ವೈದೇಹಿ ಅವರಿಗೆ ಕಾರಂತ ಪ್ರಶಸ್ತಿ ಪ್ರದಾನ.
ವೈದೇಹಿ ಅವರಿಗೆ ಕಾರಂತ ಪ್ರಶಸ್ತಿ ಪ್ರದಾನ.
From ; Jayaram Udupi
ಮಂಗಳೂರು: ಹಿರಿಯ ಸಾಹಿತಿ, ಕಾದಂಬರಿಗಾರ್ತಿ ವೈದೇಹಿ ಅವರಿಗೆ ಕಲ್ಕೂರ ಪ್ರತಿಷ್ಠಾನದಿಂದ ನೀಡಲಾಗುವ ‘ಕಾರಂತ ಪ್ರಶಸ್ತಿ-2026’ ನ್ನು ಪ್ರದಾನ ಮಾಡಲಾಯಿತು.
ಕಡಲ ತೀರದ ಭಾರ್ಗವ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ 123ನೇ ಜನ್ಮದಿನದ ಅಂಗವಾಗಿ ಈ ಕಾರ್ಯಕ್ರಮ ಆಯೋಜನೆಯಾಗಿತ್ತು.
ಮಂಗಳೂರಿನ ಪತ್ತುಮುಡಿ ಸೌಧದ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ ಅವರು ವೈದೇಹಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಬಿ.ಎ. ವಿವೇಕ ರೈ ಅವರು ಕೋಟ ಶಿವರಾಮ ಕಾರಂತರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕಾರಂತರ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಹಾಗೂ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪಕುಮಾರ ಕಲ್ಕೂರ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಎಚ್. ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.






Comments
Leave a Comment