ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಂದ ಮೊಬೈಲ್ ಮೂಲಕ ಸ್ವಯಂ ಗಣತಿ ದಾಖಲಾತಿ

:

Font size:

ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಂದ ಮೊಬೈಲ್ ಮೂಲಕ ಸ್ವಯಂ ಗಣತಿ ದಾಖಲಾತಿ

ಬೆಂಗಳೂರು, ಏ. 1 -
ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ಜನ ಗಣತಿ 2027ರ ಅಂಗವಾಗಿ ಸ್ವಯಂ ಗಣತಿ ವ್ಯವಸ್ಥೆ ಪರಿಚಯಿಸಿದ್ದು, ಇಂದು ಬುಧವಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ತಮ್ಮ ಮೊಬೈಲ್ ಮೂಲಕ ಸ್ವಯಂ ಗಣತಿ ದಾಖಲಾತಿ ಪೂರ್ಣಗೊಳಿಸಿದರು.

2026 ರ ಏಪ್ರಿಲ್ 1 ರಿಂದ 15 ರವರೆಗೆ ಎಲ್ಲಾ ನಾಗರಿಕರು ಅಧಿಕೃತ ಪೋರ್ಟಲ್ se.census.gov.in ಮೂಲಕ ತಮ್ಮ ಮಾಹಿತಿಯನ್ನು ಆನ್ಲೈನ್ನಲ್ಲಿ ದಾಖಲಿಸಿಕೊಳ್ಳಬೇಕೆಂದು ಅವರು ತಿಳಿಸಿದರು.

ನಮ್ಮ ಜನಗಣತಿ - ನಮ್ಮ ಅಭಿವೃದ್ಧಿ ಎಂಬ ಧ್ಯೇಯ ವಾಕ್ಯದೊಂದಿಗೆ ಸರ್ಕಾರ ಜನಗಣತಿ 2027 ಹಮ್ಮಿಕೊಂಡಿದ್ದು, ಇದರ ಅಂಗವಾಗಿ ಸರ್ಕಾರ ಸ್ವಯಂ ಗಣತಿ ವ್ಯವಸ್ಥೆಯನ್ನು ಪರಿಚಯಿಸಿದೆ.ಈ ಪ್ರಕ್ರಿಯೆ ಸರಳ ಮತ್ತು ಸುರಕ್ಷಿತವಾಗಿದೆ ಎಂದರು.

ಮೊಬೈಲ್ ಸಂಖ್ಯೆ ಮತ್ತು OTP ಮೂಲಕ ಸುಲಭವಾಗಿ 5 ರಿಂದ 10 ನಿಮಿಷಗಳಲ್ಲಿ ಸ್ವಯಂ ಗಣತಿ ಪೂರ್ಣಗೊಳಿಸಬಹುದಾಗಿದೆ ಎಂದು ತಮ್ಮ ಅನುಭವ ಹಂಚಿಕೊಳ್ಳುತ್ತಾ, ಪ್ರಕ್ರಿಯೆ ಪೂರ್ಣಗೊಂಡ ನಂತರ ನಿಮ್ಮ ಅರ್ಜಿಯ ಸಂಖ್ಯೆ ದೊರೆಯುವುದು. ಈ ಸಂಖ್ಯೆಯನ್ನು ಏಪ್ರಿಲ್ 16 ರಿಂದ ಮೇ 15 ರವರೆಗೆ ಮನೆಮನೆಗೆ ಭೇಟಿ ನೀಡುವ ಗಣತಿದಾರರಿಗೆ ನೀಡಿದಲ್ಲಿ, ಗಣತಿದಾರರು ಸ್ವಲ್ಪ ಸಮಯದಲ್ಲಿ ಗಣತಿ ಪೂರ್ಣಗೊಳಿಸಲು ಹಾಗೂ ಯಾವುದಾದರೂ ತಿದ್ದುಪಡಿ ಇದ್ದಲ್ಲಿ ಮಾಡಿಕೊಳ್ಳಬಹುದಾಗಿದೆ ಎಂದ ಅವರು, ಒಂದು ವೇಳೆ ಮೊಬೈಲ್ ಅಥವಾ ಕಂಪ್ಯೂಟರ್ ಇಲ್ಲದಿದ್ದಲ್ಲಿ ಸಮೀಪದ ಕಂಪ್ಯೂಟರ್ ಕೇಂದ್ರಗಳಿಂದ ಅಥವಾ ಸ್ನೇಹಿತರ ಮೊಬೈಲಿನಿಂದ ಮಾಹಿತಿ ಸಲ್ಲಿಸಿ ನೋಂದಣಿ ಸಂಖ್ಯೆಯನ್ನು ಪಡೆಯಬೇಕು ಎಂದು ಹೇಳಿದರು.

ಜನಗಣತಿ ನಮ್ಮ ರಾಜ್ಯ ಮತ್ತು ದೇಶದ ಭವಿಷ್ಯ ರೂಪಿಸುವ ಮಹತ್ವದ ಕಾರ್ಯ. ಇದು ದತ್ತಾಂಶ ಆಧಾರಿತ ನಿರ್ಧಾರಗಳಿಗೆ ಸಹಾಯ ಮಾಡುತ್ತದೆ. ಆರೋಗ್ಯ, ಶಿಕ್ಷಣ, ವಸತಿ ಮತ್ತು ಮೂಲಸೌಕರ್ಯ ಕ್ಷೇತ್ರಗಳಲ್ಲಿ ಸಮರ್ಪಕ ಸಂಪನ್ಮೂಲ ಹಂಚಿಕೆಗೆ ದಾರಿ ತೋರುತ್ತದೆ. ನಿಮ್ಮ ಭಾಗವಹಿಸುವಿಕೆ ಅತ್ಯಂತ ಮುಖ್ಯ. ಇದು ಕೇವಲ ಕರ್ತವ್ಯವಲ್ಲ— ಕರ್ನಾಟಕದ ಅಭಿವೃದ್ಧಿಗೆ ನಿಮ್ಮ ಕೊಡುಗೆಯಾಗಿದೆ. ಇಂದು ನೀಡುವ ನಿಖರ ಮಾಹಿತಿ, ನಾಳೆಯ ಉತ್ತಮ ನೀತಿಗಳು ಮತ್ತು ಸೇವೆಗಳಿಗೆ ಆಧಾರ ವಾಗುತ್ತದೆ. ಜನಗಣತಿಯಿಂದ ಯಾರು ಬಿಟ್ಟು ಹೋಗದಂತೆ ಸರ್ಕಾರ ಮುತುವರ್ಜಿ ವಹಿಸಿದೆ. ನಿಗದಿತ ಅವಧಿಯಲ್ಲಿ ಸ್ವಯಂ ಗಣತಿಯನ್ನು ಪೂರ್ಣಗೊಳಿಸಿ, ಜನಗಣತಿ 2027 ಅನ್ನು ಯಶಸ್ವಿಗೊಳಿಸಲು ನಾವು ಎಲ್ಲರೂ ಕೈಜೋಡಿಸೋಣ ಎಂದು ನಾಗರಿಕರಲ್ಲಿ ಮನವಿ ಮಾಡಿದ್ದಾರೆ.

ಇದೇ ವೇಳೆ, ಜನಗಣತಿ ನಿರ್ದೇಶಕ ರಾಮಚಂದ್ರನ್ ಅವರು ಮುಖ್ಯ ಕಾರ್ಯದರ್ಶಿಗಳಿಗೆ ಸ್ವಯಂ ಗಣತಿ ವ್ಯವಸ್ಥೆಯ ಬಗ್ಗೆ ವಿವರವಾದ ಮಾಹಿತಿ ನೀಡಿದರು.

Comments

Leave a Comment

Prev Post ಜನರಿಗೆ ರಾಜ್ಯದ ಆರ್ಥಿಕ ಪರಿಸ್ಥಿತಿಯ ನೈಜ ಚಿತ್ರಣ ತಿಳಿಸಲು ಬಿ.ವೈ.ವಿಜಯೇಂದ್ರ ಆಗ್ರಹ
Next Post ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಆತ್ಮೀಯ ಬೀಳ್ಕೊಡುಗೆ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News