PRABHAVAA.COM

ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆಂಬ ಅಪನಂಬಿಕೆ ಬೇಡ: ಸಿಎಂ ಡಿ ಕೆ ಶಿವಕುಮಾರ್

Chamarajanagara:

Font size:

ಬುದ್ಧನ ಸಂದೇಶದಂತೆ ಮಾನವೀಯತೆ, ಶಾಂತಿ ಮತ್ತು ಅಭಿವೃದ್ಧಿಗೆ ಆದ್ಯತೆ

ಚಾಮರಾಜನಗರ, ಅ.25:

“ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಅಪನಂಬಿಕೆ ಬೇಡ. ನಾವು ಪರಿಶುದ್ಧವಾಗಿ ಪ್ರಾರ್ಥನೆ, ನಂಬಿಕೆಯಿಂದ ನಡೆಯುವುದು ಮುಖ್ಯ. ನಾವು ಯಾವುದೇ ತಪ್ಪು ಮಾಡದೇ ದೇವರ ಬಳಿ ಒಳ್ಳೆಯದನ್ನೇ ಪ್ರಾರ್ಥಿಸುತ್ತೇವೆ” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದರು.

ಚಾಮರಾಜನಗರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.

“ಸಿದ್ದರಾಮಯ್ಯ ಅವರು ಎಂಟು ವರ್ಷಗಳ ಕಾಲ ಅಧಿಕಾರದಲ್ಲಿ ಇದ್ದಾಗ ಚಾಮರಾಜನಗರಕ್ಕೆ ಭೇಟಿ ನೀಡುತ್ತಿದ್ದರು. ಅವರು ಉತ್ತಮ ಆಡಳಿತವನ್ನೂ ನಡೆಸಿದ್ದಾರೆ. ಹೀಗಿರುವಾಗ ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮಾತಿಗೆ ಅರ್ಥವಿಲ್ಲ” ಎಂದು ತಿಳಿಸಿದರು.

“ನಾವು ಇಲ್ಲಿ ಅಭಿವೃದ್ಧಿ ಮತ್ತು ಪ್ರಗತಿಗಾಗಿ ಪ್ರಾರ್ಥಿಸಲು ಬಂದಿದ್ದೇವೆ. ಬುದ್ಧನ ಆಚಾರ-ವಿಚಾರಗಳನ್ನು ಸ್ಮರಿಸಿ, ಅವರ ಸಂದೇಶವನ್ನು ಅರಿತುಕೊಳ್ಳುವುದು ನಮ್ಮ ಉದ್ದೇಶ. ಬುದ್ಧರು ಜಗತ್ತಿಗೆ ಮಾನವೀಯತೆ, ತ್ಯಾಗ, ಶಾಂತಿ ಮತ್ತು ಅಭಿವೃದ್ಧಿಯ ಮಹತ್ವದ ಸಂದೇಶ ನೀಡಿದ್ದಾರೆ. ಈ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಎಲ್ಲವನ್ನೂ ಅನುಮಾನದಿಂದ ನೋಡುವ ಮನೋಭಾವ ಬೇಡ” ಎಂದು ಹೇಳಿದರು.

ಸಿಎಂ ಡಿ ಕೆ ಶಿವಕುಮಾರ್ ಅವರು ಚಾಮರಾಜನಗರದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಅಂತರರಾಷ್ಟ್ರೀಯ ಬೌದ್ಧಮಹಾ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ಸಚಿವರಾದ ಕೆ ಎಚ್ ಮುನಿಯಪ್ಪ, ನರೇಂದ್ರಸ್ವಾಮಿ, ಪುಟ್ಟರಂಗಶೆಟ್ಟಿ, ಬೌದ್ಧ ಸಮ್ಮೇಳನದ ಅಧ್ಯಕ್ಷ, ಶಾಸಕ ಎ ಆರ್ ಕೃಷ್ಣಮೂರ್ತಿ, ದರ್ಶನ್ ಧ್ರುವನಾರಾಯಣ್, ಹೆಚ್ ಎಂ ಗಣೇಶ್ ಪ್ರಸಾದ್, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ನರೇಂದ್ರ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಹೆಚ್ ವಿ ಚಂದ್ರು, ಮಾಜಿ ಶಾಸಕ ನರೇಂದ್ರ, ಜಿ ಎಂ ನಂಜುಂಡಸ್ವಾಮಿ, ಕಳಲೆ ಕೇಶವಮೂರ್ತಿ, ಡಿ ಎಸ್ ವೀರಯ್ಯ, ಚೇತವನ ಬೌದ್ದ ವಿಹಾರದ ಮನೋ ರಕ್ಖಿತ ಬಂತೇಜಿ, ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Comments

Leave a Comment

Prev Post ನೃತ್ಯೋತ್ಸವ 2026ಕ್ಕೆ ಅದ್ಧೂರಿ ಚಾಲನೆ
Next Post ಗಣನೀಯ ಸಾಧಕರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಘೋಷಣೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News