PRABHAVAA.COM

ಫಾರಂ 7 ಮೂಲಕ ಅರ್ಹ ಮತದಾರ ಹೆಸರು ಅಳಿಸಿ ಹಾಕಿದ ಪ್ರಕರಣ; ತನಿಖೆಗೆ ಆಗ್ರಹಿಸಿ ಸಿಎಂ ಧರಣಿ

Bengaluru Urban:

Font size:

ಮತದಾರರ ಪಟ್ಟಿಯಿಂದ ಅಳಿಸುವ ಷಡ್ಯಂತ್ರ ಮಾಡಿದವರ ವಿರುದ್ಧ ಚುನಾವಣಾ ಆಯೋಗ ಪ್ರಕರಣ ದಾಖಲಿಸಬೇಕು: ಸಿಎಂ ಡಿ ಕೆ ಶಿವಕುಮಾರ್ ಆಗ್ರಹ

ಫಾರಂ 7 ಮೂಲಕ ಅರ್ಹ ಮತದಾರ ಹೆಸರು ಅಳಿಸಿ ಹಾಕಿದ ಪ್ರಕರಣ; ತನಿಖೆಗೆ ಆಗ್ರಹಿಸಿ ಸಿಎಂ ಧರಣಿ

ಸಂಪುಟ ಸಹೋದ್ಯೋಗಿಗಳೊಂದಿಗೆ ರಾಜ್ಯ ಚುನಾವಣಾ ಆಯೋಗ ಕಚೇರಿ ಆವರಣದಲ್ಲಿ ಧರಣಿ

ಕ್ರಿಮಿನಲ್ ಪ್ರಕರಣ ದಾಖಲಿಸಿ, ತನಿಖೆ ಆರಂಭಿಸುವವರೆಗೂ ಹೋರಾಟ ಮುಂದುವರಿಯಲಿದೆ

ಬೆಂಗಳೂರು, ಅ. 01:

ರಾಜ್ಯದಲ್ಲಿ ಫಾರಂ 7 ಮೂಲಕ ಅರ್ಹ ಮತದಾರರ ಹೆಸರು ಅಳಿಸಿ ಹಾಕುವ ಷಡ್ಯಂತ್ರ ಪ್ರಕರಣದಲ್ಲಿ ಕೂಡಲೇ ಕ್ರಿಮಿನಲ್ ಪ್ರಕರಣ ದಾಖಲಿಸಿ, ತನಿಖೆಗೆ ಆದೇಶ ನೀಡಬೇಕು ಎಂದು ಆಗ್ರಹಿಸಿ ಸಿಎಂ ಡಿ ಕೆ ಶಿವಕುಮಾರ್ ಅವರು ಮುಖ್ಯ ಚುನಾವಣಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ಆರಂಭಿಸಿದರು.

ಬೆಂಗಳೂರಿನ ಗಾಂಧಿನಗರದಲ್ಲಿರುವ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಗೆ ಶಿವಕುಮಾರ್ ಅವರು ಸಂಪುಟ ಸಹೋದ್ಯೋಗಿಗಳೊಂದಿಗೆ ಗುರುವಾರ ಭೇಟಿ ನೀಡಿ ಮನವಿ ನೀಡಿದರು. ನಂತರ ಕಚೇರಿ ಆವರಣದ ಮೆಟ್ಟಿಲುಗಳ ಮೇಲೆ ಧರಣಿ ನಡೆಸಿದರು.

ಸಚಿವ ಕೆ ಜೆ ಜಾರ್ಜ್, ಮುನಿಯಪ್ಪ, ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್, ಬಸವಂತಪ್ಪ, ಬೈರತಿ ಸುರೇಶ್, ಶಿವರಾಜ ತಂಗಡಗಿ, ವಿಜಯಾನಂದ ಕಾಶಪ್ಪನವರ್, ಬಾಲಕೃಷ್ಣ, ರಿಜ್ವಾನ್ ಅರ್ಷದ್, ಯತೀಂದ್ರ ಸಿದ್ದರಾಮಯ್ಯ, ಅಜಯ್ ಸಿಂಗ್, ಶಿವಲಿಂಗೇಗೌಡ, ಪುಟ್ಟರಂಗ ಶೆಟ್ಟಿ, ಟಿ ರಘುಮೂರ್ತಿ, ಸಂಸದ ಜಿ ಸಿ ಚಂದ್ರಶೇಖರ್, ಶಾಸಕರಾದ ಕೋನರಡ್ಡಿ, ಕಂಪ್ಲಿ ಗಣೇಶ್, ಭರತ್ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, "ಚುನಾವಣಾ ಆಯೋಗ ಸಾಂವಿಧಾನಿಕ ಸಂಸ್ಥೆಯಾಗಿದ್ದು, ನಾವು ಗೌರವಿಸುತ್ತೇವೆ. ರಾಜ್ಯದಲ್ಲಿ ಆಗುತ್ತಿರುವ ಅಕ್ರಮಗಳ ಬಗ್ಗೆ ನಾವು ವಿವರಿಸಿದ್ದೇವೆ. ಅವರು ಕಣ್ಣಾರೆ ಕಂಡಿದ್ದಾರೆ. ಬಿಜೆಪಿ ನಾಯಕರು ತಪ್ಪೋಪ್ಪಿಕೊಂಡಿದ್ದು, ನಾವು ಈ ಕೃತ್ಯದಲ್ಲಿ ಭಾಗಿಯಾಗುದ್ದು ಯಾವುದೇ ಕ್ರಮ ಕೈಗೊಳ್ಳಬೇಡಿ. ನಾವು ಕೊಟ್ಟಿರುವ ಅರ್ಜಿಗಳನ್ನು ವಾಪಸ್ ನೀಡಿ ಎಂದು ತಪ್ಪೋಪ್ಪಿಗೆ ಹೇಳಿಕೆ ನೀಡಿದ್ದಾರೆ" ಎಂದು ವಿವರಿಸಿದರು.

"ಬಳ್ಳಾರಿಯಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ 13 ಸಾವಿರ ಫಾರಂ 7 ಮೂಲಕ ಅರ್ಜಿಗಳನ್ನು ಸಲ್ಲಿಸಿ, ಹಿಂಪಡೆದಿದ್ದಾರೆ. ಬಿಜಾಪುರದಲ್ಲಿ ಬಬಲೇಶ್ವರ ಹೊರತುಪಡಿಸಿ 13 ಸಾವಿರ ಅರ್ಜಿಗಳನ್ನು ಸಲ್ಲಿಸಿ, ನಮ್ಮ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬೇಡಿ ಎಂದು ಅರ್ಜಿಗಳನ್ನು ಹಿಂಪಡೆದಿದ್ದಾರೆ. ಮೈಸೂರು, ಬೆಳಗಾವಿ, ಬಾಲ್ಕಿ ಕ್ಷೇತ್ರಗಳಲ್ಲಿನ ದಾಖಲೆ, ವಿಡಿಯೋಗಳನ್ನು ಕೊಟ್ಟಿದ್ದೇವೆ. ಅವರು ಉನ್ನತ ಅಧಿಕಾರಿಗಳನ್ನು ಸಂಪರ್ಕಿಸಿದರು. ಅವರ ನಡುವಣ ಚರ್ಚೆಯನ್ನು ನಾನು ಬಹಿರಂಗಪಡಿಸುವುದಿಲ್ಲ. ನಾಳೆವರೆಗೂ ಸಮಯ ಕೇಳಿದ್ದಾರೆ" ಎಂದು ತಿಳಿಸಿದರು.

"ಅವರು ಉಪ ಆಯುಕ್ತರ ವರದಿ ಕೇಳಿದ್ದಾರೆ. ನಮ್ಮ ಸಾಕ್ಷಿ ಆಧಾರಗಳ ಮೇಲೆ ನಂಬಿಕೆ ಇಲ್ಲವಾದರೆ ಅವರು ವರದಿ ತರಿಸಿಕೊಳ್ಳಲಿ. ಈ ವಿಚಾರದಲ್ಲಿ ಗಂಭೀರ ತನಿಖೆ ಆದೇಶಿಸುವವರೆಗೆ ನಮ್ಮ ಹೋರಾಟ ನಿಲ್ಲಲ್ಲ. ಈ ಅಕ್ರಮದಲ್ಲಿ ಭಾಗಿಯಾಗಿರುವವರು ಸಾಮಾನ್ಯರಲ್ಲ. ಈ ದೇಶದ ಅತಿ ದೊಡ್ಡ ಕ್ರಿಮಿನಲ್ ಗಳು. ಮತದಾರರ ಮತದಾನದ ಹಕ್ಕು ಕದಿಯಲು ಮುಂದಾಗಿದ್ದಾರೆ. ಆಮೂಲಕ ಮತಗಳ್ಳತನ ಮಾಡಿದ್ದಾರೆ" ಎಂದು ಕಿಡಿಕಾರಿದರು.

"ನಮ್ಮ ಸಚಿವರುಗಳ ಕ್ಷೇತ್ರಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರು ಅಳಿಸಲು ಮುಂದಾಗಿದ್ದಾರೆ. ಆ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆ ಬೆನ್ನಿಗೆ ಚೂರಿ ಹಾಕಿದ್ದಾರೆ. ಕಾಂಗ್ರೆಸ್ ಪಕ್ಷ ದೇಶಕ್ಕೆ ಸ್ವಾತಂತ್ರ್ಯ, ಸಂವಿಧಾನ ಕೊಟ್ಟಿದ್ದು ಯಾಕೆ? ಎಂಬ ಪ್ರಶ್ನೆ ಉದ್ಭವಿಸಿದೆ. ಚುನಾವಣಾ ಆಯೋಗಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಸ್ವಾತಂತ್ರ್ಯ ನೀಡಲಾಗಿದೆ ಎಂದು ಹೇಳಿದ್ದರೂ ಕಾನೂನು ತಜ್ಞರ ಸಲಹೆಗೆ ಮುಂದಾಗಿದ್ದಾರೆ. ಅವರು ಸಲಹೆ ಪಡೆಯಲಿ. ನಾನು ಬೇರೆ ವಿಚಾರಗಳ ಬಗ್ಗೆ ಇಂದು ಸಚಿವ ಸಂಪುಟ ಸಭೆ ಕರೆಯಲಾಗಿತ್ತು. ಆದರೆ ರಾಜ್ಯದ ಮತದಾರರ ಮತದಾನದ ಹಕ್ಕು ರಕ್ಷಣೆ ಎಲ್ಲಕ್ಕಿಂತ ಮುಖ್ಯ. ಈ ಜವಾಬ್ದಾರಿ ನನ್ನದಾಗಿದೆ. ಎಸ್ಐಆರ್ ಪ್ರಕ್ರಿಯೆಯಲ್ಲಿ ನಮ್ಮ ಸರ್ಕಾರ ಎಲ್ಲಾ ಸಹಕಾರ ನೀಡಿದೆ. ಆದರೂ ಬಿಜೆಪಿ ಹಾಗೂ ಜನತಾ ದಳದಿಂದ ಇಂತಹ ಪಿತೂರಿ ನಡೆಸಲಾಗಿದೆ" ಎಂದು ಆಕ್ರೋಶ ವ್ಯಕ್ತಪಡಿಸಿದರು.

"ಈ ಹಿಂದೆ ಚಿಲುಮೆ ಸಂಸ್ಥೆ ಮೂಲಕ ಅಕ್ರಮ ಮಾಡಿದ್ದರು. ಈಗ ಈ ಫಾರಂ 7 ಅರ್ಜಿಗಳನ್ನು ಸಲ್ಲಿಕೆ ಮಾಡಿದವರನ್ನು ಕೇಳಿದರೆ ನಮಗೆ ಗೊತ್ತಿಲ್ಲ, ಬಿಜೆಪಿ ಕಚೇರಿ ಹಾಗೂ ನಾಯಕರಿಂದ ನಮಗೆ ಈ ಅರ್ಜಿಗಳು ಬಂದಿವೆ ಎಂದು ಹೇಳಿದ್ದಾರೆ. ಹೀಗಾಗಿ ನಾವು ಹೆಚ್ಚಿನ ಸಮಯ ನೀಡುವುದಿಲ್ಲ. ಈ ಅಕ್ರಮದ ಹಿಂದೆ ದೊಡ್ಡ ಮಾಫಿಯಾಗಳಿದ್ದು, ಅವರು ಒತ್ತಡ ಹಾಕುತ್ತಾರೆ. ನಮ್ಮ ಮನೆ ಸದಸ್ಯರ ಎಪಿಕ್ ಸಂಖ್ಯೆ ನಮಗೆ ಗೊತ್ತಿರುವುದಿಲ್ಲ. ಆದರೆ ಇವರಿಗೆ ಎಪಿಕ್ ಸಂಖ್ಯೆಯಿಂದ ಎಲ್ಲಾ ಮಾಹಿತಿ ಇದೆ. 224 ಕ್ಷೇತ್ರಗಳಲ್ಲಿ 10-20 ಸಾವಿರ ಮತಗಳನ್ನು ಅಳಿಸುವ ಷಡ್ಯಂತ್ರ ನಡೆದಿದೆ" ಎಂದು ತಿಳಿಸಿದರು.

"ಇಡೀ ದೇಶ ಈ ಮತಗಳ್ಳತನವನ್ನು ನೋಡುತ್ತಿದೆ. ಚುನಾವಣಾ ಆಯೋಗ ಅಗತ್ಯ ಕ್ರಮ ಜರುಗಿಸುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ. ಉಪ ಆಯುಕ್ತರು ಕ್ರಿಮಿನಲ್ ಪ್ರಕರಣ ದಾಖಲಿಸಲು ಅವಕಾಶ ನೀಡಬೇಕು. ಕೆಲವು ಮತದಾರರು ಎಫ್ ಐಆರ್ ದಾಖಲಿಸಿದ್ದು, ಆ ಪ್ರಕರಣಗಳು ಕಾನೂನು ಪ್ರಕಾರ ತನಿಖೆ ನಡೆಯಲಿವೆ" ಎಂದು ಹೇಳಿದರು.

ಮತದಾರರ ಪಟ್ಟಿಯಿಂದ ಅಳಿಸುವ ಷಡ್ಯಂತ್ರ ಮಾಡಿದವರ ವಿರುದ್ಧ ಚುನಾವಣಾ ಆಯೋಗ ಪ್ರಕರಣ ದಾಖಲಿಸಬೇಕು: ಸಿಎಂ ಡಿ ಕೆ ಶಿವಕುಮಾರ್ ಆಗ್ರಹ

ಕರ್ನಾಟಕದಲ್ಲಿ ಸುಮಾರು 50 ಲಕ್ಷ ಮತದಾರರನ್ನು ಮತಪಟ್ಟಿಯಿಂದ ಡಿಲೀಟ್ ಮಾಡುವ ಷಡ್ಯಂತ್ರ

ಬಿಜೆಪಿ, ಜನತಾದಳದ ನಾಯಕರು, ಕಾರ್ಯಕರ್ತರಿಂದ ಅಕ್ರಮ

ಪ್ರತಿಯೊಬ್ಬರ ಮತದಾನದ ಹಕ್ಕು ರಕ್ಷಿಸಲು ಸರ್ಕಾರ ಬದ್ಧ

ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲದೆ ಎಸ್ಐಆರ್ ಮೂಲಕ ಅಕ್ರಮ

ಎಸ್ಐಆರ್ ರದ್ದಾಗಬೇಕು

ಬೆಂಗಳೂರು, ಅ.01:

"ಪೂರ್ವಮುದ್ರಿತ ಮತದಾರರ ವಿವರಗಳನ್ನು ಒಳಗೊಂಡ ಫಾರಂ -7 ಮೂಲಕ ರಾಜ್ಯದ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡುವ (ಡಿಲೀಟ್) ಷ್ಯಡ್ಯಂತ್ರ ಮಾಡಿರುವವರ ವಿರುದ್ಧ ಚುನಾವಣಾ ಆಯೋಗ ಪ್ರಕರಣ ದಾಖಲಿಸಬೇಕು" ಎಂದು ಸಿಎಂ ಡಿ ಕೆ ಶಿವಕುಮಾರ್ ಆಗ್ರಹಿಸಿದರು.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ನಡೆಸಿ ಗುರುವಾರ ಮಾತನಾಡಿದರು.

"ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಬಿಜೆಪಿ ಹಾಗೂ ಜನತಾದಳ ಕ್ರಿಮಿನಲ್ ಸಂಚು ರೂಪಿಸಿ ವ್ಯಾಪಕ ಅಕ್ರಮದಲ್ಲಿ ತೊಡಗಿರುವುದು ಬಯಲಿಗೆ ಬಂದಿದ್ದು, ಇದರ ವಿರುದ್ಧ ಸರ್ಕಾರ ಕಾನೂನು ಕ್ರಮ ಸೇರಿದಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ" ಎಂದು ತಿಳಿಸಿದರು.

"ರಾಜ್ಯದ ಹಲವು ಜಿಲ್ಲೆಗಳ ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ಪೂರ್ವ ಮುದ್ರಿತ ಮಾಹಿತಿಗಳನ್ನು ಒಳಗೊಂಡ ಫಾರಂ 7 ಅನ್ನು ಬಿಜೆಪಿ ಕಾರ್ಯಕರ್ತರು ಬಿಎಲ್ಒಗಳಿಗೆ ಸಲ್ಲಿಸಿ, ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕಲು ಪ್ರಯತ್ನಿಸುತ್ತಿರುವುದು ಪತ್ತೆಯಾಗಿದೆ. ಇದು ಕ್ರಿಮಿನಲ್ ಸಂಚಾಗಿದ್ದು, ಕೋಮು ದ್ವೇಷ ಮೂಡಿಸಿ, ಕೋಮು ಸಾಮರಸ್ಯ ಕದಡಲು ನಡೆಸಿದ ವ್ಯವಸ್ಥಿತ ಷಡ್ಯಂತ್ರವಾಗಿದೆ" ಎಂದು ಕಿಡಿಕಾರಿದರು.

ಸಚಿವರ ಕ್ಷೇತ್ರಗಳಲ್ಲೇ ಸಾವಿರಾರು ಮತಗಳ ಡಿಲೀಟ್ ಗೆ ಪಿತೂರಿ

"ಬಬಲೇಶ್ವರದಲ್ಲಿ 1634 ಸಾವಿರಕ್ಕೂ ಅಧಿಕ ಇಂತಹ ಅರ್ಜಿಗಳನ್ನು ಸಲ್ಲಿಸಲಾಗಿದೆ. ಬಿಜಾಪುರದಲ್ಲಿ 14 ಸಾವಿರ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಭಾಲ್ಕಿಯಲ್ಲಿ 3244 ಇಂತಹ ಅರ್ಜಿಗಳನ್ನು ಬಿಜೆಪಿ ಕಾರ್ಯಕರ್ತರು ನೀಡಿದ್ದಾರೆ. ಭಾಲ್ಕಿ, ನರಸಿಂಹರಾಜಪುರ, ಬೆಳಗಾವಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಫಾರಂ 7 ನೀಡಿರುವುದು ಕಂಡು ಬಂದಿದೆ. ಮತ್ತೆ ಕೆಲವು ಕ್ಷೇತ್ರಗಳಲ್ಲಿ 5-10 ಸಾವಿರ ಮತಗಳನ್ನು ಡಿಲೀಟ್ ಮಾಡುವ ಷಡ್ಯಂತ್ರ ನಡೆದಿದೆ. ಪ್ರಕಾಶ್ ರಾಜ್ ಅವರ ನೇತೃತ್ವದ ಸಿವಿಲ್ ಸೊಸೈಟಿ ಸದಸ್ಯರು ಮತಗಟ್ಟೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ" ಎಂದು ಮಾಹಿತಿ ನೀಡಿದರು.

"ಬಿಜೆಪಿಯ ಅಧಿಕೃತ ಕಾರ್ಯಕರ್ತರು ತಮ್ಮ ಹೆಸರಿನಲ್ಲಿ ನೂರಾರು ಇಂತಹ ಫಾರಂ 7 ಅರ್ಜಿಗಳನ್ನು ಸಲ್ಲಿಸಿರುವುದನ್ನು ನಾವು ಪತ್ತೆ ಹಚ್ಚಿದ್ದೇವೆ. ಕೆಲವು ಕಡೆ ಬಿಜೆಪಿ ಕಾರ್ಯಕರ್ತರು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಬಿಜೆಪಿ ಹಾಗೂ ಜನತಾದಳದ ಷಡ್ಯಂತ್ರ ಇದೀಗ ಬಯಲಾಗಿದೆ. ಫಾರಂ 7 ರಲ್ಲಿ ಮಾಹಿತಿಯನ್ನು ಮುದ್ರಿಸಿ ಬಿಜೆಪಿ ಕಾರ್ಯಕರ್ತರು ಈ ಕಾರ್ಯದಲ್ಲಿ ತೊಡಗಿದ್ದಾರೆ. ಕೆಲವು ಕಡೆ ಈ ಅರ್ಜಿ ನೀಡಿದ್ದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಎಲ್ಲಿ ಈ ಫಾರಂ ಮುದ್ರಿತವಾಗುತ್ತಿದೆ? ಇದರ ಹಿಂದೆ ಯಾವ ಪಕ್ಷದ ನಾಯಕರು ಇದ್ದಾರೆ? ಚುನಾವಣಾ ಆಯೋಗ ಇದರ ಹಿಂದೆ ಇರುವ ಪ್ರತಿಯೊಬ್ಬರನ್ನೂ ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮಗಳನ್ನು ಜರುಗಿಸಬೇಕು" ಎಂದು ಒತ್ತಾಯಿಸಿದರು.

ಕರ್ನಾಟಕದಲ್ಲಿ ಸುಮಾರು 50 ಲಕ್ಷ ಮತದಾರರನ್ನು ಮತಪಟ್ಟಿಯಿಂದ ಡಿಲೀಟ್ ಮಾಡುವ ಷಡ್ಯಂತ್ರ

"ಕರ್ನಾಟಕ ರಾಜ್ಯದಲ್ಲಿ ಈಗಾಗಲೇ ಎಸ್ಐಆರ್ ಪ್ರಕ್ರಿಯೆಯಲ್ಲಿ 1.07 ಕೋಟಿ ಮತದಾರರ ಹೆಸರುಗಳು ಕೈಬಿಡಲಾಗಿದ್ದು, 45 ಲಕ್ಷ ಮತದಾರರಿಗೆ ನೋಟೀಸ್ ನೀಡಿದ್ದಾರೆ. ಇಷ್ಟಾದ ಬಳಿಕವು ಈಗ ಬಿಜೆಪಿ ಕಾರ್ಯಕರ್ತರು ಸುಮಾರು 50 ಲಕ್ಷ ಮತದಾರರನ್ನು ಮತಪಟ್ಟಿಯಿಂದ ಡಿಲೀಟ್ ಮಾಡಿಸಲು ಷಡ್ಯಂತ್ರ ನಡೆದಿದೆ" ಎಂದು ವಿವರಿಸಿದರು.

"ರಾಜ್ಯ ಚುನಾವಣಾ ಆಯೋಗ, ತಕ್ಷಣ ಈ ಎಲ್ಲಾ ಪ್ರಕರಣಗಳ ಬಗ್ಗೆ ಎಫ್ಐಆರ್ ದಾಖಲಿಸಿ, ಈ ಎಲ್ಲಾ ಕಡೆಗಳಲ್ಲಿ ಸಮಗ್ರ ತನಿಖೆ ಆರಂಭಿಸಿ, ಯಾರು ಇದರಲ್ಲಿ ಒಳಗೊಂಡಿದ್ದಾರೆ ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಬಿಜೆಪಿ ಹಾಗೂ ಜನತಾದಳ ನಾಯಕರ ಈ ಕ್ರಿಮಿನಲ್ ಷಡ್ಯಂತ್ರದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು" ಎಂದು ಅವರು ಒತ್ತಾಯಿಸಿದರು.

"ರಾಜ್ಯದ ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕನ್ನು ರಕ್ಷಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ನಡೆಯುತ್ತಿರುವ ಈ ಕ್ರಿಮಿನಲ್ ಷಡ್ಯಂತ್ರದ ಬಗ್ಗೆ ಪೊಲೀಸರು ಮೊಕದ್ದಮೆ ದಾಖಲಿಸಿ ತನಿಖೆ ನಡೆಸಲಾಗುವುದು" ಎಂದರು.

"ರಾಜ್ಯ ಚುನಾವಣಾ ಆಯೋಗ ತಕ್ಷಣ ಇದರ ಬಗ್ಗೆ ತನಿಖೆಗೆ ಆದೇಶಿಸಿ ಕ್ರಮ ಜರುಗಿಸಲು ಒತ್ತಾಯಿಸಿ, ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಲಾಗುವುದು. ಆಯೋಗ ಈ ಕುರಿತು ಸೂಕ್ತ ಕ್ರಮ ಜರುಗಿಸುವ ತನಕ ಅಲ್ಲಿಯೇ ಸಂಪುಟದ ಸಚಿವರೊಂದಿಗೆ ಧರಣಿ ಕುಳಿತುಕೊಳ್ಳಲಾಗುವುದು" ಎಂದು ಎಚ್ಚರಿಕೆ ನೀಡಿದರು.

ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲದೆ ಎಸ್ಐಆರ್ ಮೂಲಕ ಅಕ್ರಮ

"ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂಬ ಕಾರಣಕ್ಕಾಗಿ ಬಿಜೆಪಿ ಹಾಗೂ ಜನತಾದಳ ಇಂತಹ ಕ್ರಿಮಿನಲ್ ಷಡ್ಯಂತ್ರ ನಡೆಸುತ್ತಿರುವುದು ಜಗಜ್ಜಾಹೀರಾಗಿದೆ. ಇಡೀ ದೇಶದಲ್ಲಿಯೇ ಇಂತಹ ಕ್ರಿಮಿನಲ್ ಗಳು ಇರಲು ಸಾಧ್ಯವಿಲ್ಲ. ನಾವು ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ಇಂತಹ ಕ್ರಿಮಿನಲ್ ಕೃತ್ಯಗಳು ನಡೆಯಲು ಬಿಡುವುದಿಲ್ಲ" ಎಂದು ಹೇಳಿದರು.

ಪ್ರತಿಯೊಬ್ಬರ ಮತದಾನದ ಹಕ್ಕು ರಕ್ಷಿಸಲು ಸರ್ಕಾರ ಬದ್ಧ

"ಅಲ್ಪಸಂಖ್ಯಾತರು, ಬಡವರ ಹಿತರಕ್ಷಣೆ, ಮತರಕ್ಷಣೆ ನನ್ನಿಂದ ಸಾಧ್ಯವಿಲ್ಲ ಎಂದರೆ ನಾನು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳಲು ಅರ್ಹನಲ್ಲ. ವಿಶೇಷ ಎಸ್ಐಆರ್ ಮಾಡಿದ ಬಳಿಕ ನಮ್ಮ ರಾಜ್ಯದಲ್ಲಿ, ಪಕ್ಷದ ಹಾಗೂ ಸರ್ಕಾರದ ವತಿಯಿಂದ ಜಾಗೃತಿ ಮೂಡಿಸುವ ಪ್ರಯತ್ನ ಮಾಡುತ್ತಿದ್ದೇವೆ. ರಾಜ್ಯದ ಮುಖ್ಯಮಂತ್ರಿಯಾಗಿ ಪ್ರತಿ ವರ್ಗ ಮತದಾರರಿಗೆ ತಮ್ಮ ಹಕ್ಕು ಉಳಿಸಿ ಕೊಡುವುದು ನನ್ನ ಜವಾಬ್ದಾರಿ. ರಾಜ್ಯದ ಜನತಗೆ ನನ್ನ ಮೇಲೆ ಹಾಗೂ ಸರ್ಕಾರದ ಮೇಲೆ ಸಂಪೂರ್ಣ ವಿಶ್ವಾಸ ಇರಿಸಿ ಈ ಸ್ಥಾನದಲ್ಲಿ ಕೂರಿಸಿದ್ದಾರೆ" ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಸ್ಐಆರ್ ದೊಡ್ಡ ವಂಚನೆ, ಹೀಗಾಗಿ ರದ್ದಾಗಬೇಕು

"ಮುಖ್ಯ ಚುನಾವಣಾಧಿಕಾರಿ ಜ್ಞಾನೇಶ್ ಕುಮಾರ್ ಅವರಿಗೆ ಮಾಹಿತಿ ಯಿಲ್ಲದೇ ಇಂತಹ ಕೃತ್ಯ ನಡೆಯಲು ಸಾಧ್ಯವಿಲ್ಲ. ಎಸ್ಐಆರ್ ದೇಶದ ಅತಿ ದೊಡ್ಡ ವಂಚನೆಯಾಗಿದ್ದು, ಎಸ್ಐಆರ್ ರದ್ದಾಗಬೇಕು" ಎಂದು ಆಗ್ರಹಿಸಿದರು.

"ಎಸ್ಐಅರ್ ಪ್ರಾರಂಭವಾದ ಬಳಿಕ ನಾವು ಸರ್ಕಾರದ ವತಿಯಿಂದ ಆಯೋಗಕ್ಕೆ ಎಲ್ಲಾ ಬೆಂಬಲ, ಸಹಕಾರ ನೀಡುತ್ತಾ ಬಂದಿದ್ದೇವೆ. 54 ಸಾವಿರ ಬಿಎಲ್ಎ 2 ಗಳನ್ನು ಪಕ್ಷದ ವತಿಯಿಂದ ನೇಮಕ ಮಾಡಿದ್ದೇವೆ. ಆಯೋಗದ ಕಾರ್ಯಕ್ಕೆ ಎಲ್ಲಾ ರೀತಿಯ ನೆರವನ್ನು ಸರ್ಕಾರ ನೀಡುತ್ತಾ ಬಂದಿದೆ. ಆದರೆ ಇದೀಗ ಅರ್ಹ ಮತದಾರರನ್ನು ಅಕ್ರಮವಾಗಿ ತೆಗೆದು ಹಾಕಲು ನಡೆಯುತ್ತಿರುವ ಕ್ರಿಮಿನಲ್ ಸಂಚು ಯಶಸ್ವಿಯಾಗಲು ನಾವು ಬಿಡುವುದಿಲ್ಲ" ಎಂದರು.

"ಎಸ್ಐಆರ್ ರದ್ದುಪಡಿಸಬೇಕು. ಪ್ರತಿಯೊಬ್ಬರಿಗೂ ಮತದಾನದ ಹಕ್ಕು ಒದಗಿಸಲು ಕ್ರಮ ಕೈಗೊಳ್ಳಬೇಕು. ಇದರಲ್ಲಿ ಶಾಮೀಲಾಗಿದ್ದಾರೆ ಅಂತಹವರನ್ನು ಬಂಧಿಸಬೇಕು. ಬಿಎಲ್ಒಗಳ ಮೇಲೆ ಒತ್ತಡ ಹೇರಿದವರನ್ನು ಪತ್ತೆಹಚ್ಚಿ, ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು" ಎಂದು ಒತ್ತಾಯಿಸಿದರು.

Comments

Leave a Comment

Prev Post ರಿಯಲ್ ಎಸ್ಟೇಟ್ ಬಗ್ಗೆ ಇರುವ ಕಾಳಜಿ ರೈತರ ಬಗ್ಗೆ ಇಲ್ಲದ ಸರಕಾರ: ಬಿ.ವೈ.ವಿಜಯೇಂದ್ರ ಆಕ್ಷೇಪ
Next Post ತುಮಕೂರಿನಲ್ಲಿ ₹5 ಸಾವಿರ ಕೋಟಿ ಹೂಡಿಕೆಗೆ ರೆನೈಸಾನ್ಸ್ ಆಸಕ್ತಿ: ಎಂ ಬಿ ಪಾಟೀಲ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News