ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ರಾಜ್ಯ ಸಂಚಾಲಕರಾಗಿ ಲುಕ್ಮಾನ್ ಬಂಟ್ವಾಳ ನೇಮಕ
ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ರಾಜ್ಯ ಸಂಚಾಲಕರಾಗಿ ಲುಕ್ಮಾನ್ ಬಂಟ್ವಾಳ ನೇಮಕ
ಮಂಗಳೂರು, ಅ.15: ಲೋಕಸಭೆಯ ವಿಪಕ್ಷ ನಾಯಕ ಹಾಗೂ ಎಐಸಿಸಿ ಮುಖಂಡ ರಾಹುಲ್ ಗಾಂಧಿ ಅವರ ಮಹತ್ವಾಕಾಂಕ್ಷಿ ಸಂಘಟನೆಗಳಲ್ಲಿ ಒಂದಾದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ (ಆರ್ಜಿಪಿಆರ್ಎಸ್)ಯ ರಾಜ್ಯ ಸಂಚಾಲಕರಾಗಿ ಯುವ ಕಾಂಗ್ರೆಸ್ ಮುಖಂಡ ಲುಕ್ಮಾನ್ ಬಂಟ್ವಾಳರನ್ನು ನೇಮಕಗೊಳಿಸಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ರ ಶಿಫಾರಸ್ಸಿನ ಮೇರೆಗೆ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯ ಅನುಮೋದನೆಯೊಂದಿಗೆ ಲುಕ್ಮಾನ್ ಬಂಟ್ವಾಳ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ರಾಜ್ಯ ಸಂಚಾಲಕರಾಗಿ ನೇಮಕಗೊಳಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.
ಲುಕ್ಮಾನ್ ಬಂಟ್ವಾಳ ಅವರು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಬಂಟ್ವಾಳ ಪುರಸಭೆಯ ನಿಕಟಪೂರ್ವ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.
ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯು (Rajiv Gandhi Panchayati Raj Sangathan - RGPRS) ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಒಂದು ಪ್ರಮುಖ ಸಂಘಟನೆಯಾಗಿದೆ. ಗ್ರಾಮೀಣ ಸ್ಥಳೀಯಾಡಳಿ ಸಂಸ್ಥೆಗಳು (ಪಂಚಾಯತ್ ರಾಜ್ ವ್ಯವಸ್ಥೆ) ಮತ್ತು ಚುನಾಯಿತ ಜನಪ್ರತಿನಿಧಿಗಳ ನಡುವೆ ಪಕ್ಷದ ಸಂಪರ್ಕ ಸಾಧಿಸುವುದು ಈ ಸಂಘಟನೆಯ ಮುಖ್ಯ ಉದ್ದೇಶವಾಗಿದೆ. ಸಂವಿಧಾನದ 73 ಮತ್ತು 74ನೇ ತಿದ್ದುಪಡಿಗಳ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಸ್ಥಳೀಯ ಸ್ವ-ರಾಜ್ಯವನ್ನು ಉತ್ತೇಜಿಸುವುದು ಕೂಡ ಇದರ ಪ್ರಮುಖ ಉದ್ದೇಶಗಳಲ್ಲಿ ಸೇರಿದೆ.
*ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಪಕ್ಷವನ್ನು ತಳಮಟ್ಟದಲ್ಲಿ ಸಂಘಟಿಸುವ ನಿಟ್ಟಿನಲ್ಲಿ ಆರ್ಜಿಪಿಆರ್ಎಸ್ಗೆ ವಿಶೇಷ ಗಮನ ನೀಡುತ್ತಿದ್ದಾರೆ. ಅದರಂತೆ ನನ್ನ ಮೇಲೆ ವಿಶ್ವಾಸ ತಾಳಿ ಈ ಜವಾಬ್ದಾರಿಯನ್ನು ವಹಿಸಿಕೊಟ್ಟಿದ್ದಾರೆ. ಅದನ್ನು ನಿಭಾಯಿಸುವಲ್ಲಿ ಶಕ್ತಿ ಮೀರಿ ಪ್ರಯತ್ನಿಸುವೆ. ನನ್ನ ಆಯ್ಕೆಗೆ ಸಹಕರಿಸಿದ ಪಕ್ಷದ ಮುಖಂಡರಿಗೆ ವಿಶೇಷವಾಗಿ ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ಗೆ ನಾನು ಅಭಾರಿಯಾಗಿರುವೆ ಎಂದು ಲುಕ್ಮಾನ್ ಬಂಟ್ವಾಳ ಪ್ರತಿಕ್ರಿಯಿಸಿದ್ದಾರೆ.







Comments
Leave a Comment