PRABHAVAA.COM

ಬಳ್ಳಾರಿ ಚಲೋ ಪ್ರೇರಣೆಯಿಂದಲೇ ಕಾಂಗ್ರೆಸ್ ಪಾದಯಾತ್ರೆ

Chitradurga:

Font size:

ಶಿಕಾರಿಪುರದಿಂದಲೇ ರಾಜ್ಯದಲ್ಲಿ ಹೋರಾಟದ ಕಿಚ್ಚು ಹಚ್ಚಿದ್ದು: ಬಿ.ವೈ. ವಿಜಯೇಂದ್ರ

ಬಳ್ಳಾರಿ ಚಲೋ ಪ್ರೇರಣೆಯಿಂದಲೇ ಕಾಂಗ್ರೆಸ್ ಪಾದಯಾತ್ರೆ

ಶಿಕಾರಿಪುರದಿಂದಲೇ ರಾಜ್ಯದಲ್ಲಿ ಹೋರಾಟದ ಕಿಚ್ಚು ಹಚ್ಚಿದ್ದು: ಬಿ.ವೈ. ವಿಜಯೇಂದ್ರ

ಚಿತ್ರದುರ್ಗ: ಬಿಜೆಪಿ ನಡೆಸಿದ ‘ಬಳ್ಳಾರಿ ಚಲೋ’ ಪಾದಯಾತ್ರೆಯ ಪ್ರೇರಣೆಯಿಂದಲೇ ಇಂದು ಕಾಂಗ್ರೆಸ್ ಪಕ್ಷ ಪಾದಯಾತ್ರೆ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವ್ಯಂಗ್ಯವಾಡಿದರು.

ಚಿತ್ರದುರ್ಗದ ಜಯದೇವ ಕ್ರೀಡಾಂಗಣದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ಪ್ರತಿಷ್ಠಾಪಿಸಿರುವ ‘ಹಿಂದೂ ಮಹಾಗಣಪತಿ’ಯ ದರ್ಶನ ಪಡೆದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.
“ಕೆಪಿಸಿಸಿ ಅಧ್ಯಕ್ಷರು ನನ್ನದೇ ಕ್ಷೇತ್ರದಲ್ಲಿ ಪಾದಯಾತ್ರೆ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಹೋರಾಟದ ಕಿಚ್ಚು ಹಚ್ಚಿಸಿದ ಕೀರ್ತಿ ಶಿಕಾರಿಪುರಕ್ಕೆ ಸಲ್ಲುತ್ತದೆ. ಕೆಪಿಸಿಸಿ ಅಧ್ಯಕ್ಷರಿಗೆ ಒಳ್ಳೆಯದಾಗಲಿ ಎಂದು ನಾನು ಹಾರೈಸುತ್ತೇನೆ,” ಎಂದು ವಿಜಯೇಂದ್ರ ಹೇಳಿದರು.

ಹರಿಪ್ರಸಾದ್‌ಗೆ ವಿಜಯೇಂದ್ರ ತಿರುಗೇಟು

ತಮ್ಮ ರಾಜಕೀಯ ಅನುಭವದ ಕುರಿತು ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಮಾಡಿರುವ ಟೀಕೆಗೆ ತಿರುಗೇಟು ನೀಡಿದ ವಿಜಯೇಂದ್ರ, “ನಾನು ಎಲ್‌‌ಕೆಜಿ ವಿದ್ಯಾರ್ಥಿ ಇರಬಹುದು, ಮೊದಲ ಸಲ ಶಾಸಕನಾಗಿರಬಹುದು. ಆದರೆ ಹರಿಪ್ರಸಾದ್ ಅವರು ಪಿಎಚ್‌ಡಿ ಮಾಡಿದ್ದರೂ ಇದುವರೆಗೂ ನೇರ ಚುನಾವಣೆಯಲ್ಲಿ ಗೆದ್ದಿಲ್ಲ,” ಎಂದು ತಿವಿದರು.

“ಬ್ಯಾನರ್ ಹರಿದು ಹಾಕುವ ಕೀಳು ರಾಜಕಾರಣದ ಅಗತ್ಯ ನಮಗಿಲ್ಲ.

ಕೆಲವರು ಬ್ಯಾನರ್ ಹರಿದು ಹಾಕಿಸಿಕೊಂಡೇ ಪ್ರಚಾರ ಪಡೆಯುತ್ತಿದ್ದಾರೆ. ಅಂತಹ 420 ರಾಜಕಾರಣ ನಮಗೆ ಬೇಕಾಗಿಲ್ಲ,” ಎಂದು ಅವರು ಕಟುವಾಗಿ ಟೀಕಿಸಿದರು.

ಆರ್‌ಟಿಜಿಎಸ್ ಮೂಲಕ ಹಣ ಪಡೆದಿರುವ ಕುರಿತ ಹರಿಪ್ರಸಾದ್ ಅವರ ಆರೋಪಕ್ಕೆ ಆಕ್ರೋಶ ವ್ಯಕ್ತಪಡಿಸಿದ ವಿಜಯೇಂದ್ರ, “ಹರಿಪ್ರಸಾದ್ ಅವರು ತಮ್ಮ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು. ಈ ಎಲ್ಲ ಆರೋಪಗಳು ನ್ಯಾಯಾಲಯದಲ್ಲಿ ಇತ್ಯರ್ಥವಾಗಿವೆ. ನಾನು ನಿರಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿದೆ,” ಎಂದು ಸ್ಪಷ್ಟಪಡಿಸಿದರು.

“ಹರಿಪ್ರಸಾದ್ ಅವರು ಹತಾಶರಾಗಿ ಮಾತನಾಡುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ಕಾರ್ಯಕ್ರಮಗಳಿಗೂ ಅವರನ್ನು ಕರೆಯುತ್ತಿಲ್ಲ. ಹೀಗಾಗಿ ಪಾದಯಾತ್ರೆ ಮಾಡಿ ಅನುಕಂಪ ಗಿಟ್ಟಿಸಿಕೊಳ್ಳಲು ಅವರು ಪ್ರಯತ್ನಿಸುತ್ತಿದ್ದಾರೆ,” ಎಂದು ವಿಜಯೇಂದ್ರ ಆರೋಪಿಸಿದರು.

ಮಠಾಧೀಶರ ಕುರಿತ ಸರ್ಕಾರದ ಹೇಳಿಕೆಗೆ ಆಕ್ಷೇಪ

ಮಠಾಧೀಶರು ಸರ್ಕಾರದ ಯೋಜನೆಗಳ ರಾಯಭಾರಿಗಳಾಗಬೇಕು ಎಂಬ ಹೇಳಿಕೆಗೆ ವಿಜಯೇಂದ್ರ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

“ರಾಜ್ಯದಲ್ಲಿ ಬರಗಾಲವಿದ್ದರೂ ರೈತರಿಗೆ ಸೂಕ್ತ ಪರಿಹಾರ ನೀಡದ ಕಾರಣಕ್ಕೆ ಇಂದು ಜನರು ಸರ್ಕಾರಕ್ಕೆ ಥೂ, ಛೀ ಎಂದು ಧಿಕ್ಕಾರ ಕೂಗುತ್ತಿದ್ದಾರೆ. ಮಠಾಧೀಶರು ನನ್ನ ಸೇವೆ ಮಾಡಬೇಕೆಂದು ಹೇಳುತ್ತಿದ್ದಾರೆ. ಆದರೆ ಎಲ್ಲವನ್ನೂ ಕಾಲವೇ ನಿರ್ಧರಿಸುತ್ತದೆ,” ಎಂದು ಹೇಳಿದರು.

Comments

Leave a Comment

Prev Post ಹೌದು, ನಾನು ಕಾನೂನು ಚೌಕಟ್ಟಿನಲ್ಲಿ ಆಸ್ತಿ ಸಂಪಾದಿಸಿದ್ದೇನೆ: ಸಿಎಂ ಡಿ ಕೆ ಶಿವಕುಮಾರ್
Next Post ಆಲಮಟ್ಟಿ ಅಣೆಕಟ್ಟೆ ಎತ್ತರ ಹೆಚ್ಚಳ: ಬಬಲೇಶ್ವರ ತಾ.ನ ನಾಲ್ಕು ಗ್ರಾಮಗಳಿಗೆ ತುರ್ತು ಪರಿಹಾರಕ್ಕೆ ಪತ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News