PRABHAVAA.COM

ಅಚ್ಚುಕಟ್ಟು ಪ್ರದೇಶಗಳ ಅಭಿವೃದ್ಧಿಗೆ CADA ಕಾರ್ಯ ಮತ್ತಷ್ಟು ಪರಿಣಾಮಕಾರಿಯಾಗಲಿ: ಸಚಿವ ಚಲುವರಾಯಸ್ವಾಮಿ

Bengaluru Urban:

Font size:

ಅಚ್ಚುಕಟ್ಟು ಪ್ರದೇಶಗಳ ಅಭಿವೃದ್ಧಿಗೆ CADA ಕಾರ್ಯ ಮತ್ತಷ್ಟು ಪರಿಣಾಮಕಾರಿಯಾಗಲಿ: ಖಾಲಿ ಹುದ್ದೆ ಭರ್ತಿಗೆ ಸೂಚನೆ - ಸಚಿವ ಚಲುವರಾಯಸ್ವಾಮಿ

ಬೆಂಗಳೂರು, ಸೆ.28: ರಾಜ್ಯದ ನೀರಾವರಿ ಯೋಜನೆಗಳ ಅಚ್ಚುಕಟ್ಟು ಪ್ರದೇಶಗಳಲ್ಲಿ ನೀರಿನ ಸಮರ್ಪಕ ಬಳಕೆ, ಕೃಷಿ ಉತ್ಪಾದಕತೆ ಹೆಚ್ಚಳ ಹಾಗೂ ರೈತರ ಆರ್ಥಿಕ ಅಭಿವೃದ್ಧಿಗೆ ಪೂರಕವಾಗುವಂತೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರಗಳ (CADA) ಕಾರ್ಯಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರಗಳ ನಿರ್ದೇಶನಾಲಯದ ಸಭೆಯು ಸಚಿವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ CADA ಪ್ರಾಧಿಕಾರಗಳ ಕಾರ್ಯನಿರ್ವಹಣೆ, ಅಚ್ಚುಕಟ್ಟು ಪ್ರದೇಶಗಳ ಅಭಿವೃದ್ಧಿ, ನೀರಾವರಿ ವ್ಯವಸ್ಥೆಯ ಸಮರ್ಪಕ ನಿರ್ವಹಣೆ, ನೀರಾವರಿ ಬಳಕೆದಾರರ ಸಂಘಗಳ ಬಲವರ್ಧನೆ ಹಾಗೂ ರೈತರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಕುರಿತು ವಿವರವಾಗಿ ಚರ್ಚಿಸಲಾಯಿತು. ಈಗಾಗಲೇ ಕಾಮಗಾರಿ ನಡೆದಿರುವ ಸ್ಥಳಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ಸಚಿವರು ತಿಳಿಸಿದರು.

ಅಚ್ಚುಕಟ್ಟು ಪ್ರದೇಶಗಳ ಅಭಿವೃದ್ಧಿ ಕಾಮಗಾರಿಗಳು ಕೇವಲ ಮೂಲಸೌಕರ್ಯ ನಿರ್ಮಾಣಕ್ಕೆ ಸೀಮಿತವಾಗದೆ, ರೈತರಿಗೆ ನೇರವಾಗಿ ಪ್ರಯೋಜನವಾಗುವ ರೀತಿಯಲ್ಲಿ ಹಾಗೂ ಕೃಷಿ ಉತ್ಪಾದನೆ ಹೆಚ್ಚಳಕ್ಕೆ ಪೂರಕವಾಗುವಂತೆ ಯೋಜನೆ ರೂಪಿಸಿ ಅನುಷ್ಠಾನಗೊಳಿಸಬೇಕು ಎಂದು ಸೂಚನೆ ನೀಡಿದರು.

WUCSಗಳ ಬಲವರ್ಧನೆಗೆ ಒತ್ತು

ನೀರಾವರಿ ಬಳಕೆದಾರರ ಸಂಘಗಳು (WUCS) ಅಚ್ಚುಕಟ್ಟು ಪ್ರದೇಶಗಳ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಅವುಗಳ ಕಾರ್ಯಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂದು ಸಚಿವರು ತಿಳಿಸಿದರು.

ನೀರಿನ ಸಮರ್ಪಕ ಹಂಚಿಕೆ ಮತ್ತು ಬಳಕೆಯಲ್ಲಿ ರೈತರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸುವುದು, ನೀರಿನ ಮಿತವ್ಯಯದ ಬಳಕೆ ಕುರಿತು ಜಾಗೃತಿ ಮೂಡಿಸುವುದು ಹಾಗೂ ಅಚ್ಚುಕಟ್ಟು ಪ್ರದೇಶಗಳ ನಿರ್ವಹಣೆಯಲ್ಲಿ ರೈತರ ಸಹಭಾಗಿತ್ವವನ್ನು ಖಚಿತಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಖಾಲಿ ಹುದ್ದೆಗಳ ಭರ್ತಿಗೆ ತಕ್ಷಣ ಕ್ರಮ

CADA ವ್ಯಾಪ್ತಿಯಲ್ಲಿ ಹಲವು ಹುದ್ದೆಗಳು ಖಾಲಿ ಇರುವ ಪರಿಣಾಮ ಅಭಿವೃದ್ಧಿ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಯೋಜನೆಗಳನ್ನು ನಿಗದಿತ ಅವಧಿಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ, ನಿರ್ದೇಶನಾಲಯದ ವ್ಯಾಪ್ತಿಯಲ್ಲಿರುವ ಎಲ್ಲಾ ಖಾಲಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಕುರಿತು ಮುಖ್ಯಮಂತ್ರಿಗಳ ನಿರ್ದೇಶನವೂ ಇರುವ ಹಿನ್ನೆಲೆಯಲ್ಲಿ, ಯಾವುದೇ ವಿಳಂಬಕ್ಕೆ ಅವಕಾಶ ನೀಡದೆ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ತಿಳಿಸಿದರು.

ಕೃಷಿ ಉತ್ಪಾದಕತೆ ಹೆಚ್ಚಳಕ್ಕೆ ಸಮಗ್ರ ಕ್ರಮ

ಅಚ್ಚುಕಟ್ಟು ಪ್ರದೇಶಗಳಲ್ಲಿ ನೀರಾವರಿ ಸೌಲಭ್ಯದ ಜೊತೆಗೆ ಕೃಷಿ ಉತ್ಪಾದಕತೆ ಹೆಚ್ಚಳ, ಸೂಕ್ತ ಬೆಳೆ ಪದ್ಧತಿಗಳ ಉತ್ತೇಜನ ಹಾಗೂ ರೈತರಿಗೆ ಅಗತ್ಯವಿರುವ ಮೂಲಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಸಚಿವರು ಹೇಳಿದರು.

ಭೂಮಿಯ ಉತ್ಪಾದಕತೆ ಕುಂಠಿತವಾಗಿರುವ ಪ್ರದೇಶಗಳನ್ನು ಗುರುತಿಸಿ ಭೂಮಿ ಪುನಶ್ಚೇತನ ಕಾರ್ಯಗಳನ್ನು ಕೈಗೊಳ್ಳಬೇಕು. ಅಚ್ಚುಕಟ್ಟು ಪ್ರದೇಶಗಳಲ್ಲಿನ ಸಮಸ್ಯೆಗಳನ್ನು ಸ್ಥಳೀಯವಾಗಿ ಗುರುತಿಸಿ, ಅಗತ್ಯವಿರುವ ಅಭಿವೃದ್ಧಿ ಕಾರ್ಯಕ್ರಮಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳುವಂತೆ ಸೂಚಿಸಿದರು.

CADA ಪ್ರಾಧಿಕಾರಗಳು ಸಂಬಂಧಿಸಿದ ಇಲಾಖೆಗಳು, ನೀರಾವರಿ ಬಳಕೆದಾರರ ಸಂಘಗಳು ಹಾಗೂ ತಾಂತ್ರಿಕ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ CADA ಪ್ರಾಧಿಕಾರದ ನಿರ್ದೇ

Comments

Leave a Comment

Prev Post ಕರ್ನಾಟಕ ಸರ್ಕಾರದ ಶಾಖಾಧಿಕಾರಿ (ಉಳಿಕೆ ಮೂಲ ವೃಂದ) ಅಧಿಕಾರಿಗಳಿಗೆ ಬಡ್ತಿ: ರೂ. 83,700 – 1,55,200 ವೇತನ ಶ್ರೇಣಿಯೊಂದಿಗೆ ಅಧೀನ ಕಾರ್ಯದರ್ಶಿ ಹುದ್ದೆಗೆ ನಿಯುಕ್ತಿ
Next Post ಸಂಸ್ಕೃತಿ, ಸಂಸ್ಕಾರವನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ನಮ್ಮ ಜವಾಬ್ದಾರಿ: ಡಾ. ಜಿ. ಪರಮೇಶ್ವರ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News