ನಾಳೆ ಬೆಳಗ್ಗೆವರೆಗೂ ಪೊಲೀಸರಿಗೆ ಗಡುವು ಕೊಟ್ಟ ಹೆಚ್.ಡಿ. ಕುಮಾರಸ್ವಾಮಿ
ನೈಸ್ ವಿವಾದ; ಹೈಕೋರ್ಟ್ ಆದೇಶಕ್ಕೆ ತಡೆ ಪಡೆಯಲು ಹೋಗಿದ್ದರು
ಅವರ ಪಾಪದ ಕೊಡ ತುಂಬಿದೆ ಎಂದು ಕಿಡಿ
ಬೆಂಗಳೂರು 5 ಅಕ್ಟೋಬರ್ 2026
ಕೆಪಿಎಸ್ಸಿ ಹಗರಣಗಳ ಸರಮಾಲೆಯಿಂದ ರಾಜ್ಯದ ಶಿಕ್ಷಕರು, ಪದವೀಧರರು ರೋಸಿ ಹೋಗಿದ್ದು, ಪ್ರಸಕ್ತ ವಿಧಾನ ಪರಿಷತ್ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.
ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಆಗ್ನೇಯ ಪದವೀಧರ ಕ್ಷೇತ್ರಗಳಿಂದ ವಿಧಾನ ಪರಿಷತ್'ಗೆ ನಡೆಯಲಿರುವ ಚುನಾವಣೆಯ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಗಳಾಗಿ ಎ.ಪಿ.ರಂಗನಾಥ್ ಅವರು, ಕೆ.ಎಂ.ಸುರೇಶ್ ಅವರು ನಾಮಪತ್ರಗಳನ್ನು ಸಲ್ಲಿಸಿದ ಸಂದರ್ಭದಲ್ಲಿ ಹಾಜರಿದ್ದು ಕೇಂದ್ರ ಸಚಿವರು ಮಾತನಾಡಿದರು.
ಕೆಪಿಎಸ್ಸಿ ನೇಮಕ ಅಷ್ಟೇ ಅಲ್ಲದೆ, ಅನೇಕ ಹಗರಣಗಳಲ್ಲಿ ರಾಜ್ಯ ಸರ್ಕಾರ ಭಾಗಿಯಾಗಿದೆ. ಹೀಗಾಗಿ ಯುವಜನರು ಕಾಂಗ್ರೆಸ್ ಮೇಲೆ ರೋಸಿ ಹೋಗಿದ್ದಾರೆ. ಹೀಗಾಗಿ ಶಿಕ್ಷಕರು, ಪದವೀಧರರು, ಯುವಜನರು ಮುಂದಿನ ಪರಿಷತ್ ಚುನಾವಣೆಯಲ್ಲಿ ಸರಕಾರಕ್ಕೆ ವಿರುದ್ಧವಾಗಿ ಮತ ಹಾಕಲಿದ್ದಾರೆಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.
ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಎನ್‌ಡಿಎ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಪರಿಷತ್ ನ ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಬಿಜೆಪಿ- ಜೆಡಿಎಸ್ ಅಧಿಕಾರದಲ್ಲಿದ್ದಾಗ ದೊಡ್ಡ ಕೊಡುಗೆ ನೀಡಿದೆ. ಕೆಪಿಎಸ್ಸಿ ಹಗರಣ ದೊಡ್ಡ ಪ್ರಮಾಣದಲ್ಲಿ ನಡೆದಿದೆ. ಇಂತಹ ಸಂದರ್ಭದಲ್ಲಿ ಪದವೀಧರರು ಆಡಳಿತ ಪಕ್ಷವನ್ನು ವಿರೋಧಿಸುತ್ತಿದ್ದಾರೆ ಎಂದ ಅವರು; ಪರಿಷತ್ ಚುನಾವಣೆಗೂ ಇದಕ್ಕೂ ಹೋಲಿಕೆ ಬೇಡ. ಇದು ಯಾವುದೇ ದಿಕ್ಸೂಚಿ ಚುನಾವಣೆ ಅಲ್ಲ ಎಂದರು ಕೇಂದ್ರ ಸಚಿವರು.
ನೈಸ್ ವಿಚಾರದಲ್ಲಿ ಹೈಕೋರ್ಟ್ ವ್ಯಕ್ತಪಡಿಸಿರುವ ಕಟುವಾದ ಅಭಿಪ್ರಾಯಗಳಿಗೆ ಸುಪ್ರೀಂ ಕೋರ್ಟ್ ನಲ್ಲಿ ತಡೆಯಾಜ್ಞೆ ಪಡೆಯಲು ಹರಸಾಹಸ ಮಾಡುತ್ತಿದ್ದಾರೆ. ನವೆಂಬರ್ ಎರಡರಂದು ವಿಚಾರಣೆಗೆ ನ್ಯಾಯಾಲಯ ನಿಗದಿ ಮಾಡಿದೆ. ಅವರ ಪರ ವಕೀಲರು ಸ್ಟೇ ಕೊಡಿ ಅಂತ ಕೇಳಿದ್ದಾರೆ. ಅಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಸ್ಟೇ ಸಿಗಲಿದೆ ಅಂತ ಹೋಗಿದ್ದರು. ರೈತರ ಹೋರಾಟಕ್ಕೆ ನ್ಯಾಯಯುತ ಬೆಲೆ ಸಿಕ್ಕಿದೆ. ನೈಸ್ ವಿಚಾರ ದಾರಿ ತಪ್ಪಿಸಲು ಬಿಜೆಪಿ, ಜೆಡಿಎಸ್ ಮೇಲೆ ಆರೋಪ ಮಾಡಿದ್ದಾರೆ. ಅವರ ಪಾಪದ ಕೊಡ ತುಂಬಿದೆ ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ನಾಳೆ ಬೆಳಗ್ಗೆವರೆಗೂ ಪೊಲೀಸರಿಗೆ ಗಡುವು ಕೊಟ್ಟ ಹೆಚ್.ಡಿ. ಕುಮಾರಸ್ವಾಮಿ
ಕಿರುಕುಳ ಮುಂದುವರಿಸಿದರೆ ಪೊಲೀಸ್ ಠಾಣೆಗಳಿಗೆ ಮುತ್ತಿಗೆ ಚಳವಳಿ
ಎಸ್'ಐಆರ್; ಜೆಡಿಎಸ್, ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ಹುಷಾರ್!
ರಾಜ್ಯ ಸರಕಾರಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ
ರಾಜ್ಯದಲ್ಲಿ ಇರುವುದು ಗೂಂಡಾ ಸರಕಾರ ಎಂದು ಆಕ್ರೋಶ
ಬೆಂಗಳೂರು 5 ಅಕ್ಟೋಬರ್ 2026
ಎಸ್ ಐಆರ್ ವಿಷಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಮೇಲೆ ಸುಳ್ಳು ದೂರುಗಳನ್ನು ದಾಖಲಿಸಿ, ಅವರ ಮೇಲೆ ಪೊಲೀಸ್ ದಬ್ಬಾಳಿಕೆ ನಡೆಸುವುದನ್ನು ನಿಲ್ಲಿಸದಿದ್ದರೆ ನಾಳೆ (ಮಂಗಳವಾರ) 10 ಗಂಟೆಯ ನಂತರ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ಮುತ್ತಿಗೆ ಹಾಕುತ್ತೇವೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ನೇರ ಎಚ್ಚರಿಕೆ ನೀಡಿದರು.
ಬೆಂಗಳೂರಿನಲ್ಲಿ ಸೋಮವಾರ ರಾಜ್ಯ ಕಾಂಗ್ರೆಸ್ ಸರಕಾರವು ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅನಗತ್ಯ ಹಸ್ತಕ್ಷೇಪ ಮಾಡುತ್ತಾ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿರುವ ಬಗ್ಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ ನಂತರ ಅವರು ಎನ್ ಡಿಎ ನಾಯಕರೊಂದಿಗೆ ಮಾಧ್ಯಮಗಳ ಜತೆ ಮಾತನಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಸರಕಾರ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ಸರ್ಕಾರವು ಎಫ್‌ಐಆರ್ ಹಾಕುವ ವಿಚಾರದಲ್ಲಿ ನಡೆಸುತ್ತಿರುವ ರಾಜಕೀಯ ಡ್ರಾಮಾವನ್ನು ಖಂಡಿಸಿದರು.
ಇದು ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಮುಖ್ಯಮಂತ್ರಿ ಮತ್ತು ಸಚಿವ ಸಂಪುಟವೇ ನಾಚಿಕೆಗೇಡಿನ ಪ್ರದರ್ಶನ ನಡೆಸಿದೆ. ಗೂಂಡಾ ಸರಕಾರವು ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿದೆ. ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿರುವಾಗ ಇದು ಗೂಂಡಾ ಸರ್ಕಾರವಲ್ಲದೆ ಮತ್ತೇನು ಎಂದು ಅವರು ಪ್ರಶ್ನಿಸಿದರು.
ಕಾನೂನುಬಾಹಿರ ಬಂಧನಗಳನ್ನು ತಕ್ಷಣ ನಿಲ್ಲಿಸುವಂತೆ ಮತ್ತು ಕೇಂದ್ರ ಚುನಾವಣಾ ಆಯೋಗದಿಂದ ಸ್ಪಷ್ಟನೆ ನಿಡುವಂತೆ ಮುಖ್ಯ ಚುನಾವಣಾಧಿಕಾರಿ ಅವರಿಗೆ ಮನವಿ ಮಾಡಿದ್ದೇವೆ. ಫಾರಂ-7 ಸಲ್ಲಿಕೆಯು ಕಾನೂನುಬಾಹಿರವಲ್ಲ. ಈ ಬಗ್ಗೆ ನ್ಯಾಯಾಲಯ ಸ್ಪಷ್ಟನೆ ನೀಡಿದೆ. ಸರಕಾರವು ನೈಸ್, ಬಿಡದಿ ಟೌನ್ ಶಿಪ್ ಯೋಜನೆ, ಕೆಪಿಎಸ್ಸಿ ಹಗರಣಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಸರಕಾರ ಈ ಡ್ರಾಮಾ ಮಾಡುತ್ತಿದೆ ಎಂದು ಸಚಿವರು ಕಟುವಾಗಿ ಟೀಕಿಸಿದರು.
ಸರಕಾರಕ್ಕೆವು ಅಧಿಕಾರಿಗಳಿಗೆ ಸರಿಯಾದ ಸೂಚನೆ ನೀಡದಿದ್ದರೆ ಮತ್ತು ದಬ್ಬಾಳಿಕೆಯನ್ನು ಮುಂದುವರಿಸಿದರೆ ನಾಳೆ 10 ಗಂಟೆಯ ನಂತರ ಪೊಲೀಸ್ ಠಾಣೆಗಳಿಗೆ ಮುತ್ತಿಗೆ ಹಾಕುತ್ತೇವೆ ರಾಜ್ಯ ಸರಕಾರಕ್ಕೆ ಕುಮಾರಸ್ವಾಮಿ ಅವರು ಖಡಕ್ ಎಚ್ಚರಿಕೆ ನೀಡಿದರು.
ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಮೇಲೆ ಸುಳ್ಳು ದೂರುಗಳನ್ನು ದಾಖಲಿಸಿ, ಅವರ ಮೇಲೆ ಪೊಲೀಸ್ ದಬ್ಬಾಳಿಕೆ ನಡೆಸುವುದನ್ನು ನಿಲ್ಲಿಸಬೇಕು. ಪೊಲೀಸ್ ಇಲಾಖೆಯನ್ನು ಈ ರೀತಿ ದುರ್ಬಳಕೆ ಮಾಡಿಕೊಳ್ಳಬಾರದು. ರಾಜ್ಯ ಸರಕಾರ ಈ ರೀತಿಯ ಕಾನೂನುಬಾಹಿರ ಕ್ರಮಗಳನ್ನು ಕೈಗೊಳ್ಳುವುದನ್ನು ಮುಂದುವರಿಸಿದರೆ ನಾವು ಕೈಕಟ್ಟಿ ಕೂರಲು ಸಾಧ್ಯವಿಲ್ಲ. ಅದರ ವಿರುದ್ಧ ಪೊಲೀಸ್ ಠಾಣೆಗಳಿಗೆ ಮುತ್ತಿಗೆ ಹಾಕುವ ಚಳವಳಿ ಶುರು ಮಾಡುತ್ತೇವೆ. ರಾಜ್ಯದ ಐಜಿ, ಡಿಜಿ ಮತ್ತು ಕಮಿಷನರ್ ಅವರು ತಮ್ಮ ಅಧೀನದ ಅಧಿಕಾರಿಗಳಿಗೆ ಕಾನೂನುಬದ್ಧವಾಗಿ ನಡೆದುಕೊಳ್ಳಲು ಸರಿಯಾದ ಸೂಚನೆ ನೀಡಬೇಕು. ಇಲ್ಲವಾದರೆ ಪರಿಣಾಮ ನೆಟ್ಟಗೆ ಇರುವುದಿಲ್ಲ ಎಂದು ಅವರು ಎಚ್ಚರಿಸಿದರು.







Comments
Leave a Comment