PRABHAVAA.COM

ನಿಗದಿತ ಅವಧಿಯಲ್ಲಿ ಹಣ ಕಟ್ಟದವರ ಕೈಗಾರಿಕಾ ನಿವೇಶನ ರದ್ದು: ಎಂಬಿಪಾ ಎಚ್ಚರಿಕೆ

Bengaluru Urban:

Font size:

ನಿಗದಿತ ಅವಧಿಯಲ್ಲಿ ಹಣ ಕಟ್ಟದವರ ಕೈಗಾರಿಕಾ ನಿವೇಶನ ರದ್ದು: ಎಂಬಿಪಾ ಎಚ್ಚರಿಕೆ

ಬೆಂಗಳೂರು: ಕೆಐಎಡಿಬಿ ಮೂಲಕ ಉದ್ಯಮಿಗಳಿಗೆ ಮಂಜೂರು ಮಾಡುವ ನಿವೇಶನಗಳಿಗೆ ನಿಗದಿತ ಅವಧಿಯಲ್ಲಿ ಹಣ ಪಾವತಿ ಮಾಡದಿದ್ದರೆ ಅಂತಹವರ‌ ನಿವೇಶನ‌ ಹಂಚಿಕೆಯನ್ನು ನಿಯಮ ಪ್ರಕಾರ ರದ್ದುಪಡಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಖನಿಜ ಭವನದಲ್ಲಿ ಕೆಐಎಡಿಬಿ ಅಧಿಕಾರಿಗಳ ಜತೆ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು ಈ ಸಂಬಂಧ ನಿಯಮ ಉಲ್ಲಂಘಿಸುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವ ಎಚ್ಚರಿಕೆ ನೀಡಿದರು.

ನಿಯಮ‌ ಪ್ರಕಾರ ನಿವೇಶನ ಹಂಚಿಕೆಯಾದ ಒಂದು ತಿಂಗಳಲ್ಲಿ ಶೇಕಡ 30ರಷ್ಟು ಹಣವನ್ನು ಪಾವತಿಸಬೇಕು. ಒಂದು ವೇಳೆ ಕಟ್ಟದಿದ್ದಲ್ಲಿ ಕೋರಿಕೆಯ ಮೇರೆಗೆ ಶೇಕಡ 10ರಷ್ಟು ಬಡ್ಡಿಯೊಂದಿಗೆ ಮತ್ತೊಂದು ತಿಂಗಳು ಕಾಲಾವಕಾಶ ಕೊಡಲಾಗುವುದು. ಅದರ ನಂತರವೂ ಕಟ್ಟದಿದ್ದರೆ ಹಂಚಿಕೆಯನ್ನೇ ರದ್ದುಪಡಿಸಬೇಕು ಎಂದು ಅವರು ಅಧಿಕಾರಿಗಳಿಗೆ ಕಟ್ಟಾಜ್ಣೆ ಮಾಡಿದ್ದಾರೆ.

ಕೈಗಾರಿಕಾ ನಿವೇಶನಗಳಿಗೆ ಭಾರೀ ಬೇಡಿಕೆಯ ಒತ್ತಡವಿದೆ. ಈ ವಿಚಾರದಲ್ಲಿ ಕೆಐಎಡಿಬಿ ನಿಯಮಾವಳಿಗಳು ಸ್ಪಷ್ಟವಾಗಿವೆ. ಈ ವಿಷಯದಲ್ಲಿ ಅಧಿಕಾರಿಗಳು ಉದಾಸೀನ ಪ್ರದರ್ಶಿಸುತ್ತಿರುವುದು ತಮಗೆ ಅಸಮಾಧಾನ ತಂದಿದೆ ಎಂದು ಅವರು ವಿವರಿಸಿದ್ದಾರೆ.

ನಿವೇಶನ ಮಂಜೂರು ಮಾಡಿದ ಮೇಲೆ ಮುಂದಿನ ಕೆಲಸಗಳು ತ್ವರಿತವಾಗಿ ನಡೆಯಬೇಕು. ಆ ಜಾಗಗಳನ್ನು ಬಹುಕಾಲ ಹಾಗೆಯೇ ಖಾಲಿ ಬಿಟ್ಟುಕೊಂಡು ಕೂರುವುದರಲ್ಲಿ ಅರ್ಥವಿಲ್ಲ. ಇದನ್ನು ಹೂಡಿಕೆದಾರರು ಕೂಡ ಅರಿತಿರಬೇಕು. ಇಂಥ ಪ್ರಕರಣಗಳು ಕಂಡುಬಂದಲ್ಲಿ ನಿವೇಶನ ಹಿಂದಕ್ಕೆ ಪಡೆದುಕೊಂಡು, ನಿಗದಿತ ಮೊತ್ತ ಪಾವತಿಸುವ ಸಾಮರ್ಥ್ಯ ಇರುವವರಿಗೆ ಅವುಗಳನ್ನು ಮಂಜೂರು ಮಾಡಬೇಕು ಎಂದು ಅವರು ಕಟ್ಟುನಿಟ್ಟಾಗಿ ಹೇಳಿದ್ದಾರೆ.

ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಖುಷ್ಬೂ ಗೋಯಲ್, ಸಿಇಒ ಗೋವಿಂದ ರೆಡ್ಡಿ, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಉಪಸ್ಥಿತರಿದ್ದರು.

Comments

Leave a Comment

Prev Post ಸ್ಟಿಂಗ್ ಆಪರೇಷನ್‌; ಸಿಬಿಐ ತನಿಖೆಗೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ
Next Post ಸಮತಳ ಮೀಸಲಾತಿ ಜಾರಿಗೆ ಹೊಸ ರೂಪ: ಪರಿಷ್ಕೃತ 100 ಬಿಂದುಗಳ ರೋಸ್ಟರ್ ಪ್ರಕಟ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News