ಬೆಂಗಳೂರಿಗೆ ಆಗಮಿಸಿದ ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು

Bengaluru Urban:

Font size:

ಆತ್ಮೀಯವಾಗಿ ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು, ಮಾ. 31 -

2026ನೇ ಏಪ್ರಿಲ್ 1 ರಂದು ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ಆಯೋಜಿಸಲಾಗಿರುವ ಡಾ. ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ 199 ನೇ ಜಯಂತೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು ರಾತ್ರಿ ಭಾರತೀಯ ವಾಯು ಸೇನೆಯ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಮಯದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳನ್ನು ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಆತ್ಮೀಯವಾಗಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಇಲಾಖೆಯ ರಾಜ್ಯ ಖಾತೆ ಸಚಿವರಾದ ವಿ. ಸೋಮಣ್ಣ, ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗರೆಡ್ಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿಗಳಾದ ಗೌರವ್ ಗುಪ್ತ, ಕರ್ನಾಟಕ ಪೊಲೀಸ್ ‌ಮಹಾನಿರ್ದೇಶಕರಾದ ಡಾ.ಎಂ.ಎ. ಸಲೀಮ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ್ ಜಿ, ಸೇರಿದಂತೆ ಹಿರಿಯ ಅಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.

ನಂತರ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಲೋಕ ಭವನಕ್ಕೆ ತೆರಳಿದರು.

Comments

Leave a Comment

Prev Post ಸೀಮಿತ ತೈಲ ಸಂಪತ್ತು; ಸೌರಶಕ್ತಿ ಮತ್ತು ಇತರ ನವೀಕರಿಸಬಹುದಾದ ಇಂಧನಗಳೇ ಭವಿಷ್ಯದ ಮಾರ್ಗ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News