ಮಂಗಳೂರು ದಸರಾ ವಿವಾದ: ರಜೆ ಉಲ್ಲಂಘಿಸಿ ಪರೀಕ್ಷೆ, ವಿದ್ಯಾರ್ಥಿಗಳ ಪ್ರತಿಭಟನೆಗೆ ಎಬಿವಿಪಿ-ವಿಶ್ವಹಿಂದೂ ಪರಿಷತ್ ಬೆಂಬಲ
From Jayram Udupi
ಮಂಗಳೂರು/ ದಕ್ಷಿಣ ಕನ್ನಡ:
ರಾಜ್ಯದಲ್ಲಿ ದಸರಾ ರಜೆ ಘೋಷಣೆಯಾಗಿದೆ. ಅತ್ತ ಮೈಸೂರು ದಸರಾ, ಇತ್ತ ಮಂಗಳೂರು ದಸರಾ. ಎಲ್ಲಾ ಕಡೆ ದಸರಾ ರಜೆಯ ಸಂಭ್ರಮ ಇದ್ದರೆ ಮಂಗಳೂರಿನ ಖಾಸಗಿ ಕಾಲೇಜೊಂದು ನಾಡಹಬ್ಬ ದಸರಾ ರಜೆಯನ್ನು ಉಲ್ಲಂಘಿಸಿ ಪದವಿ ಸೆಮಿಸ್ಟರ್ ಪರೀಕ್ಷೆ ನಡೆಸಲು ಹೊರಟಿದೆ. ಇದು ವಿದ್ಯಾರ್ಥಿಗಳನ್ನು ಕೆರಳಿಸಿದೆ.
ಹಬ್ಬಕ್ಕೆ ರಜೆ ನೀಡದೆ ಸೆಮಿಸ್ಟರ್ ಪರೀಕ್ಷೆ ನಡೆಸುವುದನ್ನು ಖಂಡಿಸಿ ಮಂಗಳೂರಿನ ಬೆಂದೂರು ವೆಲ್ ಸೇಂಟ್ ಆಗ್ನೇಸ್ ಕಾಲೇಜು ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿದರು. ಪರೀಕ್ಷೆಯನ್ನು ಬಹಿಷ್ಕರಿಸಿದ ವಿದ್ಯಾರ್ಥಿಗಳು ಕಾಲೇಜಿನ ಪ್ರವೇಶ ದ್ವಾರದ ಎದುರು ಧರಣಿ ನಡೆಸಿದರು.
ವಿದ್ಯಾರ್ಥಿಗಳ ಪ್ರತಿಭಟನೆಗೆ ಎಬಿವಿಪಿ ಸಂಘಟನೆ ಸಹ ಬೆಂಬಲ ವ್ಯಕ್ತಪಡಿಸಿದ್ದು ದಸರಾ ಸಂಭ್ರಮದ ಹೊತ್ತಲ್ಲಿ ಪರೀಕ್ಷೆ ನಡೆಸಬಾರದು ಎಂದು ಆಗ್ರಹಿಸಿದೆ.
ಇತ್ತ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್
ಸೇಂಟ್ ಆಗ್ನೆಸ್ ಕಾಲೇಜು ಆಡಳಿತ ದಸರಾ ಹಬ್ಬದ ಸಂದರ್ಭದಲ್ಲಿ ಪರೀಕ್ಷೆಗಳನ್ನು ನಡೆಸಿರುವುದು ಖಂಡನೀಯ ಎಂದಿದ್ದಾರೆ.
ಕೂಡಲೇ ಕಾಲೇಜು ಆಡಳಿತ ಮಂಡಳಿ ಪರೀಕ್ಷಾ ದಿನಾಂಕವನ್ನು ಬದಲಾಯಿಸಬೇಕು ಎಂದು ಆಗ್ರಹಿಸಿದ್ದಾರೆ.
ದಸರಾ ಹಬ್ಬದ ರಜೆಯ ಅವಧಿಯಲ್ಲಿ ಪರೀಕ್ಷೆಗಳನ್ನು ನಡೆಸಿರುವುದು ಮತ್ತು ಅದರ ವಿರುದ್ಧ ಧ್ವನಿ ಎತ್ತಿದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಇಲಾಖೆ ನಡೆಸಿರುವ ಬಲಪ್ರಯೋಗವನ್ನು ವಿಶ್ವಹಿಂದೂ ಪರಿಷತ್ ಖಂಡಿಸಿದೆ.
ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯವು ಅತ್ಯಂತ ಖಂಡನೀಯ. ಶಾಂತಿಯುತ ಪ್ರತಿಭಟನೆ ಮತ್ತು ಕಾನೂನುಬದ್ಧ ಹೋರಾಟ ಮಾಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳ ಹಕ್ಕು.
ವಿದ್ಯಾರ್ಥಿಗಳ ಮೇಲೆ ಕೈ ಮಾಡಲು ಮತ್ತು ದೌರ್ಜನ್ಯ ಎಸಗಲು ಯಾರು ಆದೇಶ ನೀಡಿದರು ಎಂಬ ಪ್ರಶ್ನೆಗೆ ಸಂಬಂಧಪಟ್ಟ ಪೊಲೀಸ್ ಹಾಗೂ ಆಡಳಿತ ಯಂತ್ರದಿಂದ ಸ್ಪಷ್ಟನೆ ದೊರೆಯಬೇಕಿದೆ ಎಂದು ಅದು ಆಗ್ರಹಿಸಿದೆ.
ಶಾಸಕರಾದ ಡಾ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಎಂಎಲ್ ಸಿ ಕಿಶೋರ್ ಕುಮಾರ್ ಪುತ್ತೂರು ಇವರು ಸಹ ಕಾಲೇಜಿನ ಕ್ರಮವನ್ನು ಖಂಡಿಸಿದ್ದಾರೆ.






Comments
Leave a Comment