬಾರಿಯಾದರೂ ನಾವು ಬದಲಾವಣೆ ಮಾಡಬೇಕು ಎಂದು ಬಯಸಿದ್ದಾರೆ. ಹಣಬಲ ಮತ್ತು ತೋಳ್ಬಲಕ್ಕೆ ಲೆಕ್ಕಿಸದೆ ಬಿಜೆಪಿ ಅಭ್ಯರ್ಥಿ ಶ್ರೀನಿವಾಸದಾಸ ಕರಿಯಪ್ಪ ಅವರನ್ನು ಗೆಲ್ಲಿಸಬೇಕು ಎಂದು ತೀರ್ಮಾನಿಸಿದ್ದಾರೆ ಎಂದು ನುಡಿದರು.
ಕರಿಯಪ್ಪ ಅವರು ಒಬ್ಬ ಸಾಮಾನ್ಯ ವ್ಯಕ್ತಿ. ಅವರನ್ನು ಗೆಲ್ಲಿಸಿದರೆ ಬಡವರಿಗೆ, ಹಿಂದುಳಿದ ವರ್ಗಗಳಿಗೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿ ಎಲ್ಲ ಸಮುದಾಯಗಳಿಗೆ ನ್ಯಾಯ ಸಿಗಲಿದೆ ಎಂದರು.
ದಕ್ಷಿಣ ಕ್ಷೇತ್ರದ ಅಭ್ಯರ್ಥಿಗಳ ಬಗ್ಗೆ ಸಾಕಷ್ಟು ಗೊಂದಲ ಇದ್ದರೂ ಒಂದು ಬಾರಿ ವರಿಷ್ಠರು ಶ್ರೀನಿಸಾಸ್ ಅವರೇ ಅಭ್ಯರ್ಥಿ ಎಂದು ಘೋಷಣೆ ಮಾಡಿದ ನಂತರ ಎಲ್ಲ ಮುಖಂಡರು ಒಟ್ಟಾಗಿ ಒಂದಾಗಿ ಒಂದೇ ಧ್ವನಿಯಲ್ಲಿ ಪಕ್ಷದ ಅಭ್ಯರ್ಥಿ ಪರವಾಗಿ ದುಡಿಯಲು ನಿರ್ಧರಿಸಿದ್ದಾರೆ ಎಂದು ವಿವರಿಸಿದರು.

ಪ್ರತಿ ಬೂತ್‍ನಲ್ಲೂ ನಮ್ಮ ಕಾರ್ಯಕರ್ತರು, ಹಗಲು ರಾತ್ರಿ ಶ್ರಮ ಹಾಕಿ ಮತದಾರರ ಮನಸು ಗೆಲ್ಲಲು ಶ್ರಮಿಸುತ್ತಿದ್ದಾರೆ. ಈ ಬಾರಿ ದಕ್ಷಿಣ ಕ್ಷೇತ್ರದ ಫಲಿತಾಂಶ ಬಿಜೆಪಿ ಪರವಾಗಿ ಇರಲಿದೆ. ಎನ್‍ಡಿಎ ಅಭ್ಯರ್ಥಿ ದೊಡ್ಡ ಅಂತರದಲ್ಲಿ ಗೆಲ್ಲಲಿದ್ದಾರೆ ಎಂಬ ವಿಶ್ವಾಸ ಇದೆ ಎಂದರು.
ಮತಬ್ಯಾಂಕ್ ಆಗಿ ದುರ್ಬಳಕೆ.....
ಕ್ಷೇತ್ರದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರಿಗೆ ಏನೂ ಮಾಡಲಿಲ್ಲ. ಕಾಂಗ್ರೆಸ್ ಪಕ್ಷ ತಮ್ಮನ್ನು ಮತ ಬ್ಯಾಂಕ್ ಆಗಿ ದುರ್ಬಳಕೆ ಮಾಡಿಕೊಂಡಿದೆ ಎಂದು ಅಲ್ಪಸಂಖ್ಯಾತರೇ ಆರೋಪ ಮಾಡುತ್ತಿದ್ದಾರೆ. ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಮರೆತಿದೆ. ಇದರ ಜೊತೆ ರಾಜ್ಯ ಸರ್ಕಾರದ ವೈಫಲ್ಯ ಇದೆ. ಸಿದ್ದರಾಮಯ್ಯ ಅವರು ಬಜೆಟ್ ಮಂಡನೆಯಲ್ಲಿ ದಾಖಲೆ ಮಾಡಿದರೂ ರಾಜ್ಯಕ್ಕಾಗಲಿ, ದಾವಣಗೆರೆ ದಕ್ಷಿಣಕ್ಕಾಗಲಿ ಅನುಕೂಲವಾಗಿಲ್ಲ. ಸಿದ್ದರಾಮಯ್ಯ ಅವರು ಇತ್ತೀಚೆಗೆ ಮಂಡಿಸಿದ ಬಜೆಟ್ ಅಭಿವೃದ್ಧಿಗೆ ಪೂರಕವಾಗಿಲ್ಲ. ಐದು ರಾಜ್ಯಗಳ ಚುನಾವಣೆ ನಂತರ ಹೈಕಮಾಂಡ್ ಮಾತು ಕೇಳಿ ರಾಜೀನಾಮೆ ನೀಡುವ ಸ್ಥಿತಿಗೆ ಸಿದ್ದರಾಮಯ್ಯ ಬರುತ್ತಾರೆ ಎಂದರು.
ಎಲ್ಲ ನಾಯಕರೂ ಪ್ರಚಾರಕ್ಕೆ ಬರಲಿದ್ದಾರೆ....
ದಾವಣಗೆರೆ ದಕ್ಷಿಣ ಕ್ಷೇತ್ರದ ಚುನಾವಣಾ ಪ್ರಚಾರಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿರೋಧಪಕ್ಷದ ನಾಯಕರಾದ ಆರ್ ಅಶೋಕ್, ವಿಧಾನ ಪರಿಷತ್ತಿನ ವಿರೋಧಪಕ್ಷದ ನಾಯಕರಾದ ಛಲವಾದಿ ನಾರಾಯಣ ಸ್ವಾಮಿ ಸೇರಿ ರಾಜ್ಯದ ಎಲ್ಲ ಮುಖಂಡರು ಇಂದಿನಿಂದ ಪ್ರವಾಸಕ್ಕೆ ಬರಲಿದ್ದಾರೆ. ಕಾರ್ಯಕರತರಿಗೆ ಉತ್ಸಾಹ ತುಂಬಲಿದ್ದಾರೆ ಎಂದರು.
ಬಿಜೆಪಿ ಅವಧಿಯಲ್ಲೇ ದಾವಣಗೆರೆ ಅಭಿವೃದ್ಧಿ....
ದಾವಣಗೆರೆಯ ಅಭಿವೃದ್ಧಿ ಆಗಿರುವುದು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿಎಸ್‍ವೈ ಹಾಗೂ ಬೊಮ್ಮಾಯಿ ಅವರು ಸಿಎಂ ಆಗಿದ್ದಾಗ ಇಲ್ಲಿನ ಅಭಿವೃದ್ಧಿಗೆ ಸಾಕಷ್ಟು ಹಣ ನೀಡಿದರು. ಜಿ.ಎಂ. ಸಿದೇಶ್ವರ್ ಅವರು ಸಂಸದರಾಗಿದ್ದಾಗ ಸ್ಮಾರ್ಟ್ ಸಿಟಿಗೆ ಅನುದಾನ ತಂದರು ಎಂದರು.
ಮಾಜಿ ಸಂಸದರಾದ ಜಿ.ಎಂ. ಸಿದ್ದೇಶ್ವರ್, ವಿಧಾನಪರಿಷತ್‍ನ ಮಾಜಿ ಸದಸ್ಯ ಶಿವಯೋಗಿಸ್ವಾಮಿ ಶಾಸಕರಾದ ಬಿ.ಪಿ. ಹರೀಶ್, ಜಿಲ್ಲಾಧ್ಯಕ್ಷ ಎನ್. ರಾಜಶೇಖರ್, ಮಾಜಿ ಸಚಿವರಾದ ಶಿವನಗೌಡ ನಾಯಕ್, ಮಾಜಿ ಶಾಸಕರಾದ ರಾಮಚಂದ್ರಪ್ಪ, ಗಾಯತ್ರಿ ಸಿದ್ದೇಶ್ವರ್, ರಾಜ್ಯ ವಕ್ತಾರ ನರೇಂದ್ರ ರಂಗಪ್ಪ ಮತ್ತಿತರರು ಉಪಸ್ಥಿತರಿದ್ದರು.

Comments

Leave a Comment

Prev Post ನ್ಯಾಯವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ಪೊಲೀಸ್ ಅಕಾಡೆಮಿ ಸಿಬ್ಬಂದಿಗೆ ₹2 ಲಕ್ಷ ಬಹುಮಾನ ಘೋಷ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News