ಸೇವಾ ಜ್ಯೋತಿ ಯಾತ್ರೆಯ ಸಮಾರೋಪದಲ್ಲಿ ಯಡಿಯೂರಪ್ಪ–ಶೋಭಾ ಕರಂದ್ಲಾಜೆ ಸೇರಿದಂತೆ ಬಿಜೆಪಿ ಶಕ್ತಿಪ್ರದರ್ಶನ
ಬೆಂಗಳೂರು: ಸೇವಾ ಸಂಕಲ್ಪ ಅಭಿಯಾನದ ಪ್ರಯುಕ್ತ ನಡೆಯುತ್ತಿರುವ ಸೇವಾ ಜ್ಯೋತಿ ಯಾತ್ರೆಯ ಸಮಾರೋಪ ಸಮಾರಂಭವು ಇಂದು ಡಾ. ಎಂ.ಸಿ. ಮೋದಿ ಆಸ್ಪತ್ರೆಯ ರಸ್ತೆಯಲ್ಲಿರುವ ಶಂಕರಮಠ ಆಟದ ಮೈದಾನದಲ್ಲಿ ನಡೆಯಿತು. ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಕು. ಶೋಭಾ ಕರಂದ್ಲಾಜೆ, ಸಂಸದರಾದ ಪಿ.ಸಿ. ಮೋಹನ್, ತೇಜಸ್ವಿ ಸೂರ್ಯ, ರಾಜ್ಯಸಭಾ ಸದಸ್ಯ ಜಗ್ಗೇಶ್, ಮಾಜಿ ಡಿಸಿಎಂ ಡಾ. ಸಿ.ಎನ್. ಅಶ್ವಥ್ ನಾರಾಯಣ್, ಮಾಜಿ ಸಚಿವರಾದ ಸುರೇಶ್ ಕುಮಾರ್, ಗೋಪಾಲಯ್ಯ, ವಿಧಾನಪರಿಷತ್ ಸದಸ್ಯ ಎಸ್.ರಘು, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ.ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಮಾಜಿ ಶಾಸಕ ಎಂ.ಬಿ.ಲಕ್ಷ್ಮೀನಾರಾಯಣ್, ಪ್ರಕೋಷ್ಟಗಳ ರಾಜ್ಯ ಸಂಚಾಲಕ ಎಸ್.ದತ್ತಾತ್ರಿ, ಪ್ರಮುಖರು ಹಾಗೂ ಕಾರ್ಯಕರ್ತರು ಇದ್ದರು.







Comments
Leave a Comment