PRABHAVAA.COM

ಶಕ್ತಿ ಯೋಜನೆಗೆ 430 ಕೋಟಿ ರೂಪಾಯಿ ಬಿಡುಗಡೆ: ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಸರ್ಕಾರದ ಆರ್ಥಿಕ ಬಲ

Bengaluru Urban:

Font size:

ಶಕ್ತಿ ಯೋಜನೆಗೆ 430 ಕೋಟಿ ರೂಪಾಯಿ ಬಿಡುಗಡೆ: ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಸರ್ಕಾರದ ಆರ್ಥಿಕ ಬಲ

ಶಕ್ತಿ ಯೋಜನೆಗೆ 430 ಕೋಟಿ ರೂಪಾಯಿ ಬಿಡುಗಡೆ: ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಸರ್ಕಾರದ ಆರ್ಥಿಕ ಬಲ

#ShaktiYojana #ShaktiScheme #KarnatakaGovernment #FreeBusTravel #WomenEmpowerment #KSRTC #BMTC #NWKRTC #KKRTC #KarnatakaTransport #WomenPassengers #GenderMinorities #GovernmentGrant #TransportDepartment #KarnatakaNews #PublicTransport #FreeTravelScheme #StateBudget #KSRTCNews #BengaluruNews

ಬೆಂಗಳೂರು,ಅ. 13-ನಿತ್ಯ ಲಕ್ಷಾಂತರ ಮಹಿಳೆಯರ ಉಚಿತ ಪ್ರಯಾಣಕ್ಕೆ ಆಧಾರವಾಗಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಶಕ್ತಿ’ ಯೋಜನೆಗೆ ಮತ್ತೊಂದು ಭಾರಿ ಆರ್ಥಿಕ ಬಲ ದೊರೆತಿದೆ. ಅಕ್ಟೋಬರ್ 2026ರ ತಿಂಗಳ ಉಚಿತ ಬಸ್ ಪ್ರಯಾಣದ ವೆಚ್ಚ ಭರಿಸಲು ಸರ್ಕಾರ ಏಕಕಾಲದಲ್ಲಿ 430 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು, ಕರ್ನಾಟಕದ ನಾಲ್ಕು ರಸ್ತೆ ಸಾರಿಗೆ ನಿಗಮಗಳಿಗೆ ಅನುದಾನ ಹಂಚಿಕೆ ಮಾಡಿ ಆದೇಶ ಹೊರಡಿಸಿದೆ. ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ನಿರಂತರವಾಗಿ ಉಚಿತ ಪ್ರಯಾಣ ಸೇವೆ ದೊರೆಯುವಂತೆ ನೋಡಿಕೊಳ್ಳುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಶಕ್ತಿ’ ಯೋಜನೆಯಡಿ ಅಕ್ಟೋಬರ್ 2026ರ ಮಾಹೆಯಲ್ಲಿ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಉಚಿತವಾಗಿ ಪ್ರಯಾಣಿಸಿದ ವೆಚ್ಚ ಭರಿಸಲು 43,000 ಲಕ್ಷ ರೂಪಾಯಿ, ಅಂದರೆ 430 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.2026-27ನೇ ಸಾಲಿನ ಆಯವ್ಯಯದಲ್ಲಿ ಶಕ್ತಿ ಯೋಜನೆಗಾಗಿ ಒಟ್ಟು 5,300 ಕೋಟಿ ರೂಪಾಯಿ ಮೀಸಲಿಡಲಾಗಿದ್ದು, ಸಹಾಯಧನ, ಪರಿಶಿಷ್ಟ ಜಾತಿ ಉಪಯೋಜನೆ (ಎಸ್‌ಸಿಎಸ್‌ಪಿ) ಹಾಗೂ ಗಿರಿಜನ ಉಪಯೋಜನೆ (ಟಿಎಸ್‌ಪಿ) ಅಡಿಯಲ್ಲಿ ಈ ಅನುದಾನವನ್ನು ಹಂಚಿಕೆ ಮಾಡಲಾಗಿದೆ.

ಈ ಹಿಂದೆ ಹೊರಡಿಸಲಾಗಿದ್ದ ಸರ್ಕಾರದ ಆದೇಶಗಳ ಅನ್ವಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್‌ಡಬ್ಲ್ಯೂಕೆಆರ್‌ಟಿಸಿ) ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) writeವ್ಯಾಪ್ತಿಯಲ್ಲಿ ಶಕ್ತಿ ಯೋಜನೆ ಜಾರಿಯಲ್ಲಿದೆ. ಈ ಯೋಜನೆಯಡಿ ಕರ್ನಾಟಕದ ಎಲ್ಲಾ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ ನಗರ, ಸಾಮಾನ್ಯ ಮತ್ತು ವೇಗದೂತ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ.

ಅಕ್ಟೋಬರ್ 2026ರ ತಿಂಗಳಲ್ಲಿ ವಿತರಿಸಲಾಗಿರುವ ಮತ್ತು ವಿತರಿಸಲಾಗಲಿರುವ ಶೂನ್ಯ ದರದ ಟಿಕೆಟ್‌ಗಳ ವೆಚ್ಚ ಭರಿಸುವ ಉದ್ದೇಶದಿಂದ 430 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು, ವಿವಿಧ ಸಾರಿಗೆ ನಿಗಮಗಳಿಗೆ ಶೇಕಡಾವಾರು ಅನುಪಾತದಂತೆ ಅನುದಾನ ಹಂಚಿಕೆ ಮಾಡಲಾಗಿದೆ.ಈ ಪೈಕಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 16,434.59 ಲಕ್ಷ ರೂಪಾಯಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 7,843.21 ಲಕ್ಷ ರೂಪಾಯಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ 10,539.30 ಲಕ್ಷ ರೂಪಾಯಿ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ 8,182.90 ಲಕ್ಷ ರೂಪಾಯಿ ಬಿಡುಗಡೆ ಮಾಡಲಾಗಿದೆ.

ಅನುದಾನ ಬಿಡುಗಡೆಗೆ ಸರ್ಕಾರ ಕೆಲ ಷರತ್ತುಗಳನ್ನು ವಿಧಿಸಿದೆ. ಅಕ್ಟೋಬರ್ ತಿಂಗಳ ವಾಸ್ತವಿಕ ವೆಚ್ಚದ ಕ್ರೋಢೀಕೃತ ವಿಭಾಗವಾರು ವಿವರಗಳನ್ನು ಶಕ್ತಿ ಯೋಜನೆಯ ನೋಡಲ್ ಸಂಸ್ಥೆಯಾಗಿರುವ ಕೆಎಸ್‌ಆರ್‌ಟಿಸಿ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.ಇದರ ಜೊತೆಗೆ ಶಕ್ತಿ ಸ್ಮಾರ್ಟ್ ಕಾರ್ಡ್‌ಗಳ ವಿತರಣಾ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಹಾಗೂ ಬಿಡುಗಡೆಗೊಂಡಿರುವ ಅನುದಾನದ ಬಳಕೆ ಪ್ರಮಾಣಪತ್ರಗಳನ್ನು ನಾಲ್ಕೂ ಸಾರಿಗೆ ನಿಗಮಗಳು ಕಡ್ಡಾಯವಾಗಿ ಸಲ್ಲಿಸಬೇಕು ಎಂದು ನಿರ್ದೇಶಿಸಲಾಗಿದೆ.ರಾಜ್ಯ ಹುಜೂರು ಖಜಾನೆಯಿಂದ ಹಣವನ್ನು ಡ್ರಾ ಮಾಡಿಕೊಳ್ಳಲು ನಾಲ್ಕು ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸರ್ಕಾರ ಅನುಮತಿ ನೀಡಲಾಗಿದೆ.

Comments

Leave a Comment

Prev Post ಉಡುಪಿ ಜಿಲ್ಲೆ ಸಾಕ್ಷರತೆಯ ಬೆಳಕಿನಲ್ಲಿ ಹೊಳೆಯಿತು – ಸಂಪೂರ್ಣ ಸಾಕ್ಷರತಾ ಜಿಲ್ಲೆ ಘೋಷಣೆ,
Next Post “ಒತ್ತಡಮುಕ್ತ ಮನಸ್ಸು ಆರೋಗ್ಯವಂತ ಸಮಾಜದ ಬುನಾದಿ” – ಗಂಡಸಿ ಸದಾನಂದ ಸ್ವಾಮಿ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News