ಬೆಟ್ಟದಪುರದಲ್ಲಿ ವೀರಶೈವ-ಲಿಂಗಾಯತ ಮಠಾಧಿಪತಿಗಳ ದೀಕ್ಷಾ ಸಂಸ್ಕಾರ, ಪ್ರತಿಭಾ ಪುರಸ್ಕಾರ ಸಮಾರಂಭ
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿ ಚಾಮರಾಜನಗರ ಜಿಲ್ಲಾ ವೀರಶೈವ-ಲಿಂಗಾಯತ ಮಠಾಧಿಪತಿಗಳ ದೀಕ್ಷಾ ಸಂಸ್ಕಾರ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಭವ್ಯವಾಗಿ ನೆರವೇರಿತು. ಈ ಸಂದರ್ಭದಲ್ಲಿ ಸುತ್ತೂರು ಶ್ರೀಕ್ಷೇತ್ರದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಕೆರೆಗೋಡಿ-ರಂಗಾಪುರದ ಪೂಜ್ಯ ಶ್ರೀಗಳು ಸೇರಿದಂತೆ ಅನೇಕ ಧಾರ್ಮಿಕ ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ಯಮಗಳ ಸಚಿವರಾದ ಶ್ರೀ ವಿಜಯಾನಂದ ಎಸ್. ಕಾಶಪ್ಪನವರ್, ಮಾಜಿ ಸಚಿವರು ಹಾಗೂ ಶಾಸಕರಾದ ಶ್ರೀ ಕೆ. ವೆಂಕಟೇಶ್, ಶಾಸಕರಾದ ಶ್ರೀ ಎಚ್.ಎಂ. ಗಣೇಶ್ ಪ್ರಸಾದ್ ಸೇರಿದಂತೆ ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದ ಗಣ್ಯರು ಭಾಗವಹಿಸಿದರು.
ಸಮಾರಂಭದಲ್ಲಿ ಮಠಾಧಿಪತಿಗಳ ದೀಕ್ಷಾ ಸಂಸ್ಕಾರ ನೆರವೇರಿಸಲಾಯಿತು. ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪ್ರತಿಭಾವಂತರಿಗೆ ಪುರಸ್ಕಾರಗಳನ್ನು ಪ್ರಧಾನ ಮಾಡಲಾಯಿತು. ಧಾರ್ಮಿಕ ಹಾಗೂ ಸಾಮಾಜಿಕ ಸಮನ್ವಯದ ಸಂಕೇತವಾಗಿ ನಡೆದ ಈ ಕಾರ್ಯಕ್ರಮದಲ್ಲಿ ಭಕ್ತರು, ಗ್ರಾಮಸ್ಥರು ಹಾಗೂ ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾರಂಭಕ್ಕೆ ಭವ್ಯತೆ ನೀಡಿದರು.
ಈ ಕಾರ್ಯಕ್ರಮವು ಧಾರ್ಮಿಕ ಪರಂಪರೆ, ಸಾಮಾಜಿಕ ಬಾಂಧವ್ಯ ಹಾಗೂ ಸಾಂಸ್ಕೃತಿಕ ಏಕತೆಯ ಪ್ರತೀಕವಾಗಿ ಪರಿಣಮಿಸಿತು






Comments
Leave a Comment