PRABHAVAA.COM

ತುಮಕೂರಿನಲ್ಲಿ ₹5 ಸಾವಿರ ಕೋಟಿ ಹೂಡಿಕೆಗೆ ರೆನೈಸಾನ್ಸ್ ಆಸಕ್ತಿ: ಎಂ ಬಿ ಪಾಟೀಲ

Bengaluru Urban:

Font size:

ಸೋಲಾರ್ ಕ್ಷೇತ್ರದಲ್ಲಿ ಹೂಡಿಕೆ

ಬೆಂಗಳೂರು: 2025ರಲ್ಲಿ ನಡೆದಿದ್ದ ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಘೋಷಿಸಿದ್ದಂತೆ ಭಾರತ-ಅಮೆರಿಕ ಪಾಲುದಾರಿಕೆಯುಳ್ಳ ರೆನೈಸಾನ್ಸ್ ಸೋಲಾರ್ ಅಂಡ್ ಎಲೆಕ್ಟ್ರಾನಿಕ್ ಮೆಟೀರಿಯಲ್ಸ್ ಕಂಪನಿಯು ತುಮಕೂರಿನ ಚೆನ್ನೈ- ಬೆಂಗಳೂರು ಇಂಡಸ್ಟ್ರಿಯಲ್ ಕಾರಿಡಾರ್ (ಸಿಬಿಐಸಿ) ಪ್ರದೇಶದಲ್ಲಿ 5,000 ಕೋಟಿ ರೂಪಾಯಿ ಬಂಡವಾಳ ಹೂಡಲು ಆಸಕ್ತಿ ತೋರಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಇಲ್ಲಿನ ಖನಿಜ ಭವನದಲ್ಲಿ ಗುರುವಾರ ತಮ್ಮನ್ನು ಭೇಟಿಯಾದ ರೆನೈಸಾನ್ಸ್ ಕಂಪನಿಯ ಅಧ್ಯಕ್ಷ ಮತ್ತು ಸಿಇಒ ಡಾ.ಮಿಲಿಂದ್ ಎಸ್ ಕುಲಕರ್ಣಿ ಜತೆ ಅವರು ಸುದೀರ್ಘ ಮಾತುಕತೆ ನಡೆಸಿದರು.

ಈ ಬಗ್ಗೆ ಮಾತನಾಡಿರುವ ಅವರು, ಕಂಪನಿಯು ಸೋಲಾರ್ ಕ್ಷೇತ್ರದಲ್ಲಿ ಸಿಂಗಲ್‌ ಕ್ರಿಸ್ಟಲ್ ಸಿಲಿಕಾನ್ ಮತ್ತು ವೇಫರ್ ತಯಾರಿಕೆಯಲ್ಲಿ ಹೆಸರು ಮಾಡಿದೆ. ಅದು ಸಿಬಿಐಸಿ ಪ್ರದೇಶದಲ್ಲಿ 5 ಗಿಗಾವ್ಯಾಟ್ ಸಾಮರ್ಥ್ಯದ ಸೋಲಾರ್ ಇನ್-ಗಾಟ್ ಮತ್ತು ವೇಫರ್ ತಯಾರಿಕೆ ಘಟಕ ಸ್ಥಾಪಿಸಲು 100 ಎಕರೆ ಜಾಗ ಕೇಳಿದೆ. ಕಂಪನಿಯ ಉಳಿದ ಬೇಡಿಕೆಗಳನ್ನು ಕುರಿತು ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದಿದ್ದಾರೆ.

ರೆನೈಸಾನ್ಸ್ ಕಂಪನಿಯು ತಂತ್ರಜ್ಞರೇ ಸೇರಿಕೊಂಡು ಆರಂಭಿಸಿರುವ ಉದ್ಯಮ ವಾಗಿದ್ದು, ಚೆನ್ನೈನಲ್ಲಿ ತನ್ನ ಪ್ರಧಾನ ಕಚೇರಿಯನ್ನು ಹೊಂದಿದೆ. ಉದ್ದೇಶಿತ ಸ್ಥಾವರಕ್ಕೆ ಅದು 80 ಮೆಗಾವ್ಯಾಟ್ ವಿದ್ಯುತ್ ಮತ್ತು 1 ಕೋಟಿ ಎಂಎಲ್ ಡಿ ನೀರು ಬೇಕಾಗುತ್ತದೆ ಎಂಬ ಎರಡು ಪ್ರಮುಖ ಅಗತ್ಯಗಳನ್ನು ನಮ್ಮ‌ ಗಮನಕ್ಕೆ ತರಲಾಗಿದೆ. ಇವುಗಳನ್ನು ಸಕಾರಾತ್ಮಕವಾಗಿ ಪರಿಗಣಿಸಲಾಗುವುದು. ಎಲ್ಲವೂ ನಿರೀಕ್ಷೆಯಂತೆ ನಡೆದರೆ 2028ರ ಮಧ್ಯ ಭಾಗದ ವೇಳೆಗೆ ಕಂಪನಿಯು ತನ್ನ ತಯಾರಿಕಾ ಚಟುವಟಿಕೆ ಆರಂಭಿಸಲಿದೆ ಎಂದು ಅವರು ತಿಳಿಸಿದ್ದಾರೆ.

ಕಂಪನಿಯು ರಾಜ್ಯ ಸರಕಾರದ ಕಡೆಯಿಂದ ವಿಶೇಷ ಪ್ರೋತ್ಸಾಹನಾ ಭತ್ಯೆಗೂ ಮನವಿ ಮಾಡಿಕೊಂಡಿದೆ. ಈ ಕುರಿತು ಉನ್ನತ ಮಟ್ಟದಲ್ಲಿ ಚರ್ಚೆ ಪ್ರಗತಿಯಲ್ಲಿದೆ ಎಂದು ಪಾಟೀಲ ನುಡಿದಿದ್ದಾರೆ.

ಈ ಸಂದರ್ಭದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಖುಷ್ಬೂ ಗೋಯಲ್ ಮತ್ತು ಕೆಐಎಡಿಬಿ ಸಿಇಒ ಗೋವಿಂದ ರೆಡ್ಡಿ, ಕೈಗಾರಿಕಾ ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ ಉಪಸ್ಥಿತರಿದ್ದರು.

Comments

Leave a Comment

Prev Post ಫಾರಂ 7 ಮೂಲಕ ಅರ್ಹ ಮತದಾರ ಹೆಸರು ಅಳಿಸಿ ಹಾಕಿದ ಪ್ರಕರಣ; ತನಿಖೆಗೆ ಆಗ್ರಹಿಸಿ ಸಿಎಂ ಧರಣಿ
Next Post ಖರೀಫ್ 2026ಕ್ಕೆ 40 ತಾಲ್ಲೂಕುಗಳು ಬರಪೀಡಿತವೆಂದು ಘೋಷಣೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News