ಚಲಿಸುತ್ತಿದ್ದ ಬಸ್ ನಿಂದ ರಸ್ತೆಗೆ ಬಿದ್ದ ಸಹೋದರಿಯರು, ಅಪಾಯದಿಂದ ಪಾರು.

Dakshina Kannada:

Font size:

ಚಲಿಸುತ್ತಿದ್ದ ಬಸ್ ನಿಂದ ರಸ್ತೆಗೆ ಬಿದ್ದ ಸಹೋದರಿಯರು, ಅಪಾಯದಿಂದ ಪಾರು.

From : Jayaram Udupi

ಚಲಿಸುತ್ತಿದ್ದ ಬಸ್ ನಿಂದ ರಸ್ತೆಗೆ ಬಿದ್ದ ಸಹೋದರಿಯರು, ಅಪಾಯದಿಂದ ಪಾರು.

ಮಂಗಳೂರು: ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ.ಬಸ್‌ನಿಂದ ಇಬ್ಬರು ವಿದ್ಯಾರ್ಥಿನಿಯರು ಕೆಳಗೆ ಎಸೆಯಲ್ಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ರೇಷ್ಮೆ ರೋಡ್‌ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಪುತ್ತೂರಿನಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಅಕ್ಕ-ತಂಗಿ ಗೇರುಕಟ್ಟೆ ಎಂಬಲ್ಲಿ ಬಸ್ ಹತ್ತಿದ್ದರು.
ಬಸ್ ರೇಷ್ಮೆ ರೋಡ್ ತಲುಪುತ್ತಿದ್ದಂತೆ ತಿರುವಿನಲ್ಲೇ ಏಕಾಏಕಿ ಬಸ್ಸಿನ ಬಾಗಿಲು ತೆರೆದುಕೊಂಡಿದ್ದು, ನಿಯಂತ್ರಣ ತಪ್ಪಿದ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ.

ಅಕ್ಕ ಕೆಳಗೆ ಬೀಳುತ್ತಿದ್ದಂತೆಯೇ ತಂಗಿ ಅವರನ್ನು ಹಿಡಿದುಕೊಳ್ಳಲು ಯತ್ನಿಸಿದರೂ, ಇಬ್ಬರೂ ಬಸ್‌ನಿಂದ ಕೆಳಗೆ ಬಿದ್ದಿದ್ದಾರೆ.
ಈ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಗಾಯಗೊಂಡ ಇಬ್ಬರು ವಿದ್ಯಾರ್ಥಿನಿಯರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಣ್ಣಪುಟ್ಟ ಗಾಯಗಳೊಂದಿಗೆ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ..

Comments

Leave a Comment

Prev Post ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Next Post ಸೀಮಿತ ತೈಲ ಸಂಪತ್ತು; ಸೌರಶಕ್ತಿ ಮತ್ತು ಇತರ ನವೀಕರಿಸಬಹುದಾದ ಇಂಧನಗಳೇ ಭವಿಷ್ಯದ ಮಾರ್ಗ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News