PRABHAVAA.COM

ಗ್ರಾಮೀಣ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ವೃತ್ತಿಪರ ಕೋರ್ಸ್‌ಗಳಲ್ಲಿ 15% ಅಡ್ಡ ಮೀಸಲಾತಿ ಜಾರಿ

Bengaluru Urban:

Font size:

ಗ್ರಾಮೀಣ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ವೃತ್ತಿಪರ ಕೋರ್ಸ್‌ಗಳಲ್ಲಿ 15% ಅಡ್ಡ ಮೀಸಲಾತಿ ಜಾರಿ

ಗ್ರಾಮೀಣ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ವೃತ್ತಿಪರ ಕೋರ್ಸ್‌ಗಳಲ್ಲಿ 15% ಅಡ್ಡ ಮೀಸಲಾತಿ ಜಾರಿ

ಬೆಂಗಳೂರು , ಅ. 10-ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದೆ. ಸರ್ಕಾರಿ ಸೀಟುಗಳಿಗೆ ಪ್ರವೇಶ ಸಂಬಂಧಿಸಿದ ನಿಯಮಗಳಲ್ಲಿ ತಿದ್ದುಪಡಿ ಮಾಡಿ, ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಸಂಗ ಮಾಡಿದ ಅರ್ಹ ವಿದ್ಯಾರ್ಥಿಗಳಿಗೆ ಒಟ್ಟು 15 ಶೇಕಡಾ ಅಡ್ಡ ಮೀಸಲಾತಿಯನ್ನು ಜಾರಿಗೆ ತರುವ ಮೂಲಕ ಉನ್ನತ ಶಿಕ್ಷಣದಲ್ಲಿ ಸಮಾನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಹೊಸ ಮೀಸಲಾತಿ ವ್ಯವಸ್ಥೆಯನ್ನು ಘೋಷಿಸುವ ಗೆಜೆಟ್ ಪ್ರಕಟಿಸಲಾಗಿದೆ.

ಕರ್ನಾಟಕ ಸರ್ಕಾರವು ವೃತ್ತಿಪರ ಶಿಕ್ಷಣ ಸಂಸ್ಥೆಗಳ ಸರ್ಕಾರಿ ಸೀಟುಗಳಿಗೆ ಪ್ರವೇಶ ಸಂಬಂಧಿಸಿದ ನಿಯಮಗಳಲ್ಲಿ ಮಹತ್ವದ ತಿದ್ದುಪಡಿ ಮಾಡಿ ಹೊಸ ಮೀಸಲಾತಿ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಸರ್ಕಾರಿ ಸೀಟುಗಳಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಒಟ್ಟು 15 ಶೇಕಡಾ ಅಡ್ಡ ಮೀಸಲಾತಿಯನ್ನು ಕಲ್ಪಿಸಲಾಗಿದೆ. ಈ ಪೈಕಿ ಶೇ.7.5 ಸೀಟುಗಳನ್ನು ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿರುವ ಶಾಲಾ ಶಿಕ್ಷಣ ಇಲಾಖೆಯಿಂದ ನಿರ್ವಹಿಸಲ್ಪಡುವ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಒಂದನೇ ತರಗತಿಯಿಂದ ಹತ್ತನೇ ತರಗತಿಯವರೆಗೆ ವ್ಯಾಸಂಗ ಮಾಡಿದ ಅರ್ಹ ಗ್ರಾಮೀಣ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ.

ಉಳಿದ ಶೇ.7.5 ಸೀಟುಗಳನ್ನು ಗ್ರಾಮೀಣ ಪ್ರದೇಶಗಳ ಇತರ ಶಿಕ್ಷಣ ಸಂಸ್ಥೆಗಳು ಅಥವಾ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಹತ್ತನೇ ತರಗತಿಯವರೆಗೆ ಅಧ್ಯಯನ ಮಾಡಿದ ಅರ್ಹ ಗ್ರಾಮೀಣ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಕರಡು ನಿಯಮಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಆಹ್ವಾನಿಸಲಾಗಿದ್ದು, ಅವುಗಳನ್ನು ಪರಿಗಣಿಸಿದ ಬಳಿಕ ರಾಜ್ಯ ಸರ್ಕಾರ ಅಂತಿಮ ನಿಯಮಗಳನ್ನು ಅಧಿಸೂಚನೆ ಮೂಲಕ ಪ್ರಕಟಿಸಿದೆ. ಈ ತಿದ್ದುಪಡಿ ನಿಯಮಗಳು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟವಾದ ದಿನಾಂಕದಿಂದಲೇ ಜಾರಿಗೆ ಬರಲಿವೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣದಲ್ಲಿ ಹೆಚ್ಚಿನ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.

Comments

Leave a Comment

Prev Post ಗುರುಗಳು ಹಾಗೂ ಗುರುಮಠಗಳ ಕಾರ್ಯಗಳು ಸ್ತುತ್ಯಾರ್ಹ: ಸಿಎಂ ಡಿ ಕೆ ಶಿವಕುಮಾರ್

ದೇಶ ಹಾಗೂ ರಾಜ್ಯದ ಬೆಳವಣಿಗೆಗೆ ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳ ಕೊಡುಗೆ ಅಪಾರ: ಡಿಸಿಎಂ ಡಿ.ಕೆ. ಶಿವಕುಮಾರ್

ಎಲ್ಲರೂ ಜ್ಞಾನ ಹಂಚಿಕೊಂಡು ಬಾಳಬೇಕು ಬೆಂಗಳೂರಿನ ಹೆಮ್ಮೆ ಜ್ಯೋತಿ ನಿವಾಸ್ ಕಾಲೇಜು

ಮಂಗಳೂರು ವಿಶ್ವವಿದ್ಯಾನಿಲಯ ಘಟಿಕೋತ್ಸವ ; ಗೌರವ ಡಾಕ್ಟರೇಟ್ ಪ್ರದಾನ.

ಮಂಗಳೂರು ವಿಶ್ವವಿದ್ಯಾನಿಲಯ ಘಟಿಕೋತ್ಸವ ; ಗೌರವ ಡಾಕ್ಟರೇಟ್ ಪ್ರದಾನ.

ಕರ್ನಾಟಕ ಸರ್ಕಾರದ ಮಹತ್ವದ ಆದೇಶ: ಹದಿಹರೆಯದವರ ಆರೋಗ್ಯಕ್ಕಾಗಿ ‘ಸ್ನೇಹ ಕೇಂದ್ರ’ಗಳ ವಿಸ್ತರಣೆ, ಸಮಗ್ರ ಸಮಾಲೋಚನಾ ಕೇಂದ್ರಗಳ ಸ್ಥಾಪನೆ

ಕರ್ನಾಟಕ ಸರ್ಕಾರದ ಮಹತ್ವದ ಆದೇಶ: ಹದಿಹರೆಯದವರ ಆರೋಗ್ಯಕ್ಕಾಗಿ ‘ಸ್ನೇಹ ಕೇಂದ್ರ’ಗಳ ವಿಸ್ತರಣೆ, ಸಮಗ್ರ ಸಮಾಲೋಚನಾ ಕೇಂದ್ರಗಳ ಸ್ಥಾಪನೆ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಅಮೂಲಾಗ್ರ ಬದಲಾವಣೆ ಗೆಜೆಟ್ ಪ್ರಕಟಣೆ

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಅಮೂಲಾಗ್ರ ಬದಲಾವಣೆ ಗೆಜೆಟ್ ಪ್ರಕಟಣೆ

ಸಹಾಯಧನ ಪಡೆಯುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ

ಸಹಾಯಧನ ಪಡೆಯುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ

Read all News