PRABHAVAA.COM

ಜೇವರ್ಗಿ–ರಾಯಚೂರು ಭಾಗದ ಕುಡಿಯುವ ನೀರು ಹಾಗೂ ಕೊನೆಯಂಚಿನ ರೈತರಿಗೆ ಆದ್ಯತೆ ನೀಡಿ: ಸಚಿವ ಡಾ. ಅಜಯ್ ಧರ್ಮಸಿಂಗ್

Bengaluru Urban:

Font size:

- ಜೇವರ್ಗಿ ವಿಧಾನಸಭಾ ಕ್ಷೇತ್ರಕ್ಕೆ ಬೇಸಿಗೆವರೆಗೆ 2.5 ಟಿಎಂಸಿ ನೀರು ಕಾಯ್ದಿರಿಸಲು ಬೇಡಿಕೆ

- ರಾಯಚೂರು ನಗರದ ಕುಡಿಯುವ ನೀರಿಗೆ 3 ಟಿಎಂಸಿ ನೀರು ಮೀಸಲಿಡುವಂತೆ ಒತ್ತಾಯ
- JBC, IBC, MBC ಕಾಲುವೆಗಳ ಕೊನೆಯ ಭಾಗಕ್ಕೆ ನೀರು ತಲುಪಿಸಲು ಹಾಗೂ ಹಳೆಯ ಕಾಲುವೆಗಳ ಆಧುನೀಕರಣಕ್ಕೆ ಒತ್ತು

ಬೆಂಗಳೂರು, ಅಕ್ಟೋಬರ್ 16: ಕೃಷ್ಣಾ ಮೇಲ್ದಂಡೆ ಯೋಜನೆಯ 2026–27ನೇ ಸಾಲಿನ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಜೇವರ್ಗಿ ವಿಧಾನಸಭಾ ಕ್ಷೇತ್ರ ಹಾಗೂ ರಾಯಚೂರು ಜಿಲ್ಲೆಯ ಕುಡಿಯುವ ನೀರಿನ ಅಗತ್ಯತೆ ಮತ್ತು ಕೊನೆಯಂಚಿನ ರೈತರಿಗೆ ನೀರು ತಲುಪಿಸುವುದಕ್ಕೆ ವಿಶೇಷ ಆದ್ಯತೆ ನೀಡಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಅಜಯ್ ಧರ್ಮಸಿಂಗ್ ಒತ್ತಾಯಿಸಿದರು.

ವಿಕಾಸಸೌಧದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳ ನೀರಿನ ಲಭ್ಯತೆ, ಮುಂಗಾರು ಅವಧಿಯ ಬಾಕಿ ನೀರು ಬಿಡುಗಡೆ, ಹಿಂಗಾರು ಹಂಗಾಮು ಹಾಗೂ ಬೇಸಿಗೆಯ ಕುಡಿಯುವ ನೀರಿನ ಅಗತ್ಯತೆ ಕುರಿತು ಚರ್ಚಿಸಲಾಯಿತು.

ಜೇವರ್ಗಿ ವಿಧಾನಸಭಾ ಕ್ಷೇತ್ರದ JBC, IBC ಹಾಗೂ MBC ಕಾಲುವೆಗಳ ಕೊನೆಯ ಭಾಗದ ಹಲವು ಗ್ರಾಮಗಳಿಗೆ ಸಮರ್ಪಕವಾಗಿ ನೀರು ತಲುಪದಿರುವುದರಿಂದ ಜನರು ಹಾಗೂ ಜಾನುವಾರುಗಳಿಗೆ ತೊಂದರೆ ಉಂಟಾಗಿದೆ ಎಂದು ಸಚಿವರು ಸಭೆಯ ಗಮನಕ್ಕೆ ತಂದರು. ಈ ಹಿನ್ನೆಲೆಯಲ್ಲಿ, ಮುಂಬರುವ ಬೇಸಿಗೆವರೆಗೆ ಜೇವರ್ಗಿ ವಿಧಾನಸಭಾ ಕ್ಷೇತ್ರದ ಕುಡಿಯುವ ನೀರು ಹಾಗೂ ಅಗತ್ಯ ಬಳಕೆಗಾಗಿ 2.5 ಟಿಎಂಸಿ ನೀರು ಕಾಯ್ದಿರಿಸುವಂತೆ ಅವರು ಬೇಡಿಕೆ ಇಟ್ಟರು.

ಜೇವರ್ಗಿ ಶಾಖಾ ಕಾಲುವೆಯ ಕಿ.ಮೀ. 40ರಿಂದ 86.36ರವರೆಗಿನ ವ್ಯಾಪ್ತಿಯಲ್ಲಿ 50,425 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶವಿದ್ದು, ಈ ಭಾಗಕ್ಕೆ ವಿನ್ಯಾಸದ ಪ್ರಕಾರ 1,033 ಕ್ಯೂಸೆಕ್ಸ್ ನೀರಿನ ಹರಿವು ಅಗತ್ಯವಿದೆ. ಪ್ರಸ್ತುತ ಸುಮಾರು 500 ಕ್ಯೂಸೆಕ್ಸ್ ಮಾತ್ರ ಹರಿಯುತ್ತಿದ್ದು, ಸುಮಾರು 533 ಕ್ಯೂಸೆಕ್ಸ್ ಕೊರತೆ ಇರುವುದನ್ನು ಸಚಿವರು ಪ್ರಸ್ತಾಪಿಸಿದರು.

ಜೇವರ್ಗಿ ಮತ್ತು ಮುದಬಾಳ ಶಾಖಾ ಕಾಲುವೆಗಳು 25–30 ವರ್ಷ ಹಳೆಯದಾಗಿದ್ದು, ಸೋರಿಕೆ ಮತ್ತು ನೀರಿನ ನಷ್ಟ ಕಂಡುಬರುತ್ತಿರುವುದರಿಂದ ಬಾಕಿ ಇರುವ ಕಾಲುವೆ ನವೀಕರಣ (ERM) ಕಾಮಗಾರಿಗಳನ್ನು ಆದ್ಯತೆಯಿಂದ ಕೈಗೆತ್ತಿಕೊಳ್ಳಬೇಕು ಎಂದು ಒತ್ತಾಯಿಸಿದರು. ಕೆಂಬಾವಿ ಹೆಡ್ ರೆಗುಲೇಟರ್ ಬಳಿಯ ತಡೆಗೋಡೆಯಿಂದ ನೀರಿನ ಹರಿವಿನ ಮೇಲೆ ಆಗುತ್ತಿರುವ ಪರಿಣಾಮವನ್ನೂ ತಾಂತ್ರಿಕವಾಗಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ರಾಯಚೂರು ನಗರದ ಕುಡಿಯುವ ನೀರಿಗೆ 3 ಟಿಎಂಸಿ

ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಡಾ. ಅಜಯ್ ಧರ್ಮಸಿಂಗ್, ಮುಂಬರುವ ಬೇಸಿಗೆಯಲ್ಲಿ ರಾಯಚೂರು ನಗರದ ಕುಡಿಯುವ ನೀರಿನ ಬೇಡಿಕೆಯನ್ನು ಸಮರ್ಪಕವಾಗಿ ಪೂರೈಸಲು 3 ಟಿಎಂಸಿ ನೀರನ್ನು ಈಗಿನಿಂದಲೇ ಕಾಯ್ದಿರಿಸಬೇಕು ಎಂದು ಸಭೆಯಲ್ಲಿ ಒತ್ತಾಯಿಸಿದರು. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದ ನಂತರ ಕ್ರಮ ಕೈಗೊಳ್ಳುವುದಕ್ಕಿಂತ ಮುಂಚಿತವಾಗಿಯೇ ನೀರಿನ ಲಭ್ಯತೆ ಮತ್ತು ಸಂಗ್ರಹಣೆಯನ್ನು ಯೋಜಿಸಬೇಕು ಎಂದು ಹೇಳಿದರು.

ಇದರ ಜೊತೆಗೆ, ರಾಯಚೂರು ಜಿಲ್ಲೆಯ ದೇವದುರ್ಗ ಭಾಗದ ನಾರಾಯಣಪುರ ಬಲದಂಡೆ ಕಾಲುವೆಯ ಕೊನೆಯಂಚಿನ ರೈತರಿಗೆ ಸಮರ್ಪಕವಾಗಿ ನೀರು ತಲುಪುವಂತೆ ಗೇಟ್‌ಗಳ ಕಾರ್ಯಾಚರಣೆ ಮತ್ತು ಗೇಜ್ ನಿರ್ವಹಣೆಯನ್ನು ಕಟ್ಟುನಿಟ್ಟಾಗಿ ಕೈಗೊಳ್ಳಬೇಕು ಎಂದು ಸೂಚಿಸಿದರು. ವಿತರಣಾ ಕಾಲುವೆ 1ರಿಂದ 14ರವರೆಗೆ ನಡೆಯುತ್ತಿರುವ SCADA ಗೇಟ್ ಅಳವಡಿಕೆಯ ಮೊದಲ ಹಂತದ ಜೊತೆಗೆ, 15ರಿಂದ 18ರವರೆಗಿನ ಎರಡನೇ ಹಂತದ SCADA ಕಾಮಗಾರಿಯನ್ನೂ ತ್ವರಿತವಾಗಿ ಕೈಗೆತ್ತಿಕೊಳ್ಳಬೇಕು ಎಂದು ಒತ್ತಾಯಿಸಿದರು. ಇದರಿಂದ ನೀರಿನ ವೈಜ್ಞಾನಿಕ ಹಂಚಿಕೆ, ನೀರಿನ ಉಳಿತಾಯ ಹಾಗೂ ಕೊನೆಯಂಚಿನ ರೈತರಿಗೆ ಸಮರ್ಪಕ ಪೂರೈಕೆ ಸಾಧ್ಯವಾಗಲಿದೆ ಎಂದರು.

ಸಭೆಯ ಪ್ರಮುಖ ನಿರ್ಧಾರಗಳು
ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಲ್ಲಿ ಒಟ್ಟು 85.61 ಟಿಎಂಸಿ ಜೀವಜಲ ಲಭ್ಯವಿರುವ ಹಿನ್ನೆಲೆಯಲ್ಲಿ, ಈಗ ನಡೆಯುತ್ತಿರುವ ನೀರು ಬಿಡುಗಡೆಯನ್ನು ಅಕ್ಟೋಬರ್ 25ರವರೆಗೆ ವಿಸ್ತರಿಸಿ, ಅಕ್ಟೋಬರ್ 26ರಿಂದ ನವೆಂಬರ್ 2ರವರೆಗೆ ಕಾಲುವೆ ಬಂದ್ ಮಾಡಿ, ನವೆಂಬರ್ 3ರಿಂದ 12ರವರೆಗೆ ಮತ್ತೆ 10 ದಿನ ನೀರು ಹರಿಸಲು ನಿರ್ಧರಿಸಲಾಯಿತು.

ಹಿಂಗಾರು ಹಂಗಾಮಿಗೆ ಅಗತ್ಯವಿರುವಷ್ಟು ನೀರು ಲಭ್ಯವಿಲ್ಲದ ಕಾರಣ ಹಿಂಗಾರು ನೀರಾವರಿ ಪೂರೈಕೆ ಸಾಧ್ಯವಿಲ್ಲ ಎಂದು ಸಭೆ ತೀರ್ಮಾನಿಸಿದ್ದು, ಲಭ್ಯ ನೀರನ್ನು ಕುಡಿಯುವ ನೀರು, ಕೆರೆ ತುಂಬಿಸುವಿಕೆ ಹಾಗೂ ಇತರೆ ಅಗತ್ಯ ಬಳಕೆಗಳಿಗೆ ಕಾಯ್ದಿರಿಸಲು ನಿರ್ಧರಿಸಲಾಯಿತು. ಕೊನೆಯಂಚಿನ ರೈತರಿಗೆ ನೀರು ತಲುಪಲು ಅನಧಿಕೃತ ನೀರು ಎತ್ತುವಿಕೆಯನ್ನು ತಡೆಯಲು ಸಂಬಂಧಪಟ್ಟ ಇಲಾಖೆಗಳ ಸಮನ್ವಯದಲ್ಲಿ ನಿಗಾ ವಹಿಸಲು ಸೂಚಿಸಲಾಯಿತು.

“ಲಭ್ಯವಿರುವ ನೀರಿನ ಪ್ರತಿಯೊಂದು ಹನಿಯನ್ನೂ ಸಮರ್ಪಕವಾಗಿ ಬಳಸಬೇಕು. ಜೇವರ್ಗಿ ಮತ್ತು ರಾಯಚೂರು ಭಾಗದ ಜನರು, ಜಾನುವಾರುಗಳು ಹಾಗೂ ಕೊನೆಯಂಚಿನ ರೈತರಿಗೆ ಅಗತ್ಯ ನೀರು ತಲುಪಿಸುವುದು ನಮ್ಮ ಆದ್ಯತೆ. ಹಳೆಯ ಕಾಲುವೆಗಳ ಆಧುನೀಕರಣ ಹಾಗೂ ತಂತ್ರಜ್ಞಾನ ಆಧಾರಿತ ನೀರು ನಿರ್ವಹಣೆಯ ಮೂಲಕ ನೀರಿನ ಬಳಕೆಯ ದಕ್ಷತೆಯನ್ನು ಹೆಚ್ಚಿಸಬೇಕು,” ಎಂದು ಡಾ. ಅಜಯ್ ಧರ್ಮಸಿಂಗ್ ಹೇಳಿದರು.

ಸಭೆಯಲ್ಲಿ ಸಚಿವರಾದ ಎಂ.ಬಿ. ಪಾಟೀಲ್, ಡಾ. ಶರಣಪ್ರಕಾಶ್ ಪಾಟೀಲ್, ಮಾಜಿ ಸಚಿವ ಶರಣಬಸಪ್ಪ ದರ್ಶನಾಪುರ, ಸಂಸದ ಕುಮಾರ್ ನಾಯಕ್, ಶಾಸಕರಾದ ಉಮೇಶ್ ಮೇಟಿ, ಜೆ.ಟಿ. ಪಾಟೀಲ್, ಜಗದೀಶ್ ಗುಡಗುಂಟಿ, ಇತರೆ ಜನಪ್ರತಿನಿಧಿಗಳು ಹಾಗೂ ಕೃಷ್ಣ ಭಾಗ್ಯ ಜಲ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.

Comments

Leave a Comment

Prev Post ​ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ
Next Post ನವರಾತ್ರಿ ಸಂಭ್ರಮ: ಕಂಗ್ರಾಳಿ ಕೆ.ಎಚ್. ಮತ್ತು ಹಿಂಡಲಗಾದಲ್ಲಿ ದೇವಿಯ ವಿಶೇಷ ಪೂಜೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಭಾಗಿ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News