PRABHAVAA.COM

ಮೈಸೂರು ದಸರಾ ಪ್ರವಾಸಿಗರಿಗೆ KSTDC ವಿಶೇಷ ವ್ಯವಸ್ಥೆ; ‘ಅಂಬಾರಿ’ ಡಬಲ್ ಡೆಕ್ಕರ್ ಬಸ್‌, 7 ವಿಶೇಷ ಪ್ರವಾಸ ಪ್ಯಾಕೇಜ್‌ಗಳು: ಸಚಿವ ಕೆ.ಜೆ. ಜಾರ್ಜ್

Bengaluru Urban:

Font size:

ಮೈಸೂರು ದಸರಾ ಪ್ರವಾಸಿಗರಿಗೆ KSTDC ವಿಶೇಷ ವ್ಯವಸ್ಥೆ; ‘ಅಂಬಾರಿ’ ಡಬಲ್ ಡೆಕ್ಕರ್ ಬಸ್‌, 7 ವಿಶೇಷ ಪ್ರವಾಸ ಪ್ಯಾಕೇಜ್‌ಗಳು: ಸಚಿವ ಕೆ.ಜೆ. ಜಾರ್ಜ್

ಬೆಂಗಳೂರು, ಅಕ್ಟೋಬರ್ 9: ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಆಗಮಿಸುವ ಪ್ರವಾಸಿಗರಿಗೆ ಸುಗಮ ಮತ್ತು ವೈವಿಧ್ಯಮಯ ಪ್ರವಾಸಿ ಅನುಭವ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ವಿಶೇಷ ಪ್ರವಾಸ ವ್ಯವಸ್ಥೆಗಳನ್ನು ರೂಪಿಸಿದೆ ಎಂದು ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.

ದಸರಾ ಸಂದರ್ಭದಲ್ಲಿ ಮೈಸೂರಿನ ಪ್ರಮುಖ ತಾಣಗಳು ಮತ್ತು ವಿದ್ಯುತ್ ದೀಪಾಲಂಕಾರವನ್ನು ವೀಕ್ಷಿಸಲು KSTDCಯ ಜನಪ್ರಿಯ ‘ಅಂಬಾರಿ’ ಡಬಲ್ ಡೆಕ್ಕರ್ ಬಸ್ ಸೇವೆಯನ್ನು ವಿಶೇಷವಾಗಿ ನಡೆಸಲಾಗುತ್ತಿದೆ. ಇದರ ಜೊತೆಗೆ ಮೈಸೂರು ಹಾಗೂ ಸುತ್ತಮುತ್ತಲಿನ ಪ್ರಮುಖ ಪ್ರವಾಸಿ ತಾಣಗಳನ್ನು ಪರಿಚಯಿಸುವ ವಿಶೇಷ ಪ್ರವಾಸ ಪ್ಯಾಕೇಜ್‌ಗಳನ್ನು ರೂಪಿಸಲಾಗಿದೆ.

‘ಅಂಬಾರಿ’ಯಲ್ಲಿ ದಸರಾ ದೀಪಾಲಂಕಾರ ವೀಕ್ಷಣೆ

‘ಅಂಬಾರಿ’ ಡಬಲ್ ಡೆಕ್ಕರ್ ಬಸ್‌ ಹಗಲು ವೇಳೆಯಲ್ಲಿ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಪ್ರತಿ ಗಂಟೆಗೊಮ್ಮೆ ಸಂಚರಿಸಲಿದೆ. ಹಗಲಿನ ಸವಾರಿಗೆ ಪ್ರತಿ ವ್ಯಕ್ತಿಗೆ ₹250 ದರ ನಿಗದಿಪಡಿಸಲಾಗಿದೆ.

ಮೈಸೂರಿನ ದಸರಾ ವಿದ್ಯುತ್ ದೀಪಾಲಂಕಾರವನ್ನು ವೀಕ್ಷಿಸಲು ಸಂಜೆ 6.30, ರಾತ್ರಿ 8 ಹಾಗೂ 9.30ಕ್ಕೆ ವಿಶೇಷ ಸವಾರಿಗಳು ಇರಲಿವೆ. ರಾತ್ರಿ ಸವಾರಿಯಲ್ಲಿ ಕೆಳಗಿನ ಡೆಕ್‌ಗೆ ₹250 ಹಾಗೂ ಮೇಲಿನ ಡೆಕ್‌ಗೆ ₹500 ದರ ನಿಗದಿಪಡಿಸಲಾಗಿದೆ.

ನಗರದ ಪ್ರಮುಖ ವೃತ್ತಗಳು, ಅರಮನೆ ಸುತ್ತಮುತ್ತಲಿನ ಪ್ರದೇಶಗಳು, ಸಯ್ಯಾಜಿರಾವ್ ರಸ್ತೆ ಸೇರಿದಂತೆ ದಸರಾ ದೀಪಾಲಂಕಾರದಿಂದ ಕಂಗೊಳಿಸುವ ಪ್ರಮುಖ ಭಾಗಗಳ ಮೂಲಕ ‘ಅಂಬಾರಿ’ ಸಂಚರಿಸುವಂತೆ ವ್ಯವಸ್ಥೆ ಮಾಡಲಾಗಿದೆ.

ಏಳು ದಸರಾ ವಿಶೇಷ ಪ್ರವಾಸ ಪ್ಯಾಕೇಜ್‌ಗಳು

ದಸರಾಕ್ಕೆ ಆಗಮಿಸುವ ಪ್ರವಾಸಿಗರು ಮೈಸೂರು ನಗರಕ್ಕೆ ಮಾತ್ರ ಸೀಮಿತವಾಗದೆ ಕರ್ನಾಟಕದ ಇತರೆ ಪ್ರಮುಖ ಪ್ರವಾಸಿ ತಾಣಗಳನ್ನೂ ವೀಕ್ಷಿಸಲು ಅನುಕೂಲವಾಗುವಂತೆ KSTDC ಏಳು ವಿಶೇಷ ಪ್ರವಾಸ ಯೋಜನೆಗಳನ್ನು ರೂಪಿಸಿದೆ.

ಊಟಿಯ ಎರಡು ದಿನಗಳ ಪ್ರವಾಸ, ಮೈಸೂರು ಸ್ಥಳೀಯ ಪ್ರವಾಸ, ಬೇಲೂರು–ಹಳೇಬೀಡು–ಶ್ರವಣಬೆಳಗೊಳ, ಕೊಡಗಿನ ಪ್ರಮುಖ ತಾಣಗಳು, ಶಿವನಸಮುದ್ರ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ನಂಜನಗೂಡು ಸೇರಿದಂತೆ ವಿವಿಧ ಧಾರ್ಮಿಕ, ಐತಿಹಾಸಿಕ ಮತ್ತು ನೈಸರ್ಗಿಕ ಪ್ರವಾಸಿ ತಾಣಗಳನ್ನು ಒಳಗೊಂಡ ಒಂದು ಹಾಗೂ ಎರಡು ದಿನಗಳ ಪ್ಯಾಕೇಜ್‌ಗಳು ಲಭ್ಯವಿವೆ.

“ಮೈಸೂರು ದಸರಾವನ್ನು ನೋಡಲು ಬರುವ ಪ್ರವಾಸಿಗರು ಕೇವಲ ಒಂದು ಕಾರ್ಯಕ್ರಮವನ್ನು ನೋಡಿ ಹಿಂದಿರುಗದೆ, ಮೈಸೂರಿನ ವೈಭವದ ಜೊತೆಗೆ ಸುತ್ತಮುತ್ತಲಿನ ಇತರೆ ಪ್ರವಾಸಿ ತಾಣಗಳನ್ನೂ ಅನುಭವಿಸಬೇಕು. ಅದಕ್ಕಾಗಿ ಸುಗಮ ಪ್ರಯಾಣ, ವಿಶ್ವಾಸಾರ್ಹ ಸೇವೆ ಮತ್ತು ವೈವಿಧ್ಯಮಯ ಪ್ರವಾಸ ಪ್ಯಾಕೇಜ್‌ಗಳನ್ನು KSTDC ಮೂಲಕ ಒದಗಿಸಲಾಗುತ್ತಿದೆ. ಪ್ರವಾಸಿಗರಿಗೆ ದಸರಾ ಅನುಭವವನ್ನು ಇನ್ನಷ್ಟು ಸ್ಮರಣೀಯವಾಗಿಸುವುದು ನಮ್ಮ ಉದ್ದೇಶ,” ಎಂದು ಸಚಿವ ಕೆ.ಜೆ. ಜಾರ್ಜ್ ಹೇಳಿದರು.

ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಡಾ. ರಾಮ್ ಪ್ರಸಾತ್ ಮನೋಹರ್ ಮಾತನಾಡಿ, “ದಸರಾ ಸಂದರ್ಭದಲ್ಲಿ ಮೈಸೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವುದರಿಂದ ಅವರ ಪ್ರಯಾಣವನ್ನು ಸುಲಭಗೊಳಿಸಲು ವಿಶೇಷ ವ್ಯವಸ್ಥೆ ಮಾಡಲಾಗಿದೆ. ‘ಅಂಬಾರಿ’ ಬಸ್ ಮೂಲಕ ದೀಪಾಲಂಕಾರ ವೀಕ್ಷಣೆಯ ಜೊತೆಗೆ, ಮೈಸೂರು ಮತ್ತು ಸುತ್ತಮುತ್ತಲಿನ ಪ್ರಮುಖ ಪ್ರವಾಸಿ ತಾಣಗಳಿಗೆ KSTDC ವಿಶೇಷ ಪ್ಯಾಕೇಜ್‌ಗಳನ್ನು ರೂಪಿಸಿದೆ,” ಎಂದರು.

ಕೆಎಸ್‌ಟಿಡಿಸಿ ವ್ಯವಸ್ಥಾಪಕ ನಿರ್ದೇಶಕರಾದ ಶಿವಪ್ರಸಾದ್ ಪಿ.ಆರ್. ಮಾತನಾಡಿ, “ದಸರಾವನ್ನು ಒಂದು ನಗರೋತ್ಸವಕ್ಕೆ ಮಾತ್ರ ಸೀಮಿತಗೊಳಿಸದೆ, ಅದನ್ನು ವಿಶಾಲ ಪ್ರವಾಸಿ ಅನುಭವವಾಗಿ ರೂಪಿಸುವುದು ನಮ್ಮ ಗುರಿ. ಮೈಸೂರಿಗೆ ಆಗಮಿಸುವ ಪ್ರವಾಸಿಗರನ್ನು ಸುತ್ತಮುತ್ತಲಿನ ಪರಂಪರೆ, ಪ್ರಕೃತಿ, ಧಾರ್ಮಿಕ ಮತ್ತು ಸಾಂಸ್ಕೃತಿಕ ತಾಣಗಳೊಂದಿಗೆ ಸಂಪರ್ಕಿಸುವ ಮೂಲಕ ಅವರ ವಾಸ್ತವ್ಯದ ಅವಧಿ ಮತ್ತು ಪ್ರವಾಸಿ ಅನುಭವ ಎರಡನ್ನೂ ಹೆಚ್ಚಿಸಲು ಸಾಧ್ಯವಾಗುತ್ತದೆ,” ಎಂದರು.

ಪ್ರವಾಸ ಪ್ಯಾಕೇಜ್‌ಗಳು, ‘ಅಂಬಾರಿ’ ಬಸ್ ಸೇವೆ ಹಾಗೂ ಬುಕ್ಕಿಂಗ್ ಸಂಬಂಧಿತ ಮಾಹಿತಿಗಾಗಿ ಪ್ರವಾಸಿಗರು KSTDC ಸಹಾಯವಾಣಿ ಸಂಖ್ಯೆ 080-4334 4334 / 35 / 36 / 42, 0821-2423652 ಅಥವಾ 8970656400 ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗೆ www.kstdc.co ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಅಥವಾ info@kstdc.coಗೆ ಇ-ಮೇಲ್ ಮಾಡಬಹುದು.

Comments

Leave a Comment

Prev Post ರೈತರ ಸಂಕಷ್ಟಕ್ಕೆ ಸ್ಪಂದಿಸದ ಕಾಂಗ್ರೆಸ್ ಸರ್ಕಾರ; ರೈತ ವಿರೋಧಿ ನೀತಿಗಳಿಂದ ಜನಜೀವನ ಸಂಕಷ್ಟಕ್ಕೆ: ಬಿ.ವೈ. ವಿಜಯೇಂದ್ರ
Next Post ಹಾಯ್-ಹಲೋ ಪಿತಾಮಹ ಯಾರು ಅಂತ ಜಗತ್ತೇ ನೋಡಿದೆ! ನೆಲಮಂಗಲದಲ್ಲಿ ನಿಖಿಲ್ ಕುಮಾರಸ್ವಾಮಿ ಹೊಸ ಬಾಂಬ್

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News