PRABHAVAA.COM

ಆರೆಸ್ಸೆಸ್ ಬೃಹತ್ ಪಥ ಸಂಚಲನ: 10 ಸಾವಿರ ಸ್ವಯಂಸೇವಕರೊಂದಿಗೆ ಸಚಿವ ಪ್ರಲ್ಹಾದ ಜೋಶಿ ಭಾಗಿ

Dharwad:

Font size:

* ವಾಣಿಜ್ಯ ನಗರಿಯ ಪ್ರಮುಖ ರಸ್ತೆಗಳಲ್ಲಿ ಸ್ವಯಂಸೇವಕರ ನಡಿಗೆ

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವಿಜಯದಶಮಿ ನಿಮಿತ್ತ ಭಾನುವಾರ ಸಂಜೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಬೃಹತ್ ಪಥ ಸಂಚಲನ ನಡೆಯಿತು. ಸಹಸ್ರ ಸಹಸ್ರ ಸ್ವಯಂ ಸೇವಕರೊಂದಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರೂ ಭಾಗಿಯಾಗಿ ಆಕರ್ಷಿಸಿದರು.

ಪಥ ಸಂಚಲನದಲ್ಲಿ 10 ಸಾವಿರಕ್ಕೂ ಹೆಚ್ಚು ಸ್ವಯಂಸೇವಕರು ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಕರದಲ್ಲಿ ದಂಡ ಹಿಡಿದು ಶಿಸ್ತುಬದ್ಧವಾಗಿ ಸಾಗಿದ ಸ್ವಯಂಸೇವಕರು ಪ್ರಮುಖ ರಸ್ತೆಗಳಲ್ಲಿ ಆಕರ್ಷಕ ಪಥ ಸಂಚಲನ ನಡೆಸಿದರು.

ಆರ್‌ಎಸ್‌ಎಸ್‌ನ ಪ್ರಮುಖ ವಾರ್ಷಿಕ ಕಾರ್ಯಕ್ರಮಗಳಲ್ಲಿ ವಿಜಯದಶಮಿ ಉತ್ಸವವೂ ಒಂದಾಗಿದ್ದು, ಹುಬ್ಬಳ್ಳಿಯಲ್ಲಿ ಸಹಸ್ರಾರು ಸ್ವಯಂಸೇವಕರು ಭಾನುವಾರ ಸಂಜೆ ನೆಹರು ಮೈದಾನದಲ್ಲಿ ಸೇರಿ ಅಲ್ಲಿಂದಲೇ ಆಕರ್ಷಕ ಪಥ ಸಂಚಲನ ಆರಂಭಿಸಿದರು.

ಸಂಘದ ಶಿಸ್ತು, ಸಂಘಟನೆ ಹಾಗೂ ಸಾಮೂಹಿಕ ಕಾರ್ಯಚಟುವಟಿಕೆ ಪ್ರತಿಬಿಂಬಿಸುವ ರೀತಿಯಲ್ಲಿ ಸ್ವಯಂಸೇವಕರು ಶಾಂತಿ -ಸೌಹಾರ್ದದ ಪ್ರತೀಕವಾಗಿ ಪಥ ಸಂಚಲನ ನಡೆಸಿದ್ದು ವಿಶೇಷವಾಗಿತ್ತು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಆರೆಸ್ಸೆಸ್ ಪಥ ಸಂಚಲನದಲ್ಲಿ ಭಾಗವಹಿಸಿದ್ದು ಪ್ರಮುಖ ಆಕರ್ಷಣೆಯಾಗಿತ್ತು. ಸಚಿವರೊಂದಿಗೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಸೇರಿದಂತೆ ಪ್ರಮುಖರನೇಕರೂ ಉಪಸ್ಥಿತರಿದ್ದರು.

ಬಿಗಿ ಪೊಲೀಸ್ ಬಂದೋಬಸ್ತ್: ಪಥಸಂಚಲನದಲ್ಲಿ ಬೃಹತ್ ಸಂಖ್ಯೆಯಲ್ಲಿ ಸ್ವಯಂಸೇವಕರು ಪಾಲ್ಗೊಂಡ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು. ಪಥ ಸಂಚಲನ ಸಾಗುವ ಪ್ರಮುಖ ರಸ್ತೆಗಳಲ್ಲಿ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿತ್ತು.

Comments

Leave a Comment

Prev Post ಗಣನೀಯ ಸಾಧಕರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಘೋಷಣೆ
Next Post ಕರ್ನಾಟಕದಲ್ಲಿ "ತೇಗ ಸಿರಿ" ಯೋಜನೆ ಜಾರಿ:

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News