PRABHAVAA.COM

ಬೆಂಗಳೂರಿನಲ್ಲಿ ರಾಜ್ಯದ ಮೊದಲ ‘ಗಾಂಧಿ ಸ್ಮಾರಕ ಸ್ತಂಭ’ವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

Bengaluru Urban:

Font size:

ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ

​ಬೆಂಗಳೂರು, ಅ. 2-

ಮಹಾತ್ಮ ಗಾಂಧೀಜಿಯವರು ಕರ್ನಾಟಕದಲ್ಲಿ ಭೇಟಿ ನೀಡಿದ್ದ ವಿವಿಧ 87 ಐತಿಹಾಸಿಕ ಸ್ಥಳಗಳಲ್ಲಿ ‘ಗಾಂಧಿ ಸ್ಮಾರಕ ಸ್ತಂಭ’ ಸ್ಥಾಪಿಸುವ ಕರ್ನಾಟಕ ಸರ್ಕಾರದ ಆಯವ್ಯಯ ಘೋಷಣೆಯ ಭಾಗವಾಗಿ, ರಾಜ್ಯದ ಮೊದಲ ಗಾಂಧಿ ಸ್ಮಾರಕ ಸ್ತಂಭವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಬೆಂಗಳೂರಿನ ಇಂದಿನ ಸರ್ಕಾರಿ ಕಲಾ ಕಾಲೇಜು (GAS ಕಾಲೇಜು) ಆವರಣದಲ್ಲಿ ಅನಾವರಣಗೊಳಿಸಿದರು.

​ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ನಡೆದ ಐತಿಹಾಸಿಕ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷಗಳು ಪೂರೈಸಿದ ನೆನಪಿಗಾಗಿ "ಗಾಂಧಿ ಭಾರತ" ಅಭಿಯಾನದಡಿಯಲ್ಲಿ ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಈ ಸ್ಮಾರಕ ಸ್ತಂಭಗಳನ್ನು ನಿರ್ಮಿಸಲಾಗುತ್ತಿದೆ.

ಶಾಸಕರು ಹಾಗೂ ಗಾಂಧಿ ಭಾರತ ಶತಮಾನೋತ್ಸವ ಸಮಿತಿ ಅಧ್ಯಕ್ಷರಾದ ಎಚ್. ಕೆ. ಪಾಟೀಲ, ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಹಾಗೂ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾದ ಬಿ.ಎಲ್.ಶಂಕರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿಗಳಾದ ಜೆ. ಮಂಜುನಾಥ್ ಐ.ಎ.ಎಸ್. ಸೇರಿದಂತೆ ಗಾಂಧಿ ಭಾರತ ಸಮಿತಿಯ ಪದಾಧಿಕಾರಿಗಳು, ಸರ್ಕಾರಿ ಕಲಾ ಕಾಲೇಜಿನ ಪ್ರಾಧ್ಯಾಪಕರು, ಅಪಾರ ಸಂಖ್ಯೆಯ ವಿಧ್ಯಾರ್ಥಿಗಳು ಈ ‌ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಗಾಂಧಿ ಸ್ಮಾರಕ ಸ್ತಂಭ ಸಿದ್ದಡಿಸಿದ ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್, ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲರಾದ ನಾಗೇಂದ್ರ ಕುಮಾರ್ ಜಿ.ಸಿ. ನಿರ್ಮಿತಿ ಕೇಂದ್ರದ ಅಭಿಯಂತರರಾದ ರಾಜೀವ್ ಅವರನ್ನು ಸನ್ಮಾನಿಸಿದರು.

ಅಲ್ಲದೇ ಈ ಮಹತ್ವದ ಕಾರ್ಯಕ್ರಮಕ್ಕೆ ಸಾಕ್ಷಿಯಾದಂತೆ ಸರ್ಕಾರಿ ಕಲಾ ಕಾಲೇಜಿನಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು ಗಿಡ ನೆಟ್ಟು ನೀರೆರದರು.

​ಬೆಂಗಳೂರಿನ ಐತಿಹಾಸಿಕ ಕ್ಷಣ:

ಮಹಾತ್ಮ ಗಾಂಧೀಜಿಯವರು ತಮ್ಮ ಪತ್ನಿ ಕಸ್ತೂರಬಾ ಅವರೊಂದಿಗೆ 1915ರ ಮೇ 8ರ ಶನಿವಾರದಂದು ಪ್ರಥಮ ಬಾರಿಗೆ ಬೆಂಗಳೂರಿಗೆ ಆಗಮಿಸಿದ್ದರು. ಅಂದು ಆಗಿನ ಸರ್ಕಾರಿ ಪ್ರೌಢಶಾಲೆಗೆ (ಇಂದಿನ ಸರ್ಕಾರಿ ಕಲಾ ಕಾಲೇಜು) ಭೇಟಿ ನೀಡಿ, ತಮ್ಮ ರಾಜಕೀಯ ಗುರುಗಳಾಗಿದ್ದ ಗೋಪಾಲಕೃಷ್ಣ ಗೋಖಲೆ ಅವರ ಭಾವಚಿತ್ರವನ್ನು ಅನಾವರಣಗೊಳಿಸಿದ್ದರು. ಅದರ ನೆನಪಿಗಾಗಿ ಈ ಸಭಾಂಗಣಕ್ಕೆ ಬಾಪೂಜಿ ಅವರ ಹೆಸರು ಇರಿಸಲಾಗಿದ್ದು, ಈಗ ಇದೇ ಆವರಣದಲ್ಲಿ ಮೊದಲ ಗಾಂಧಿ ಸ್ಮಾರಕ ಸ್ತಂಭ ನಿರ್ಮಿಸಲಾಗಿದೆ.

​ಆಕರ್ಷಕ ಸ್ಮಾರಕ ಸ್ತಂಭದ ವಿವರ:

​ಶಿಲ್ಪಿ: ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರು ಈ ಸ್ಮಾರಕದ ಆಕರ್ಷಕ ಕಲಾಕೃತಿಯನ್ನು ಸಿದ್ಧಪಡಿಸಿದ್ದು, ಸ್ಮಾರಕವು 10 ಅಡಿ ಎತ್ತರ ಹಾಗೂ 3 1/4 (ಮೂರು ಕಾಲು) ಅಡಿ ಅಗಲದ ಏಕಶಿಲಾ ಗ್ರಾನೈಟ್ ಕಲಾಕೃತಿ ಹೊಂದಿದೆ.

​ವಿನ್ಯಾಸ: ಸ್ತಂಭದ ಮೇಲ್ಭಾಗದಲ್ಲಿ ನಾಲ್ಕು ಮುಖ ಸಿಂಹವುಳ್ಳ ರಾಷ್ಟ್ರೀಯ ಲಾಂಛನ, ಅದರ ಕೆಳಗೆ ಅಶೋಕ ಚಕ್ರ, ಧ್ಯಾನಸ್ಥ ಮಹಾತ್ಮ ಗಾಂಧೀಜಿ, ಅವರು ಬೋಧಿಸಿದ ಸಪ್ತ ಸಾಮಾಜಿಕ ಪಾತಕಗಳು, ಗಾಂಧೀಜಿಯವರ ಸಹಿ ಹಾಗೂ ಚರಕದ ಚಿತ್ರಣವಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಎಂ. ಎನ್. ಅನುಚೇತ್ ತಿಳಿಸಿದ್ದಾರೆ.

Comments

Leave a Comment

Prev Post 50 ಲಕ್ಷ ಮತದಾರರನ್ನು ಕೈಬಿಡುವ ಷಡ್ಯಂತ್ರದ ಆರೋಪ ಮಾಡಿರುವ ಸಿಎಂ ಅದನ್ನು ಸಾಬೀತುಪಡಿಸಲಿ: ಬಿ.ವೈ. ವಿಜಯೇಂದ್ರ
Next Post ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಸಿಎಂ ಡಿ ಕೆ ಶಿವಕುಮಾರ್

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News